ಹಿರಿಯ ಐಪಿಎಸ್ ಅಧಿಕಾರಿ ಪ್ರತಾಪ್ ರೆಡ್ಡಿ ರಾಜೀನಾಮೆ
ಹಿರಿಯ ಐಪಿಎಸ್ ಅಧಿಕಾರಿ ಸಿ ಹೆಚ್ ಪ್ರತಾಪ್ ರೆಡ್ಡಿ(CH Pratap Reddy) ತಮ್ಮ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ. ಪ್ರಸ್ತುತ ಕರ್ನಾಟಕದ ಆಂತರಿಕ ಭದ್ರತೆ ವಿಭಾಗದ ಡಿಜಿಪಿಯಾಗಿ (DGP) ಕಾರ್ಯ ನಿರ್ವಹಣೆ ಮಾಡುತ್ತಿದ್ದ ಪ್ರತಾಪ್ ರೆಡ್ಡಿ ಅವರ ನಿವೃತ್ತಿಗೆ ಇನ್ನು ಎರಡು ತಿಂಗಳು ಬಾಕಿ ಇತ್ತು. ಇದೇ ವರ್ಷ ಮೇ ತಿಂಗಳು ನಿವೃತ್ತಿಯಾಗುತ್ತಿದ್ದರು.

ಬೆಂಗಳೂರು: ಹಿರಿಯ ಐಪಿಎಸ್ ಅಧಿಕಾರಿ ಸಿ ಹೆಚ್ ಪ್ರತಾಪ್ ರೆಡ್ಡಿ(CH Pratap Reddy) ತಮ್ಮ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ. ಪ್ರಸ್ತುತ ಕರ್ನಾಟಕದ ಆಂತರಿಕ ಭದ್ರತೆ ವಿಭಾಗದ ಡಿಜಿಪಿಯಾಗಿ (DGP) ಕಾರ್ಯ ನಿರ್ವಹಣೆ ಮಾಡುತ್ತಿದ್ದ ಪ್ರತಾಪ್ ರೆಡ್ಡಿ ಅವರ ನಿವೃತ್ತಿಗೆ ಇನ್ನು ಎರಡು ತಿಂಗಳು ಬಾಕಿ ಇತ್ತು. ಇದೇ ವರ್ಷ ಮೇ ತಿಂಗಳು ನಿವೃತ್ತಿಯಾಗುತ್ತಿದ್ದರು.
ಆದರೆ ವೈಯಕ್ತಿಕ ಕಾರಣ ನೀಡಿ ತಮ್ಮ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ. ಬರುವ ಏಪ್ರಿಲ್ 30ಕ್ಕೆ ಬಿಡುಗಡೆ ಮಾಡುವಂತೆ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಈ ಹಿಂದೆ ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿಯೂ ಅವರು ಸೇವೆ ಸಲ್ಲಿಸಿದ್ದರು. ಪ್ರತಾಪ್ ರೆಡ್ಡಿ ಅವರು 1991ನೇ ಬ್ಯಾಚ್ನ ಐಪಿಎಸ್ ಅಧಿಕಾರಿಯಾಗಿದ್ದು ಮೂಲತಃ ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯವರು.
ಪ್ರತಾಪ್ ರೆಡ್ಡಿ ಅವರ ನಿವೃತ್ತಿಗೆ ಎರಡು ತಿಂಗಳು ಬಾಕಿ ಇತ್ತು. ಇಂತಹ ಸಂದರ್ಭದಲ್ಲಿಯೇ ಅವರು ವೈಯಕ್ತಿಕ ಕಾರಣವನ್ನು ನೀಡಿ ರಾಜೀನಾಮೆ ಸಲ್ಲಿಕೆ ಮಾಡಿದ್ದು ಪೊಲೀಸ್ ವಲಯದಲ್ಲಿ ಕುತೂಹಲ ಮೂಡಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


