ಹನುಮ ಧ್ವಜ ವಿವಾದ: ಫೆಬ್ರವರಿ 9ಕ್ಕೆ ಮಂಡ್ಯ ಬಂದ್'ಗೆ ಕರೆ
ಲೋಕಸಭೆ ಚುನಾವಣೆಗೂ ಮುನ್ನ ಮಂಡ್ಯ ಜಿಲ್ಲೆಯಲ್ಲಿ ಹನುಮಧ್ವಜ ತೆರವುಗೊಳಿಸಿದ ವಿವಾದ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಫೆಬ್ರವರಿ 9ರಂದು ಮಂಡ್ಯ ಬಂದ್'ಗೆ ಕರೆ ನೀಡಲಾಗಿದೆ.

ಮಂಡ್ಯ: ಲೋಕಸಭೆ ಚುನಾವಣೆಗೂ ಮುನ್ನ ಮಂಡ್ಯ ಜಿಲ್ಲೆಯಲ್ಲಿ ಹನುಮಧ್ವಜ ತೆರವುಗೊಳಿಸಿದ ವಿವಾದ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಫೆಬ್ರವರಿ 9ರಂದು ಮಂಡ್ಯ ಬಂದ್'ಗೆ ಕರೆ ನೀಡಲಾಗಿದೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ವೇದಿಕೆಯ ಮುಖಂಡ ಎಂ.ಬಿ.ನಾಗಣ್ಣಗೌಡ ಅವರು, ಕ್ಷುಲ್ಲಕ ವಿಚಾರಗಳನ್ನು ಮುಂದಿಟ್ಟುಕೊಂಡು ಜಿಲ್ಲೆಯ ಹೋರಾಟ ಪರಂಪರೆಗೆ ಮಸಿ ಬಳಿಯುವ ಪ್ರಯತ್ನ ನಡೆದಿದೆ. ಜನರ ಶಾಂತಿ ಮತ್ತು ನೆಮ್ಮದಿ ಕೆಡಿಸುತ್ತಿರುವ ಶಕ್ತಿಗಳ ವಿರುದ್ಧ ಹೋರಾಡುವುದು ಅನಿವಾರ್ಯವಾಗಿದೆ. ಸಮಾನ ಮನಸ್ಕ ವೇದಿಕೆಯಡಿ ವಿವಿಧ ಸಂಘಟನೆಗಳು ಒಗ್ಗೂಡಿ ಮಂಡ್ಯ ನಗರ ಬಂದ್ ಮಾಡಲಾಗುವುದು ಎಂದು ಹೇಳಿದರು.
ಕಾನೂನು ಮುರಿಯುವ, ಶಾಂತಿ ಕದಡುವ ಶಕ್ತಿಗಳ ವಿರುದ್ಧ ಜಿಲ್ಲಾಡಳಿತ ಕ್ರಮ ಕೈಗೊಳ್ಳಬೇಕು. ಪಾದಯಾತ್ರೆ ನೆಪದಲ್ಲಿ ಕುರುಬ ಸಮುದಾಯದ ವಿದ್ಯಾರ್ಥಿ ನಿಲಯಕ್ಕೆ ನುಗ್ಗಿ ದಾಂಧಲೆ ನಡೆಸಿದ ಕಿಡಿಗೇಡಿಗಳನ್ನು ಬಂಧಿಸಬೇಕು. ಜಾತ್ಯತೀತ ತತ್ವ, ಶಾಂತಿ, ಸೌಹಾರ್ದ ಬಯಸುವ ಸಂಘಟನೆಗಳ ಮುಖಂಡರು ಸಾರ್ವಜನಿಕರು ಬಂದ್‌ನಲ್ಲಿ ಭಾಗವಹಿಸಲಿದ್ದಾರೆ’ ಎಂದು ತಿಳಿಸಿದರು.
ಈ ನಡುವೆ ಕೆರಗೋಡು ಗ್ರಾಮದಲ್ಲಿ ಬಿಜೆಪಿ ಮುಖಂಡರು ಸಭೆ ನಡೆಸಿ ಮುಂದಿನ ಕ್ರಮದ ಕುರಿತು ಚರ್ಚಿಸಿದರು. ಸಭೆಯ ಅಧ್ಯಕ್ಷತೆಯನ್ನು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಇಂದ್ರೇಶ್ ಕುಮಾರ್ ವಹಿಸಿದ್ದರು.
ಈ ಸಂರ್ಭದಲ್ಲಿ ಮಾತನಾಡಿದ ಬಿಜೆಪಿ ಮುಖಂಡ ಅಶೋಕ್ ಜಯರಾಂ ಅವರು, ಕೆರಗೋಡು ಗ್ರಾಮದಲ್ಲಿ 108 ಅಡಿ ಎತ್ತರದ ಧ್ವಜಸ್ತಂಭದಲ್ಲಿ ಮತ್ತೆ ಹನುಮಧ್ವಜ ಹಾರಿಸುವವರೆಗೂ ಪ್ರತಿಭಟನೆ ನಡೆಸಲಾಗುವುದು ಎಂದು ತಿಳಿಸಿದರು.
ಸರಕಾರ ಬೇರೆ ಜಿಲ್ಲೆಗಳಿಂದ ಪೊಲೀಸರನ್ನು ಕರೆತಂದು ಮಂಡ್ಯದಲ್ಲಿ ನಿಯೋಜಿಸುತ್ತಿದೆ. ಗ್ರಾಮದ ಮಹಿಳೆಯರು, ಮಕ್ಕಳು ಭಯಭೀತರಾಗಿದ್ದಾರೆ. ಸರಕಾರದ ವಿರುದ್ಧ ನಮ್ಮ ಹೋರಾಟ ಮುಂದುವರಿಯಲಿದೆ ಎಂದರು.
ಈ ನಡುವೆ ಪಾದಯಾತ್ರೆಯಲ್ಲಿ ಫ್ಲೆಕ್ಸ್ ಹರಿದ ಆರೋಪದ ಮೇಲೆ 9ನೇ ತರಗತಿ ವಿದ್ಯಾರ್ಥಿ ಹಾಗೂ ಆತನ ತಂದೆಯನ್ನು ಕೆರಗೋಡು ಪೊಲೀಸರು ಠಾಣೆಗೆ ಕರೆಸಿ, ವಿಚಾರಣೆ ನಡೆಸಿ ಕಳಿಸಿದರು. ಆ ವಿಚಾರ ತಿಳಿದ ಬಿಜೆಪಿ ಮುಖಂಡರು ಬಾಲಕನ ಮನೆಗೆ ಭೇಟಿ ನೀಡಿ ಸಮಾಧಾನ ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


