ಕರ್ತವ್ಯ ಲೋಪ: ಕಂದಾಯ ಇಲಾಖೆಯ 6 ಮಂದಿ ಅಧಿಕಾರಿಗಳು ಅಮಾನತು
ಕರ್ತವ್ಯ ಲೋಪ ಆರೋಪದಡಿ ಬೊಮ್ಮನಹಳ್ಳಿ ಬಿಬಿಎಂಪಿ ವಲಯದ ಆರು ಮಂದಿ ಕಂದಾಯ ಅಧಿಕಾರಿಗಳನ್ನು ಅಮಾನತು ಮಾಡಿ ಬಿಬಿಎಂಪಿ ವಿಶೇಷ ಆಯುಕ್ತ ಮುನೀಷ್ ಮುದ್ಗಿಲ್ ಆದೇಶ ಹೊರಡಿಸಿದ್ದಾರೆ.

ಬೆಂಗಳೂರು: ಕರ್ತವ್ಯ ಲೋಪ ಆರೋಪದಡಿ ಬೊಮ್ಮನಹಳ್ಳಿ ಬಿಬಿಎಂಪಿ ವಲಯದ ಆರು ಮಂದಿ ಕಂದಾಯ ಅಧಿಕಾರಿಗಳನ್ನು ಅಮಾನತು ಮಾಡಿ ಬಿಬಿಎಂಪಿ ವಿಶೇಷ ಆಯುಕ್ತ ಮುನೀಷ್ ಮುದ್ಗಿಲ್ ಆದೇಶ ಹೊರಡಿಸಿದ್ದಾರೆ.
ಬೊಮ್ಮನಹಳ್ಳಿ ವಲಯದಲ್ಲಿ ಆಸ್ತಿ ತೆರಿಗೆ ಸಂಬಂಧಿತ ಲೋಪಗಳ ಹಿನ್ನೆಲೆಯಲ್ಲಿ ಜಂಟಿ ಆಯುಕ್ತ ಅಜಿತ್ ಅವರಿಗೆ ಕಾರಣ ಕೇಳಿ ನೋಟಿಸ್ ಹಾಗೂ ಕಂದಾಯ ಉಪಆಯುಕ್ತ ಡಿಕೆ ಬಾಬು ಅವರ ವಿರುದ್ಧ ಇಲಾಖೆ ವಿಚಾರಣೆ ನಡೆಸುವಂತೆ ಸೂಚಿಸಿದ್ದಾರೆ.
ಜ.30 ರಂದು ಬೊಮ್ಮನಹಳ್ಳಿ ವಲಯದಲ್ಲಿ ಆಸ್ತಿ ತೆತಿಗೆ ಸಂಗ್ರಹ, ತೆರಿಗೆ ಬಾಕಿ, ಟಾಪ್ 50 ಅತಿ ಹೆಚ್ಚು ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡ ಗೃಹ ಹಾಗೂ ಗೃಹೇತರ ಕಟ್ಟಡಗಳ ಮಾಲೀಕರ ಆಸ್ತಿಗಳನ್ನು ಮುಟ್ಟುಗೋಲು ಹಾಗೂ ಬೀಗಮುದ್ರೆ ಹಾಕದ ಪ್ರಕರಣಗಳು ಪರಿಶೀಲನೆ ವೇಳೆ ಕಂಡು ಬಂದಿದ್ದವು.
ಈ ಹಿನ್ನೆಲೆಯಲ್ಲಿ ಜಂಟಿ ಆಯುಕ್ತರಿಗೆ ಕಾರಣ ಕೇಳಿ ನೋಟಿಸ್ ಜಾರಿ ಮಾಡಲು ಹಾಗೂ ಡಿಸಿ ಡಿಕೆ ಬಾಬು ಅವರ ವಿರುದ್ಧ ಇಲಾಖಾ ತನಿಖೆ ನಡೆಸುವಂತೆ ಸಂಬಂಧಿಸಿದವರಿಗೆ ಸೂಚನೆ ನೀಡಿದ್ದಾರೆ.
“ಡಿಸಿ ಡಿಕೆ ಬಾಬು ಕಳೆದ ಎರಡು ತಿಂಗಳಲ್ಲಿ ಟಾಪ್-50 ಗೃಹೇತರ ಕಟ್ಟಡಗಳಲ್ಲಿ ಒಂದು ಕಟ್ಟಡವನ್ನು ಸೀಲ್ ಮಾಡಿಲ್ಲ. ಅದೇ ರೀತಿ ಟಾಪ್ -50 ವಸತಿ ಕಟ್ಟಡಗಳಲ್ಲಿ ಒಂದು ಆಸ್ತಿಯನ್ನು ಅಟ್ಯಾಚ್ ಮೆಂಟ್ ಮಾಡಿಲ್ಲ. ಈ ಕುರಿತಂತೆ ಡಿಕೆ ಬಾಬು ವಿರುದ್ಧ ಇಲಾಖಾ ವಿಚಾರಣೆ ನಡೆಸಬೇಕಿದೆ” ಎಂದು ವರಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


