ರಾಜ್ಯ

ಮಡಿಕೇರಿ: ಕ್ಷುಲಕ್ಕ ಕಾರಣಕ್ಕೆ ಯುವಕನೋರ್ವನ ಬರ್ಬರ ಹತ್ಯೆ

ಕೊಡಗು ಜಿಲ್ಲೆಯ ಕುಶಾಲನಗರದಲ್ಲಿ ಕ್ಷುಲ್ಲಕ ಕಾರಣಕ್ಕೆ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯಗೊಂಡ ಘಟನೆ ನಡೆದಿದೆ.

ಮಡಿಕೇರಿ: ಕ್ಷುಲಕ್ಕ ಕಾರಣಕ್ಕೆ ಯುವಕನೋರ್ವನ ಬರ್ಬರ ಹತ್ಯೆ
ಸಾಂದರ್ಭಿಕ ಚಿತ್ರ
Published On :

ಮಡಿಕೇರಿ: ಕೊಡಗು ಜಿಲ್ಲೆಯ ಕುಶಾಲನಗರದಲ್ಲಿ ಕ್ಷುಲ್ಲಕ ಕಾರಣಕ್ಕೆ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯಗೊಂಡ ಘಟನೆ ನಡೆದಿದೆ. 

ಮೃತ ಯುವಕನನ್ನು 22 ವರ್ಷದ ಸಾಜಿದ್ ಎಂದು ಗುರುತಿಸಲಾಗಿದೆ. ಮೈಸೂರು ರಸ್ತೆಯಲ್ಲಿರುವ ಶ್ರೀನಿಧಿ ಎಂಬವರ ಸರ್ವಿಸ್ ಸ್ಟೇಷನ್ ನಲ್ಲಿ ಬೈಕ್ ಸರ್ವಿಸ್​ ಮಾಡಲೆಂದು ಸಾಜೀದ್ ಬಂದಿದ್ದನು. ಈ ವೇಳೆ ಇಬ್ಬರ ನುಡವೆ ಕ್ಷುಲ್ಲಕ ಕಾರಣಕ್ಕೆ ಜಗಳ ನಡೆದಿದೆ.

ಈ ವೇಳೆ ಕೋಪಗೊಂಡ ಶ್ರೀನಿಧಿ ಹರಿತವಾದ ಆಯುಧದಿಂದ ಸಾಜಿದ್​ಗೆ ಇರಿದಿದ್ದಾನೆ. ಗಂಭೀರವಾಗಿ ಗಾಯಗೊಂಡಿದ್ದ ಸಾಜಿದ್​ನನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾನೆ. 

ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಕುಶಾಲನಗರ ಟೌನ್ ಠಾಣಾ ಪೊಲೀಸರು ಆರೋಪಿ ಶ್ರೀನಿಧಿನನ್ನು ಬಂಧಿಸಿ, ವಿಚಾರಣೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.