ಕಲೆ ಜನರ ಗ್ರಹಿಕೆಯನ್ನು ಬದಲಾಯಿಸಬಲ್ಲದು: ಮೋಹನ್ ಭಾಗವತ್
ಜನರ ಗ್ರಹಿಕೆಯನ್ನು ಬದಲಾಯಿಸುವ ಹಾಗೂ ವಿಶ್ವ ಕಲೆಗಳಿಗೆ ದಾರಿ ಮಾಡಿಕೊಡುವ ಸಾಮರ್ಥ್ಯ ಭಾರತೀಯ ಕಲೆಗಿದೆ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ಶನಿವಾರ ಹೇಳಿದರು.

ಬೆಂಗಳೂರು: ಜನರ ಗ್ರಹಿಕೆಯನ್ನು ಬದಲಾಯಿಸುವ ಹಾಗೂ ವಿಶ್ವ ಕಲೆಗಳಿಗೆ ದಾರಿ ಮಾಡಿಕೊಡುವ ಸಾಮರ್ಥ್ಯ ಭಾರತೀಯ ಕಲೆಗಿದೆ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ಶನಿವಾರ ಹೇಳಿದರು.
ಬೆಂಗಳೂರಿನ ಅಖಿಲ ಭಾರತೀಯ ಕಲಾಸಾಧಕ ಸಂಗಮದಲ್ಲಿ ನಡೆದ ಸಮಾರಂಭದಲ್ಲಿ ಜನಪದ ಕಲಾವಿದರಾದ ಗಣಪತ್ ಸಖಾರಾಮ್ ಮಸಗೆ ಮತ್ತು ಚಿತ್ರ ಕಲಾವಿದ ವಿಜಯ ದಶರಥ್ ಆಚ್ರೆಕರ್ ಅವರಿಗೆ ಪ್ರಥಮ ವರ್ಷದ ‘ಭರತ ಮುನಿ’ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಮಾತನಾಡಿದ ಮೋಹನ್ ಭಾಗವತ್ ಅವರು, 75 ವರ್ಷಗಳ ನಂತರ ಇದೇ ಮೊದಲ ಬಾರಿಗೆ ಭಾರತೀಯ ಕಲೆಗಳನ್ನು ಅಭ್ಯಾಸ ಮಾಡುವ ಮತ್ತು ಸಮಾಜಕ್ಕೆ ಪರಿಚಯಿಸುವ ಸಾಧಕರನ್ನು ಗುರುತಿಸಿ ಗೌರವಿಸಲು ಈ ರೀತಿಯ ಉಪಕ್ರಮವನ್ನು ಕೈಗೊಳ್ಳಲಾಗಿದೆ. ‘ಕಲೆ ಒಂದು ವಿದ್ಯೆಯಾಗಿದ್ದು, ಅಂತ್ಯದಲ್ಲಿ ನಮ್ಮ ಮುಕ್ತಿಗೂ ಕಾರಣವಾಗುತ್ತದೆ. ಕಲೆ ಜನರ ಗ್ರಹಿಕೆಯನ್ನು ಬದಲಾಯಿಸಬಲ್ಲದು. ವಿಕಾರಗಳಿಂದ ನಮ್ಮನ್ನು ಮೇಲಕ್ಕೆತ್ತಿ ಸಮಾಜದ ವಿಚಾರ, ಸಂವೇದನೆಗಳನ್ನು ಅರ್ಥ ಮಾಡಿಸಿಕೊಡಲು ಕಲೆ ಪ್ರಮುಖ ಪಾತ್ರ ವಹಿಸುತ್ತದೆ, ಭಾರತೀಯತೆಯನ್ನು ಉಳಿಸುವ ಕೆಲಸವನ್ನು ಕಲೆಯ ಮೂಲಕ ಕಲಾವಿದರು ಮಾಡುತ್ತಿದ್ದಾರೆ. ಅವರ ಸಂಖ್ಯೆ ಇನ್ನೂ ಹೆಚ್ಚಾಗಬೇಕು ಎಂದು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


