ರಾಜ್ಯ

ತೆರಿಗೆ ಹಂಚಿಕೆಯಲ್ಲಿ ತಾರತಮ್ಯ; ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಕಚೇರಿಗೆ ಮಸಿ ಬಳಿದ NSUI ಕಾರ್ಯಕರ್ತರು!

ಕೇಂದ್ರದ ತೆರಿಗೆ ಹಂಚಿಕೆಯಲ್ಲಿ ಕರ್ನಾಟಕಕ್ಕೆ ಅನ್ಯಾಯವಾಗಿದೆ ಎಂದು ಆರೋಪಿಸಿ ಎನ್‌ಎಸ್‌ಯುಐ ಕಾರ್ಯಕರ್ತರು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಕಚೇರಿಯ ನಾಮಫಲಕಕ್ಕೆ ಕಪ್ಪು ಮಸಿ ಬಳಿದು, ಆಕ್ರೋಶ ವ್ಯಕ್ತಪಡಿಸಿದರು.

ತೆರಿಗೆ ಹಂಚಿಕೆಯಲ್ಲಿ ತಾರತಮ್ಯ; ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಕಚೇರಿಗೆ ಮಸಿ ಬಳಿದ NSUI ಕಾರ್ಯಕರ್ತರು!
ನಿರ್ಮಲಾ ಸೀತಾರಾಮನ್ ಕಚೇರಿ, ಬೆಂಗಳೂರು
Published On :

ಬೆಂಗಳೂರು: ಕೇಂದ್ರದ ತೆರಿಗೆ ಹಂಚಿಕೆಯಲ್ಲಿ ಕರ್ನಾಟಕಕ್ಕೆ ಅನ್ಯಾಯವಾಗಿದೆ ಎಂದು ಆರೋಪಿಸಿ ಎನ್‌ಎಸ್‌ಯುಐ ಕಾರ್ಯಕರ್ತರು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಕಚೇರಿಯ ನಾಮಫಲಕಕ್ಕೆ ಕಪ್ಪು ಮಸಿ ಬಳಿದು, ಆಕ್ರೋಶ ವ್ಯಕ್ತಪಡಿಸಿದರು.

ಮಿಲ್ಲರ್ಸ್ ರಸ್ತೆಯಲ್ಲಿರುವ ನಿರ್ಮಲಾ ಸೀತಾರಾಮನ್ ಅವರ ಕಚೇರಿ ಬಳಿ ಜಮಾಯಿಸಿದ ಎನ್‌ಎಸ್‌ಯುಐ ಕಾರ್ಯಕರ್ತರು, ಘೋಷಣೆಗಳನ್ನು ಕೂಗಿದರು.

ಈ ವೇಳೆ ಸ್ಥಳದಲ್ಲಿದ್ದ ವಿಧಾನಸೌಧ ಪೊಲೀಸರು ಕೂಡಲೇ ಕಾರ್ಯಕರ್ತರನ್ನು ವಶಕ್ಕೆ ಪಡೆದರು, ಬಳಿಕ ಅವರನ್ನು ವಿಧಾನಸೌಧ ಪೊಲೀಸ್ ಠಾಣೆಗೆ ಕರೆದೊಯ್ದರು.

ಕೇಂದ್ರ ಸರ್ಕಾರದಿಂದ ಕರ್ನಾಟಕಕ್ಕೆ ಅನುದಾನ ಬಿಡುಗಡೆ ವಿಚಾರದಲ್ಲಿ ಅನ್ಯಾಯವಾಗುತ್ತಿದೆ. ಇದನ್ನು ವಿರೋಧಿಸಿ ಈ ಪ್ರತಿಭಟನೆ ನಡೆಸಲಾಯಿತು ಎಂದು ಎನ್‌ಎಸ್‌ಯುಐ ರಾಜ್ಯಾಧ್ಯಕ್ಷ ಕೀರ್ತಿ ಗಣೇಶ್ ಅವರು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.