ಕೊಪ್ಪಳ: ಡಿಕೆಶಿ ಆಪ್ತನ ಮನೆ ಮೇಲೆ ಐಟಿ ದಾಳಿ
ಕೊಪ್ಪಳ ಜಿಲ್ಲೆಯ ಮುನಿರಾಬಾದ್ ಸಮೀಪದ ಹೊಸಲಿಂಗಪುರ ಗ್ರಾಮದಲ್ಲಿರುವ ವಿದ್ಯುತ್ ಗುತ್ತಿಗೆದಾರ ವೀರನಗೌಡ ಪಾಟೀಲ್ ಅವರ ಮನೆ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಬುಧವಾರ ದಾಳಿ ನಡೆಸಿದ್ದಾರೆ.

ಕೊಪ್ಪಳ: ಕೊಪ್ಪಳ ಜಿಲ್ಲೆಯ ಮುನಿರಾಬಾದ್ ಸಮೀಪದ ಹೊಸಲಿಂಗಪುರ ಗ್ರಾಮದಲ್ಲಿರುವ ವಿದ್ಯುತ್ ಗುತ್ತಿಗೆದಾರ ವೀರನಗೌಡ ಪಾಟೀಲ್ ಅವರ ಮನೆ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಬುಧವಾರ ದಾಳಿ ನಡೆಸಿದ್ದಾರೆ.
ಪಾಟೀಲ್ ಅವರು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಆಪ್ತರು ಎನ್ನಲಾಗಿದೆ. ಬೆಂಗಳೂರಿನ 8 ಸ್ಥಳಗಳಲ್ಲಿ ದಾಳಿ ನಡೆಸಿದ ಐಟಿ ಅಧಿಕಾರಿಗಳು, ಗೋವಾ ಮತ್ತು ಹುಬ್ಬಳ್ಳಿಯಲ್ಲೂ ದಾಳಿ ನಡೆಸಿ ಇಡೀ ದಿನ ದಾಖಲೆಗಳನ್ನು ಪರಿಶೀಲಿಸಿದರು.
ಬೆಂಗಳೂರಿನಲ್ಲಿ 8ಕ್ಕೂ ಹೆಚ್ಚು ಸ್ಥಳಗಳಲ್ಲಿ, ಬಳ್ಳಾರಿಯ ಎರಡು ಸ್ಥಳಗಳಲ್ಲಿ ಮತ್ತು ಕೊಪ್ಪಳ ಪಟ್ಟಣದ ಸಮೀಪದ ಹೊಸಲಿಂಗಪುರದಲ್ಲಿ ಐಟಿ ಅಧಿಕಾರಿಗಳು ಬುಧವಾರ ದಾಳಿ ನಡೆಸಿದ್ದಾರೆ.
ಬುಧವಾರ ಬೆಳಗ್ಗೆಯಿಂದ ಪಾಟೀಲ್ ಅವರ ಮನೆ, ಕಚೇರಿ ಸ್ಥಳಗಳಲ್ಲಿ ಅಧಿಕಾರಿಗಳು ಶೋಧ ನಡೆಸುತ್ತಿದ್ದು, ಹಲವು ಆಸ್ತಿಗಳ ದಾಖಲೆಗಳನ್ನು ಪರಿಶೀಲಿಸಲಾಗುತ್ತಿದ್ದು, ಗುರುವಾರವೂ ದಾಳಿ ಮುಂದುವರಿಯುವ ನಿರೀಕ್ಷೆ ಇದೆ.
ಪಾಟೀಲ್ ಅವರ ನಿವಾಸದಲ್ಲಿ ಈವರೆಗೆ 16 ಐಷಾರಾಮಿ ಕಾರುಗಳನ್ನು ಅಧಿಕಾರಿಗಳು ಪತ್ತೆ ಮಾಡಿದ್ದಾರೆ. ಇತ್ತೀಚಿಗೆ ಗವಿಮಠದ ವಾರ್ಷಿಕ ಜಾತ್ರೆಯ ವೇಳೆ ಶಿವಕುಮಾರ್ ಅವರೊಂದಿಗೆ ಪಾಟೀಲ್ ಕಾಣಿಸಿಕೊಂಡ ನಂತರವೇ ಅವರು ಉಪಮುಖ್ಯಮಂತ್ರಿಯವರ ಆಪ್ತ ಎಂಬುದು ಹಲವರಿಗೆ ಗೊತ್ತಾಗಿದೆ.
ಡಿಸಿಎಂ ಭೇಟಿಯ ನಂತರ ಪಾಟೀಲ್ ಪ್ರಚಾರಕ್ಕೆ ಬಂದಿದ್ದು, ದಾಳಿಗೆ ಕಾರಣವಾಗಿರಬಹುದು ಎಂದು ಮೂಲಗಳು ತಿಳಿಸಿವೆ.
ಪಾಟೀಲ್ ಅವರು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಆಪ್ತರಾಗಿದ್ದು, ಕಳೆದ ವಾರ ಕೊಪ್ಪಳದ ಗವಿಮಠದ ಜಾತ್ರೆಗೆ ಆಗಮಿಸಿದ್ದ ಸಂದರ್ಭದಲ್ಲಿ ಪಾಟೀಲ್ ಅವರ ಶಾರದ ಇಂಟರ್‌ನ್ಯಾಶನಲ್ ಸ್ಕೂಲ್‌ಗೆ ಡಿಸಿಎಂ ಭೇಟಿ ನೀಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


