ರಾಜ್ಯ

ಬೆಂಗಳೂರು: ಬೈಕ್ ಗೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ, ಸವಾರ ಸಾವು, ಚಾಲಕನ ಬಂಧನ

ಯಶವಂತಪುರ ಮೆಟ್ರೋ ನಿಲ್ದಾಣದ ಬಳಿ ಸೋಮವಾರ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ(ಕೆಎಸ್‌ಆರ್‌ಟಿಸಿ) ಬಸ್‌, ಬೈಕ್ ಗೆ ಡಿಕ್ಕಿ ಹೊಡೆದಿದ್ದು, ಭೀಕರ ಅಪಘಾತದಲ್ಲಿ 50 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ ಎಂದು ಪೊಲೀಸರು...

ಬೆಂಗಳೂರು: ಬೈಕ್ ಗೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ, ಸವಾರ ಸಾವು, ಚಾಲಕನ ಬಂಧನ
ಸಾಂದರ್ಭಿಕ ಚಿತ್ರ
Published On :

ಬೆಂಗಳೂರು: ಯಶವಂತಪುರ ಮೆಟ್ರೋ ನಿಲ್ದಾಣದ ಬಳಿ ಸೋಮವಾರ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ(ಕೆಎಸ್‌ಆರ್‌ಟಿಸಿ) ಬಸ್‌, ಬೈಕ್ ಗೆ ಡಿಕ್ಕಿ ಹೊಡೆದಿದ್ದು, ಭೀಕರ ಅಪಘಾತದಲ್ಲಿ 50 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಇಂದು ಬೆಳಗ್ಗೆ 10.30ರ ಸುಮಾರಿಗೆ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ರಾಜೇಂದ್ರ ಅವರು ಜಿಎಸ್‌ಟಿ ಕಚೇರಿಗೆ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ.

ಪೊಲೀಸರ ಪ್ರಕಾರ, ಕೆಎಸ್‌ಆರ್‌ಟಿಸಿ ಬಸ್ ತುಮಕೂರು ಡಿಪೋದಿಂದ ಮೆಜೆಸ್ಟಿಕ್ ಕಡೆಗೆ ಹೋಗುತ್ತಿದ್ದಾಗ ಬೈಕ್‌ಗೆ ಗುದ್ದಿದ ಪರಿಣಾಮ, ಸವಾರ ವಾಹನದ ಕೆಳಗೆ ಬಿದ್ದಿದ್ದಾರೆ.

ಗಂಭೀರವಾಗಿ ಗಾಯಾಗೊಂಡಿದ್ದ ರಾಜೇಂದ್ರ ಅವರನ್ನು ತಕ್ಷಣ ಆಸ್ಪತ್ರೆಗೆ ಕೊಂಡೊಯ್ಯಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟರು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಅಪಘಾತಕ್ಕೆ ಸಂಬಂಧಿಸಿದಂತೆ ನಾವು ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿ ಚಾಲಕನನ್ನು ಬಂಧಿಸಿದ್ದೇವೆ ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.