5 ವರ್ಷ ನಮ್ಮದೇ ಸರ್ಕಾರ ಇರಲಿದೆ, ಗ್ಯಾರಂಟಿ ಯೋಜನೆಗಳು ರದ್ದಾಗದು: ಸಚಿವ ಕೆಜೆ.ಜಾರ್ಜ್
ರಾಜ್ಯದಲ್ಲಿ 5 ವರ್ಷ ನಮ್ಮ ಪಕ್ಷವೇ ಅಧಿಕಾರದಲ್ಲಿರದಿದ್ದು, ಗ್ಯಾರಂಟಿ ಯೋಜನೆಗಳು ರದ್ದುಗೊಳ್ಳುವುದಿಲ್ಲ ಎಂದು ಇಂಧನ ಸಚಿವ ಕೆಜೆ.ಜಾರ್ಜ್ ಅವರು ಭಾನುವಾರ ಹೇಳಿದರು.

ಮಂಗಳೂರು: ರಾಜ್ಯದಲ್ಲಿ 5 ವರ್ಷ ನಮ್ಮ ಪಕ್ಷವೇ ಅಧಿಕಾರದಲ್ಲಿರದಿದ್ದು, ಗ್ಯಾರಂಟಿ ಯೋಜನೆಗಳು ರದ್ದುಗೊಳ್ಳುವುದಿಲ್ಲ ಎಂದು ಇಂಧನ ಸಚಿವ ಕೆಜೆ.ಜಾರ್ಜ್ ಅವರು ಭಾನುವಾರ ಹೇಳಿದರು.
ಸುರತ್ಕಲ್ ಬ್ಲಾಕ್ ಕಾಂಗ್ರೆಸ್ ಕಚೇರಿಯನ್ನು ಉದ್ಘಾಟಿಸಿ ಮಾತನಾಡಿದ ಅವರು, ರಾಜ್ಯ ಸರ್ಕಾರದ ಜನಪರ ಯೋಜನೆಗಳನ್ನು ಜನರಿಗೆ ತಲುಪಿಸುವ ನಿಟ್ಟಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಕೆಲಸ ಮಾಡಬೇಕು. ಕೊಡಗಿನಲ್ಲಿ ರಾಜಕೀಯ ಆರಂಭಿಸಿದ ಬಳಿಕ ಸೋಲಿನ ಜೊತೆಗೆ ಗೆಲುವಿನ ರುಚಿ ಕಂಡಿದ್ದೇನೆ .ಕರಾವಳಿ ಪ್ರದೇಶ ಕಾಂಗ್ರೆಸ್‌ನ ಭದ್ರಕೋಟೆಯಾಗಿದ್ದು, ಅದನ್ನು ಹಿಂಪಡೆಯಲು ಪಕ್ಷದ ಕಾರ್ಯಕರ್ತರು ಶ್ರಮಿಸಬೇಕು. ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಮುಂದುವರೆಸಿ. ಐದು ವರ್ಷಗಳ ಅಧಿಕಾರಾವಧಿಯನ್ನು ಯಶಸ್ವಿಯಾಗಿ ಪೂರ್ಣಗೊಳಸಲಿದೆ ಎಂದು ಹೇಳಿದರು.
ಇದೇ ವೇಳೆ ಮೋದಿ ಸರ್ಕಾರವನ್ನು ಟೀಕಿಸಿದ ಅವರು, ತಮ್ಮ ವೈಫಲ್ಯಗಳನ್ನು ಮರೆಮಾಚಲು ಕೇಂದ್ರದ ಬಿಜೆಪಿ ಸರ್ಕಾರ ಸಾಕಷ್ಟು ಭರವಸೆಗಳನ್ನು ನೀಡಿತು. ಆದರೆ, ಎಂದಿಗೂ ಅವುಗಳನ್ನು ಈಡೇರಿಸಲಿಲ್ಲ ಎಂದು ಕಿಡಿಕಾರಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


