ಜಂತರ್ ಮಂತರ್‌ನಲ್ಲಿ ನಾಟಕ ಮಾಡಲು ಮೇಕಪ್ ಹಾಕಿ ಕೂತಿದ್ದಾರೆ ಕಾಂಗ್ರೆಸ್ಸಿಗರು: ಬಿಜೆಪಿಯಿಂದ ಬೆಂಗಳೂರಿನಲ್ಲಿ ಪ್ರತಿಭಟನೆ
ತೆರಿಗೆ ಹಂಚಿಕೆಯಲ್ಲಿ ಕೇಂದ್ರ ಸರ್ಕಾರದಿಂದ ಕರ್ನಾಟಕಕ್ಕೆ ಅನ್ಯಾಯವಾಗುತ್ತಿದೆ ಎಂದು ಆರೋಪಿಸಿ ರಾಜ್ಯ ಕಾಂಗ್ರೆಸ್ ನಾಯಕರು 'ನನ್ನ ತೆರಿಗೆ ನನ್ನ ಹಕ್ಕು' ಘೋಷವಾಕ್ಯದಡಿ ದೆಹಲಿ ಚಲೋ ನಡೆಸಲಿದ್ದರೆ ಇತ್ತ ಬೆಂಗಳೂರಿನಲ್ಲಿ ಇದಕ್ಕೆ ಪ್ರತಿಯಾಗಿ ಸರ್ಕಾರದ ವಿರುದ್ಧ ವಿಪಕ್ಷ ಬಿಜೆಪಿ ನಾಯಕರು ವಿಧಾನಸೌಧದ ಮುಂದೆ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಲಿದ್ದಾರೆ.

ಬೆಂಗಳೂರು: ತೆರಿಗೆ ಹಂಚಿಕೆಯಲ್ಲಿ ಕೇಂದ್ರ ಸರ್ಕಾರದಿಂದ ಕರ್ನಾಟಕಕ್ಕೆ ಅನ್ಯಾಯವಾಗುತ್ತಿದೆ ಎಂದು ಆರೋಪಿಸಿ ರಾಜ್ಯ ಕಾಂಗ್ರೆಸ್ ನಾಯಕರು 'ನನ್ನ ತೆರಿಗೆ ನನ್ನ ಹಕ್ಕು' ಘೋಷವಾಕ್ಯದಡಿ ದೆಹಲಿ ಚಲೋ ನಡೆಸಲಿದ್ದರೆ ಇತ್ತ ಬೆಂಗಳೂರಿನಲ್ಲಿ ಇದಕ್ಕೆ ಪ್ರತಿಯಾಗಿ ಸರ್ಕಾರದ ವಿರುದ್ಧ ವಿಪಕ್ಷ ಬಿಜೆಪಿ ನಾಯಕರು ವಿಧಾನಸೌಧದ ಮುಂದೆ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಲಿದ್ದಾರೆ.
ರಾಜ್ಯದ ಕಾಂಗ್ರೆಸ್ ಸರ್ಕಾರ ಸ್ವತಃ 222ಕ್ಕೂ ಹೆಚ್ಚು ತಾಲೂಕುಗಳನ್ನು ಬರಗಾಲ ಪೀಡಿತ ತಾಲ್ಲೂಕುಗಳೆಂದು ಘೋಷಣೆ ಮಾಡಿದ್ದರೂ, ಈವರೆಗೂ ಕುಡಿಯುವ ನೀರಿನ ಸಮಸ್ಯೆ ಸೇರಿದಂತೆ ಬರ ಪರಿಹಾರದ ಯಾವುದೇ ಕ್ರಮ ಕೈಗೊಂಡಿಲ್ಲ. ಈ ಹಿನ್ನೆಲೆಯಲ್ಲಿ ಇಂದು ಬಿಜೆಪಿ ಶಾಸಕರು ಹಾಗೂ ವಿಧಾನ ಪರಿಷತ್ ಸದಸ್ಯರುಗಳ ನೇತೃತ್ವದಲ್ಲಿ ಇಂದು ಬೆಳಗ್ಗೆ 11 ಗಂಟೆಗೆ ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಸರ್ಕಾರದ ರೈತ ವಿರೋಧಿ ನೀತಿಗಳ ವಿರುದ್ಧ ಪ್ರತಿಭಟನೆ ನಡೆಸಲಾಗುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ತಿಳಿಸಿದ್ದಾರೆ.
ಕರ್ನಾಟಕದ ಜನತೆ ಕಾಂಗ್ರೆಸ್ಗೆ ಮತ ನೀಡಿದ್ದು ಗ್ಯಾರಂಟಿಗಳನ್ನು ನಂಬಿ! ಆದರೆ, ಮಜಾವಾದಿ ಸಿದ್ದರಾಮಯ್ಯ ಅವರ ಸರ್ಕಾರ ಕನ್ನಡಿಗರ ತೆರಿಗೆ ದುಡ್ಡಿನಲ್ಲಿ ಮೋಜು ಮಸ್ತಿ ಮಾಡುತ್ತಿದೆ. ಕನ್ನಡಿಗರ ತೆರಿಗೆ ಹಣದಲ್ಲಿ ಬಿಟ್ಟಿ ಜಾಹೀರಾತು ಕೊಟ್ಟು ಪ್ರಚಾರ ಪಡೆದುಕೊಂಡು ದೆಹಲಿಯಲ್ಲಿ ಶೋಕಿ ಮಾಡಲು ಹೋಗಿದೆ. ಕನ್ನಡಿಗರ ಪ್ರಶ್ನೆಗಳಿಗೆ ಉತ್ತರ ಕೊಡಲು ಯೋಗ್ಯತೆ ಇಲ್ಲದ ಕಾಂಗ್ರೆಸ್ಸಿಗರು, ತಾವೇ ಮಾಡಿದ ಸುಳ್ಳುಗಳಿಗೆ ಸತ್ಯ ಹುಡುಕುತ್ತಿದ್ದಾರೆ. ಜಂತರ್ ಮಂತರ್‌ನಲ್ಲಿ ಬೃಹನ್ನಳೆ ನಾಟಕ ಮಾಡಲು ಮೇಕಪ್ ಹಾಕಿ ಕೂತಿದ್ದಾರೆ ಎಡಬಿಡಂಗಿ ಕಾಂಗ್ರೆಸ್ಸಿಗರು” ಎಂದು ರಾಜ್ಯ ಬಿಜೆಪಿ ಘಟಕ ಟೀಕೆ ಮಾಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


