ಪ್ರಚೋದನಕಾರಿ ಹೇಳಿಕೆ: ಕೆ.ಎಸ್. ಈಶ್ವರಪ್ಪ ವಿರುದ್ಧ ಎಫ್ ಐಆರ್ ದಾಖಲು
ದೇಶ ವಿಭಜನೆ ಹೇಳಿಕೆ ನೀಡುವವರನ್ನು ಗುಂಡಿಕ್ಕಿ ಕೊಲ್ಲುವ ಕಾನೂನು ತರಬೇಕು ಎಂದು ಹೇಳಿಕೆ ನೀಡಿರುವ ಬಿಜೆಪಿ ಹಿರಿಯ ಮುಖಂಡ ಕೆ.ಎಸ್. ಈಶ್ವರಪ್ಪ ವಿರುದ್ಧ ಎಫ್ ಐಆರ್ ದಾಖಲಾಗಿದೆ.

ದಾವಣಗೆರೆ: ದೇಶ ವಿಭಜನೆ ಹೇಳಿಕೆ ನೀಡುವವರನ್ನು ಗುಂಡಿಕ್ಕಿ ಕೊಲ್ಲುವ ಕಾನೂನು ತರಬೇಕು ಎಂದು ಹೇಳಿಕೆ ನೀಡಿರುವ ಬಿಜೆಪಿ ಹಿರಿಯ ಮುಖಂಡ ಕೆ.ಎಸ್. ಈಶ್ವರಪ್ಪ ವಿರುದ್ಧ ಎಫ್ ಐಆರ್ ದಾಖಲಾಗಿದೆ.
ನಿಜಲಿಂಗಪ್ಪ ಬಡಾವಣೆಯ ಕಾಂಗ್ರೆಸ್ ಮುಖಂಡ ಹನುಮಂತ ಎಂಬುವರು ನೀಡಿದ ದೂರನ್ನು ಆಧರಿಸಿ ಇಲ್ಲಿನ ಬಡಾವಣೆ ಠಾಣೆಯಲ್ಲಿ ಐಪಿಸಿ ಸೆಕ್ಷನ್ 505 (1) (ಸಿ), 505 (2) ಮತ್ತು 506 ಅಡಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಗುರುವಾರ ನಡೆದ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷರ ಪದಗ್ರಹಣ ಸಮಾರಂಭದಲ್ಲಿ ಕೆಎಸ್ ಈಶ್ವರಪ್ಪ ನೀಡಿರುವ ಹೇಳಿಕೆ ಜನ, ಸಮುದಾಯ, ಗುಂಪುಗಳ ನಡುವೆ ದ್ವೇಷ ಭಾವನೆ ಉಂಟುಮಾಡುತ್ತದೆ. ಗಲಭೆಗಳು ಜರುಗಬಹುದೆಂದು ಗೊತ್ತಿದ್ದರೂ ಪ್ರಚೋದನಾಕಾರಿ ಹೇಳಿಕೆ ನೀಡಿದ್ದು, ಜನರ ಮಧ್ಯೆ ಗಲಭೆಗಳಾಗಿ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗುವ ಸಂಭವವಿದ್ದು, ಇವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಹನುಮಂತ ದೂರು ನೀಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


