ರಾಜ್ಯ

40% ಕಮಿಷನ್ ಆರೋಪಕ್ಕೆ ಕೆಂಪಣ್ಣ ದಾಖಲೆ ನೀಡಲಿ, ಈಶ್ವರಪ್ಪ ವಿರುದ್ಧ ಕ್ರಮ: ಸಿಎಂ ಸಿದ್ದರಾಮಯ್ಯ

ಮತ್ತೆ 40% ಕಮಿಷನ್ ಆರೋಪ ಸದ್ದು ಮಾಡುತ್ತಿದೆ. ಹಿಂದಿನ ಬಿಜೆಪಿ ಸರ್ಕಾರ ವಿರುದ್ಧ ಗುತ್ತಿಗೆದಾರರ ಸಂಘದ ರಾಜ್ಯಾಧ್ಯಕ್ಷ ಕೆಂಪಣ್ಣ 40 % ಕಮಿಷನ್ ಆರೋಪ ಮಾಡಿದ್ದರು. ಇದೀಗ ಕಾಂಗ್ರೆಸ್ ಸರ್ಕಾರದ ಮೇಲೆ ಕೂಡ ಆರೋಪ ಮಾಡಿದ್ದಾರೆ.

40% ಕಮಿಷನ್ ಆರೋಪಕ್ಕೆ ಕೆಂಪಣ್ಣ ದಾಖಲೆ ನೀಡಲಿ, ಈಶ್ವರಪ್ಪ ವಿರುದ್ಧ ಕ್ರಮ: ಸಿಎಂ ಸಿದ್ದರಾಮಯ್ಯ
ಮುಖ್ಯಮಂತ್ರಿ ಸಿದ್ದರಾಮಯ್ಯ ಹೊಸದುರ್ಗದ ಬ್ರಹ್ಮವಿದ್ಯಾನಗರ ಸುಕ್ಷೇತ್ರದಲ್ಲಿ ಜಗದ್ಗುರು ಡಾ.ಪುರುಷೋತ್ತಮಾನಂದಪುರಿ ಮಹಾಸ್ವಾಮಿಗಳ 25ನೇ ವರ್ಷದ ಪಟ್ಟಾಭಿಷೇಕದ ರಜತ ಮಹೋತ್ಸವ ಮತ್ತು ರಾಷ್ಟ್ರೀಯ ಭಗೀರಥ ಜಯಂತ್ಸೋತ್ಸವ ಹಾಗೂ ಉಪ್ಪಾರ ಸಮುದಾಯದ ಬೃಹತ್ ಸಮಾವೇಶವನ್ನು ಉದ್ಘಾಟಿಸಿ ಪೂಜೆ ಸಲ್ಲಿಸಿದರು
Published On :

ಚಿತ್ರದುರ್ಗ: ಮತ್ತೆ 40% ಕಮಿಷನ್ ಆರೋಪ ಸದ್ದು ಮಾಡುತ್ತಿದೆ. ಹಿಂದಿನ ಬಿಜೆಪಿ ಸರ್ಕಾರ ವಿರುದ್ಧ ಗುತ್ತಿಗೆದಾರರ ಸಂಘದ ರಾಜ್ಯಾಧ್ಯಕ್ಷ ಕೆಂಪಣ್ಣ 40 % ಕಮಿಷನ್ ಆರೋಪ ಮಾಡಿದ್ದರು. ಇದೀಗ ಕಾಂಗ್ರೆಸ್ ಸರ್ಕಾರದ ಮೇಲೆ ಕೂಡ ಆರೋಪ ಮಾಡಿದ್ದಾರೆ.

ಕೆಂಪಣ್ಣ ಆರೋಪಕ್ಕೆ ಇಂದು ಚಿತ್ರದುರ್ಗ ಜಿಲ್ಲೆಯ ಹೊಸದುರ್ಗದ ಭಗೀರಥ ಮಠದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕೆಂಪಣ್ಣ 40 % ಕಮಿಷನ್ ಸರ್ಕಾರವೆಂದು ಆರೋಪ ಮಾಡಿದ್ದಕ್ಕೆ, ನಾಗಮೋಹನ್ ದಾಸ್ ಕಮಿಷನ್ ಮಾಡಿದ್ದೇವೆ, ದಾಖಲೆ ನೀಡಲಿ ಎಂದರು. 

ನಮ್ಮ ಪಾಲು ನಾವು ಕೇಳಿದ್ರೆ ದೇಶ ವಿಭಜನೆ ಎನ್ನುತ್ತಾರೆ: 40% ಭ್ರಷ್ಟಾಚಾರ ಇದ್ದರೆ ದಾಖಲೆ ನೀಡಲಿ, ಅಧಿಕಾರಿಗಳು ಕೇಳುತ್ತಾರೆ ಎಂದಿದ್ದಾರೆ. ಅಂಥವರ ವಿರುದ್ದ ದೂರು ನೀಡಲಿ ಎಂದರು. ಅನುದಾನದ ವಿಚಾರದಲ್ಲಿ ಸುಪ್ರೀಂ ಕೋರ್ಟ್ ಗೆ ಹೋಗುವ ಆಲೋಚನೆ ಇಲ್ಲ. ನಮಗೆ ಅನ್ಯಾಯ ಆಗಿರುವುದು ನಿಜ.ನಾವು 100 ರೂಪಾಯಿ ತೆರಿಗೆ ಕೊಟ್ಟರೆ 12 ರೂಪಾಯಿ ಮಾತ್ರ ಸಿಗುತ್ತಿದೆ. ಇನ್ನುಳಿದ 88 ರೂಪಾಯಿ ಕೇಂದ್ರಕ್ಕೆ ಹೋಗುತ್ತದೆ. ಗುಜರಾತ್ ಸಿಎಂ ಆದಾಗ ತೆರಿಗೆ ನಮ್ಮ ರಾಜ್ಯದ್ದು, ನಾವೇ ವಸೂಲಿ ಮಾಡುತ್ತೇವೆ ಎಂದರು. ಇದನ್ನ ಹೇಳಿದ್ದು ಮಿಸ್ಟರ್ ಮೋದಿ. ಈಗ ದೇಶ ವಿಭಜನೆ ಎಂದು ಹೇಳುತ್ತಿದ್ದಾರೆ. ನಮ್ಮ ಪಾಲು ನಾವು ಕೇಳಿದ್ರೆ ದೇಶ ವಿಭಜನೆ ಎನ್ನುತ್ತಾರೆ.

ದೇಶ ವಿಭಜನೆ ಮಾಡಲು ಹೊರಟವರು ಮೋದಿ ಅಲ್ವ ಎಂದು ಪ್ರಶ್ನೆ ಹಾಕಿದರು. ನಿಮಗೆ ಕನ್ನಡಿಗರಾಗಿ ಕೋಪ ಬರಲ್ವಾ ಎಂದು ಇದೇ ಸಂದರ್ಭದಲ್ಲಿ ರಾಜ್ಯದ ಸಂಸದರಿಗೆ ಸಿಎಂ ಕುಟುಕಿದರು. 

'ಭದ್ರ ಮೇಲ್ದಂಡೆ ವಿಚಾರದಲ್ಲಿ ನಿರ್ಮಲ ಸೀತಾರಾಮನ್ ಯೋಜನೆಗೆ 5, 300 ಕೋಟಿ ರೂಪಾಯಿ ಹೇಳಿದ್ದಾರೆ. ಬಜೆಟ್ ನಲ್ಲಿ ಹೇಳಿದ್ದಾರೆಯೇ ವಿನಃ ಒಂದು ರೂಪಾಯಿ ಕೂಡಾ ಕೊಟ್ಟಿಲ್ಲ. ನಾನು ಕೂಡಾ ನೀರಾವರಿ ಮಂತ್ರಿಗಳನ್ನು ಕೇಳಿದ್ದೇನೆ' ಎಂದರು.

ಈಶ್ವರಪ್ಪ ವಿರುದ್ಧ ಕ್ರಮ: ದೇಶ ವಿಭಜನೆ ಹೇಳಿಕೆ ನೀಡುವವರನ್ನು ಕೊಲ್ಲುವ ಕಾನೂನು ತರಬೇಕು ಎನ್ನುವ ಈಶ್ವರಪ್ಪ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ, ಈಶ್ವರಪ್ಪನವರಿಗೆ ಕಡಿ, ಬಡಿ, ತರಿ ಇದು ಬಿಟ್ಟು ಬೇರೆ ಭಾಷೆ ಗೊತ್ತಿಲ್ಲ. ಈಶ್ವರಪ್ಪನ ವಿರುದ್ದ ಕ್ರಮ ತೆಗೆದುಕೊಳ್ಳುತ್ತೇವೆ. ಕಡಿ, ಬಡಿ, ಕೊಲ್ಲು, ಕತ್ತರಿಸು ಭಾಷೆ ಬಿಟ್ಟು ಬಿಜೆಪಿಗೆ ಏನು ಬರಲ್ಲ. ನನಗೆ ಆರ್‌ಎಸ್‌ಎಸ್ ಟ್ರೈನಿಂಗ್ ಆಗಿದೆ ಎನ್ನುತ್ತಾರೆ. ಇದೇನಾ ಟ್ರೈನಿಂಗ್ ಆಗಿರುವುದು ಈಶ್ವರಪ್ಪ? ಎಂದು ಪ್ರಶ್ನಿಸಿದರು.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.