ಬೆಂಗಳೂರು: 50 ಲಕ್ಷ ಕೊಟ್ಟು 2 ವರ್ಷದ ಹಿಂದೆ ಮದುವೆ; ಗಂಡನ ಅಕ್ರಮ ಸಂಬಂಧದಿಂದ ನೊಂದ ಗೃಹಿಣಿ ಆತ್ಮಹತ್ಯೆ!
ಗಂಡನ ಅಕ್ರಮ ಸಂಬಂಧದಿಂದ ಬೇಸತ್ತ 22 ವರ್ಷದ ಗೃಹಿಣಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ರಾಜಗೋಪಾಲನಗರದಲ್ಲಿ ನಡೆದಿದೆ.

ಬೆಂಗಳೂರು: ಗಂಡನ ಅಕ್ರಮ ಸಂಬಂಧದಿಂದ ಬೇಸತ್ತ 22 ವರ್ಷದ ಗೃಹಿಣಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ರಾಜಗೋಪಾಲನಗರದಲ್ಲಿ ನಡೆದಿದೆ.
ಕಾವ್ಯ(22) ನೇಣಿಗೆ ಶರಣಾಗಿರುವ ಗೃಹಿಣಿ. ಮೂಲತಃ ತುಮಕೂರಿನ ಕುಣಿಗಲ್ ನಿವಾಸಿಯಾಗಿರುವ ಕಾವ್ಯ ಕಳೆದ ಎರಡು ವರ್ಷಗಳ ಹಿಂದೆಯಷ್ಟೇ ಪ್ರವೀಣ್ ಎಂಬಾತನೊಂದಿಗೆ ಮದುವೆಯಾಗಿತ್ತು.
ಪತಿ-ಪತ್ನಿ ರಾಜಗೋಪಾಲನಗರದ ಮೋಹನ್ ಥಿಯೇಟರ್ ಸಮೀಪದ ಮನೆಯಲ್ಲಿದ್ದರು. ಒಂದು ವರ್ಷದ ಮಗುವನ್ನು ಬಿಟ್ಟು ಕಾವ್ಯ ಸಾವಿಗೆ ಶರಣಾಗಿದ್ದಾರೆ.
ಪ್ರವೀಣ್ ಎಂಜಿನಿಯರ್ ಆಗಿದ್ದರೂ ಕೆಲಸ ಮಾಡುತ್ತಿರಲಿಲ್ಲ. ಈ ಸಂಬಂಧ ಸಂತ್ರಸ್ತೆಯ ಪೋಷಕರು ಆತನಿಗೆ ಬೇರೊಬ್ಬ ಮಹಿಳೆಯ ಜೊತೆ ಅಕ್ರಮ ಸಂಬಂಧ ಇತ್ತು ಎಂದು ಮೃತ ಗೃಹಿಣಿ ಪೋಷಕರು ಆರೋಪಿಸಿದ್ದಾರೆ. ಸಂತ್ರಸ್ತೆಯ ಸಂಬಂಧಿಕರು ಹಲ್ಲೆಗೆ ಯತ್ನಿಸಿದ್ದರಿಂದ ಆರೋಪಿಗಳನ್ನು ಬಂಧಿಸಲು ಪೊಲೀಸರು ಹರಸಾಹಸ ಪಡಬೇಕಾಯಿತು. ಪ್ರಕರಣ ಸಂಬಂಧ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


