ಕಲಬುರಗಿ: ವರಸೆಯಲ್ಲಿ ಅಣ್ಣ-ತಂಗಿ, ಪ್ರೀತಿಗೆ ಪೋಷಕರ ವಿರೋಧ; ವಿವಾಹವಾಗಿ ಪ್ರೇಮಿಗಳ ಆತ್ಮಹತ್ಯೆ!
ಪ್ರೀತಿಗೆ ಮನೆಯವರು ವಿರೋಧ ವ್ಯಕ್ತಪಡಿಸಿದ್ದಕ್ಕೆ ಮನನೊಂದ ಪ್ರೇಮಿಗಳು ಜಮೀನಿನಲ್ಲಿಯೇ ಮದುವೆಯಾಗಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಯಡ್ರಾಮಿ ತಾಲೂಕಿನ ಮಾಗಣಗೇರಾ ಗ್ರಾಮದಲ್ಲಿ ನಡೆದಿದೆ.

ಯಡ್ರಾಮಿ: ಪ್ರೀತಿಗೆ ಮನೆಯವರು ವಿರೋಧ ವ್ಯಕ್ತಪಡಿಸಿದ್ದಕ್ಕೆ ಮನನೊಂದ ಪ್ರೇಮಿಗಳು ಜಮೀನಿನಲ್ಲಿಯೇ ಮದುವೆಯಾಗಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಯಡ್ರಾಮಿ ತಾಲೂಕಿನ ಮಾಗಣಗೇರಾ ಗ್ರಾಮದಲ್ಲಿ ನಡೆದಿದೆ.
ಯಡ್ರಾಮಿ ತಾಲೂಕಿನ ಮಾಗಣಗೇರಾ ಗ್ರಾಮದ ಶಶಿಕಲಾ ತಂದೆ ಸಿದ್ದಪ್ಪ(18) ಹಾಗೂ ಇದೇ ಗ್ರಾಮದ ಗೊಲ್ಲಾಳ ತಂದೆ ಮರಿಲಿಂಗಪ್ಪ (24) ನೇಣಿಗೆ ಶರಣಾದ ಪ್ರೇಮಿಗಳು. ಇವರಿಬ್ಬರು ವರಸೆಯಲ್ಲಿ ಅಣ್ಣಚ-ತಂಗಿಯಾಗಿದ್ದರು ಎನ್ನಲಾಗಿದೆ.
ಮನೆಯವರ ವಿರೋಧದ ನಡುವೆ ಶುಕ್ರವಾರ ರಾತ್ರಿ ಪ್ರೇಮಿಗಳು ಮದುವೆ ಮಾಡಿಕೊಂಡಿದ್ದಾರೆ. ನಂತರ ಕೆಲವೇ ಗಂಟೆಗಳಲ್ಲಿ ಊರಿನ ಹೊರವಲಯದ ಗೊಲ್ಲಾಳ ತಂದೆ ಮರಿಲಿಂಗಪ್ಪ ಅವರ ಜಮೀನಿನಲ್ಲಿರುವ ಮರಕ್ಕೆ ಇಬ್ಬರೂ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು ಶನಿವಾರ ಬೆಳಿಗ್ಗೆ ಬೆಳಕಿಗೆ ಬಂದಿದೆ.
ಶಶಿಕಲಾಗೆ ಬೇರೆ ಮದುವೆ ಮಾಡಲು ಕುಟುಂಬಸ್ಥರು ಮುಂದಾಗಿದ್ದರು. ಅದರಂತೆ ವಿಜಯಪುರ ಜಿಲ್ಲೆಯ ಸಿಂಧಗಿ ಗ್ರಾಮದ ಯುವಕನ ಜೊತೆ ನಿಶ್ಚಿತಾರ್ಥ ಮಾಡಿಸಿದ್ದರು. ಮುಂದಿನ ತಿಂಗಳು ಮದುವೆ ಕೂಡ ನಿಶ್ಚಯವಾಗಿತ್ತು ಎನ್ನಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


