ರಾಜ್ಯ

ಕಾಂಗ್ರೆಸ್ ಪ್ರಣಾಳಿಕೆ ಒಕ್ಕೂಟ ರಚನೆಯನ್ನು ರಕ್ಷಿಸುತ್ತದೆ: ಸಿಎಂ ಸಿದ್ದರಾಮಯ್ಯ

ಸಂವಿಧಾನಕ್ಕೆ, ಪ್ರಜಾಪ್ರಭುತ್ವಕ್ಕೆ , ಒಕ್ಕೂಟ ವ್ಯವಸ್ಥೆಗೆ ಧಕ್ಕೆ ತರುವ ಪ್ರಯತ್ನ ನಡೆಯುತ್ತಿರುವ ಹೊತ್ತಲ್ಲಿ, ಈ ಅನಾಹುತಗಳನ್ನು ತಡೆಯುವ ಪರಿಣಾಮಕಾರಿ ಘೋಷಣೆ-ಕಾರ್ಯಕ್ರಮಗಳನ್ನು ಪ್ರಣಾಳಿಕೆಯಲ್ಲಿ ರೂಪಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಹೇಳಿದರು.

ಕಾಂಗ್ರೆಸ್ ಪ್ರಣಾಳಿಕೆ ಒಕ್ಕೂಟ ರಚನೆಯನ್ನು ರಕ್ಷಿಸುತ್ತದೆ: ಸಿಎಂ ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ
Published On :

ಬೆಂಗಳೂರು: ಸಂವಿಧಾನಕ್ಕೆ, ಪ್ರಜಾಪ್ರಭುತ್ವಕ್ಕೆ , ಒಕ್ಕೂಟ ವ್ಯವಸ್ಥೆಗೆ ಧಕ್ಕೆ ತರುವ ಪ್ರಯತ್ನ ನಡೆಯುತ್ತಿರುವ ಹೊತ್ತಲ್ಲಿ, ಈ ಅನಾಹುತಗಳನ್ನು ತಡೆಯುವ ಪರಿಣಾಮಕಾರಿ ಘೋಷಣೆ-ಕಾರ್ಯಕ್ರಮಗಳನ್ನು ಪ್ರಣಾಳಿಕೆಯಲ್ಲಿ ರೂಪಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಹೇಳಿದರು.

ಬೆಂಗಳೂರಿನ ಕ್ಯಾಪಿಟಲ್ ಹೋಟೆಲ್‌ನಲ್ಲಿ ನಡೆದ ಲೋಕಸಭಾ ಚುನಾವಣೆಯ ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸಮಿತಿ ಸಭೆಯಲ್ಲಿ ಸಿದ್ದರಾಮಯ್ಯ ಅವರು ಮಾತನಾಡಿದರು.

ದೇಶದಲ್ಲಿ ಆಗಿರುವ ಅಭಿವೃದ್ಧಿಯಲ್ಲಿ, ಜಾರಿ ಆಗಿರುವ ಸಾಮಾಜಿಕ ಭದ್ರತೆ, ಆಹಾರ ಭದ್ರತೆ ಕಾರ್ಯಕ್ರಮಗಳಲ್ಲಿ ಬಹುತೇಕ ಎಲ್ಲವೂ ಕಾಂಗ್ರೆಸ್ ಅವಧಿಯವು. ಮನಮೋಹನ್ ಸಿಂಗ್ ಅವರ ಅವಧಿಯಲ್ಲಿ ಆಹಾರ ಭದ್ರತಾ ಕಾಯ್ದೆ, ಶಿಕ್ಷಣ ಹಕ್ಕು ಮತ್ತು ಮಾಹಿತಿ ಹಕ್ಕು ಕಾಯ್ದೆಗಳು ಜಾರಿ ಆದವು ಎಂದು ಮುಖ್ಯಮಂತ್ರಿಗಳು ಪಟ್ಟಿ ಮಾಡಿದರು.

ದೇಶದ ಸಮಸ್ಯೆಗಳಿಗೆ ಪರಿಹಾರ ಒದಗಿಸುವ ವಾಗ್ದಾನಗಳನ್ನು ಕೊಡಬೇಕು ಮತ್ತು ಅವುಗಳನ್ನು ಈಡೇರಿಸಬೇಕು. ಜನರ ವಿಶ್ವಾಸ ಉಳಿಸಿಕೊಳ್ಳುವಂತಹ ವಾಗ್ದಾನಗಳನ್ನು ನಾವು ನೀಡಬೇಕು ಎನ್ನುವುದು ಕಾಂಗ್ರೆಸ್ ಬದ್ಧತೆ. 2013 ರಲ್ಲಿ ನೀಡಿದ್ದ ವಾಗ್ದಾನಗಳನ್ನು ನಮ್ಮ ಸರ್ಕಾರ ಶೇ98 ರಷ್ಟು ಈಡೇರಿಸಿದೆ. 2024 ರಲ್ಲೂ ಐದಕ್ಕೆ ಐದೂ ಗ್ಯಾರಂಟಿಗಳನ್ನು ಜಾರಿ ಮಾಡಿ ಉಳಿದ ಭರವಸೆಗಳನ್ನು ಯಶಸ್ವಿಯಾಗಿ ಜಾರಿ ಮಾಡುತ್ತಿದ್ದೇವೆ ಎಂದು ಹೇಳಿದರು.

ಇದೇ ವೇಳೆ ಪಕ್ಷದ ಪ್ರಣಾಳಿಕೆಯಲ್ಲಿ ಪರಿಣಾಮಕಾರಿಯಾಗಿ ನಿಭಾಯಿಸಬೇಕಾದ ಕಾಂಗ್ರೆಸ್‌ ಗ್ಯಾರಂಟಿ ಯೋಜನೆಗಳನ್ನು ಮೋದಿ ಸರ್ಕಾರ ನಕಲು ಮಾಡುತ್ತಿದ್ದು, ಈ ಬಗ್ಗೆ ಮಾಜಿ ಕೇಂದ್ರ ಸಚಿವ ಪಿ ಚಿದಂಬರಂ ನೇತೃತ್ವದ ಎಐಸಿಸಿ ಪ್ರಣಾಳಿಕೆ ಸಮಿತಿ ಎಚ್ಚರದಿಂದಿರಬೇಕೆಂದು ತಿಳಿಸಿದರು.

ದೇಶದ ಸಮಸ್ಯೆಗಳನ್ನು ಪರಿಹರಿಸುವುದು ಪಕ್ಷದ ಗುರಿಯಾಗಿದ್ದು, ಭರವಸೆಗಳು ಜನರ ವಿಶ್ವಾಸ ಗಳಿಸಲು ಪ್ರಣಾಳಿಕೆಯ ಭಾಗವಾಗಬೇಕು ಎಂದು ಸಲಹೆ ನೀಡಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.