ರಾಜ್ಯ

ಉತ್ತರ ಕನ್ನಡ ಜಿಲ್ಲೆ ಭೀತಿ ಹುಟ್ಟಿಸಿದ ಮಂಗನ ಕಾಯಿಲೆ: 21 ಮಂದಿಯಲ್ಲಿ ಸೋಂಕು ಪತ್ತೆ!

ಉತ್ತರ ಕನ್ನಡ ಜಿಲ್ಲೆಯಲ್ಲಿ ಮಂಗನ ಕಾಯಿಲೆ ಆತಂಕ ಹುಟ್ಟಿಸಿದ್ದು, ಈ ವರೆಗೂ 21 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ ಎಂದು ತಿಳಿದುಬಂದಿದೆ.

ಉತ್ತರ ಕನ್ನಡ ಜಿಲ್ಲೆ ಭೀತಿ ಹುಟ್ಟಿಸಿದ ಮಂಗನ ಕಾಯಿಲೆ: 21 ಮಂದಿಯಲ್ಲಿ ಸೋಂಕು ಪತ್ತೆ!
ಸಂಗ್ರಹ ಚಿತ್ರ
Published On :

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಮಂಗನ ಕಾಯಿಲೆ ಆತಂಕ ಹುಟ್ಟಿಸಿದ್ದು, ಈ ವರೆಗೂ 21 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ ಎಂದು ತಿಳಿದುಬಂದಿದೆ.

ಸಿದ್ದಾಪುರ ತಾಲೂಕಿನಲ್ಲಿ ಮಂಗನ ಕಾಯಿಲೆ ಕಂಡು ಬರುತ್ತಿದೆ. ಬುಧವಾರ ಒಂದೇ ದಿನ 16 ಪ್ರಕರಣಗಳು ಪತ್ತೆಯಾಗಿದೆ. ಬಿಸಿಲು ಹೆಚ್ಚಾದಂತೆ ಕಾಯಿಲೆ ಹೆಚ್ಚಾಗುವ ಆತಂಕ ಜನರಲ್ಲಿ ಮನೆ ಮಾಡಿದೆ.

ಸೋಂಕು ಹರಡುವಿಕೆ ತಡೆಗೆ ಸದ್ಯ ರೋಗ ನಿರೋಧಕ ಲಸಿಕೆ ಇಲ್ಲ. ಹೀಗಾಗಿ ಮುನ್ನೆಚ್ಚರಿಕೆ ಕ್ರಮ ವಹಿಸಿಕೊಳ್ಳುವುದೊಂದೇ ದಾರಿ ಮತ್ತು ಅತೀ ಅವಶ್ಯಕ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ನೀರಜ್ ಅವರು ಹೇಳಿದ್ದಾರೆ.

ಮಂಗನ ಕಾಯಿಲೆ ಎಂಬುದು ಮಂಗಗಳಿಗೆ ಸೋಂಕು ತಗುಲಿಸುವ ವೈರಸ್‌ನಿಂದ ಉಂಟಾಗುವ ಕಾಯಿಲೆಯಾಗಿದೆ. ಕಾಡುಗಳಲ್ಲಿ ಜಾನುವಾರುಗಳನ್ನು ಮೇಯಿಸಲು ಹೋಗುವ ಜನರಿಗೆ ಸೋಂಕು ತಗುಲುವ ಸಾಧ್ಯತೆಗಳು ಹೆಚ್ಚಾಗಿರುತ್ತವೆ. ಒಣ ವಾತಾವರಣದಲ್ಲಿ ಈ ವೈರಲ್ ಗಳು ಬದುಕುಳಿಯುವ ಸಾಧ್ಯತೆಗಳು ಹೆಚ್ಚಾಗಿರುತ್ತವೆ. ಹೀಗಾಗಿ ರೋಗ ಉಲ್ಭಣಕ್ಕೆ ಬರ ಕೂಡ ಒಂದು ಕಾರಣವಾಗಿರಬಹುದು. ಆದರೆ, ಪರಿಸ್ಥಿತಿ ಎದುರಿಸಲು ನಾವು ಸನ್ನದ್ಧರಾಗಿದ್ದೇವೆಂದು ತಿಳಿಸಿದ್ದಾರೆ.

ಕಳೆದ ವರ್ಷ ಯಾವುದೇ ಪ್ರಕರಣಗಳು ಪತ್ತೆಯಾಗಿರಲಿಲ್ಲ. ಆದರೆ, ಇತ್ತೀಚಿನ ದಿನಗಳಲ್ಲಿ ಏಕಾಏಕಿ ಸೋಂಕು ಉಲ್ಭಣಗೊಳ್ಳುತ್ತಿದೆ. ವೈದ್ಯಕೀಯ ಸಿಬ್ಬಂದಿಗಳ ಅಲರ್ಟ್ ಆಗಿದ್ದು, ರೋಗ ಹರಡುವ ಸಾಧ್ಯತೆ ಇರುವ ಸ್ಥಳಗಳಲ್ಲಿ ನಾವು ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದೇವೆಂದು ಹೇಳಿದ್ದಾರೆ.

ಜೋಯಿಡಾ, ಕುಂಬಾರವಾಡ ಸುತ್ತಮುತ್ತಲಿನ ಸ್ಥಳಗಳು ಎಚ್ಚರಿಕೆ ವಹಿಸಲಾಗಿದೆ. ಸೋಂಕಿತರ ಸಾವು ಮತ್ತು ಸೋಂಕು ಪ್ರಕರಣಗಳ ಮೇಲೆ ನಿಗಾ ಇಡುವಂತ ಸಿಬ್ಬಂದಿಗಳಿಗೆ ಸೂಚಿಸಲಾಗಿದೆ. ಆಸ್ಪತ್ರೆಗಳಲ್ಲಿ ಸಮೀಕ್ಷೆ ನಡೆಸುವಂತೆ ಹಾಗೂ ಅಗತ್ಯ ಔಷಧಿಗಳ ಸಂಗ್ರಹಿಸುವಂತೆ ತಿಳಿಸಲಾಗಿದೆ. ಸೋಂಕು ಉಲ್ಭಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಜೀವನೋಪಾಯಕ್ಕಾಗಿ ಅರಣ್ಯವನ್ನು ಅವಲಂಬಿಸಿರುವ ಜನರು ಅರಣ್ಯ ಪ್ರದೇಶಗಳಿಗೆ ಹೋಗದಂತೆಯೂ ತಿಳಿಸಲಾಗಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿಗಳು ಹೇಳಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.