ಅಕ್ರಮ ಸಿಮ್ಗಳನ್ನು ಬೆಂಗಳೂರಿಗೆ ಸಾಗಿಸುತ್ತಿದ್ದ ಯುವಕರ ತಂಡ ಧರ್ಮಸ್ಥಳದಲ್ಲಿ ಸೆರೆ
ನಿಗೂಢವಾಗಿ ಅಕ್ರಮ ಸಿಮ್ ಸಾಗಾಟ ಮಾಡುತ್ತಿದ್ದ ಯುವಕರ ವಂಚನೆ ಜಾಲವನ್ನು ಧರ್ಮಸ್ಥಳ ಪೊಲೀಸರು ಕಾರ್ಯಾಚರಣೆ ನಡೆಸಿ ಸೆರೆಹಿಡಿದಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಿಂದ ಬೆಂಗಳೂರಿಗೆ ಹೊರಟಿದ್ದ ಯುವಕರ ತಂಡವನ್ನು ಸೆರೆಹಿಡಿದಿರುವ ಘಟನೆ ನಡೆದಿದೆ.

ಮಂಗಳೂರು: ನಿಗೂಢವಾಗಿ ಅಕ್ರಮ ಸಿಮ್ ಸಾಗಾಟ ಮಾಡುತ್ತಿದ್ದ ಯುವಕರ ವಂಚನೆ ಜಾಲವನ್ನು ಧರ್ಮಸ್ಥಳ ಪೊಲೀಸರು ಕಾರ್ಯಾಚರಣೆ ನಡೆಸಿ ಸೆರೆಹಿಡಿದಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಿಂದ ಬೆಂಗಳೂರಿಗೆ ಹೊರಟಿದ್ದ ಯುವಕರ ತಂಡವನ್ನು ಸೆರೆಹಿಡಿದಿರುವ ಘಟನೆ ನಡೆದಿದೆ. ಯುವಕರ ತಂಡ ಅನುಮಾನಾಸ್ಪ ನಡೆ ಹಿನ್ನೆಲೆ ಧರ್ಮಸ್ಥಳ ಪೊಲೀಸರು ಕಾರ್ಯಾಚರಣೆ ನಡೆಸಿ ಗ್ಯಾಂಗ್ ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ.
ಐವರಿದ್ದ ಯುವಕ ತಂಡ 42 ಅಕ್ರಮ ಸಿಮ್ಗಳನ್ನು ಬೆಂಗಳೂರಿಗೆ ಸಾಗಿಸುತ್ತಿದ್ದಾಗ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಪೊಲೀಸರು ಸೆರೆಹಿಡಿದಿದ್ದಾರೆ. ಫೆಬ್ರವರಿ 1 ರಂದು ನೆರಿಯ ಗ್ರಾಮದಲ್ಲಿ ಯುವಕರನ್ನು ಬಂಧಿಸಿ ಸಿಮ್ಗಳನ್ನು ಜಪ್ತಿ ಮಾಡಲಾಗಿದೆ. ರಮೀಝ್ (20), ಅಕ್ಬರ್ ಅಲಿ (24), ಮೊಹಮ್ಮದ್ ಮುಸ್ತಫಾ (22) ಮೊಹಮ್ಮದ್ ಸಾಧಿಕ್ (27) ಬಂಧಿತ ಆರೋಪಿಯಾಗಿದ್ದು, ಇವರ ಜೊತೆ 17 ವರ್ಷದ ಅಪ್ರಾಪ್ತ ಬಾಲಕನೂ ಒಳಗೊಂಡಿದ್ದಾನೆ.
ಆರೋಪಿ ಅಕ್ಬರ್ ಅಲಿ ದುಬೈನಲ್ಲಿ ಇದ್ದಾಗ ಬೇರೆಯವರ ಹೆಸರಿನಲ್ಲಿ ನಕಲಿ ದಾಖಲೆ ಕೊಟ್ಟು ಸಿಮ್ ಖರೀದಿ ಮಾಡಿದ್ದ. ಎರಡು ವರ್ಷಗಳ ಕಾಲ ದುಬೈನಲ್ಲಿದ್ದ ಈತ ನಾಲ್ಕು ತಿಂಗಳ ಹಿಂದೆ ಊರಿಗೆ ಮರಳಿದ್ದ. ವಿದೇಶದ ನಂಟು ಇರುವುದರಿಂದ ಪೊಲೀಸರು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


