ಬೆಂಗಳೂರು: ನಂಬರ್ ಪ್ಲೇಟ್ ಬಿಚ್ಚಿಕೊಡ್ತೀನಿ, ಎಷ್ಟು ಕೇಸ್ ಬೇಕಾದ್ರೂ ಹಾಕ್ಕೋ; ಟ್ರಾಫಿಕ್ ಪೊಲೀಸ್ ಕೈಕಚ್ಚಿ, ಹಾವಳಿ ನಡೆಸಿದ್ದ ಸವಾರನ ಬಂಧನ
ಹೆಲ್ಮೆಟ್ ಹಾಕದೇ ವಾಹನ ಚಲಾಯಿಸಿದ್ದನ್ನು ಮೊಬೈಲ್ನಲ್ಲಿ ಫೋಟೋ ತೆಗೆದಿದ್ದಕ್ಕೆ ಕೋಪಗೊಂಡ ವಾಹನ ಸವಾರ ಟ್ರಾಫಿಕ್ ಕಾನ್‌ಸ್ಟೆಬಲ್ ಕೈ ಬೆರಳು ಕಚ್ಚಿ ಗಾಯಗೊಳಿಸಿರುವ ಘಟನೆ ನಗರದಲ್ಲಿ ನಡೆದಿದೆ.

ಬೆಂಗಳೂರು: ಹೆಲ್ಮೆಟ್ ಹಾಕದೇ ವಾಹನ ಚಲಾಯಿಸಿದ್ದನ್ನು ಮೊಬೈಲ್ನಲ್ಲಿ ಫೋಟೋ ತೆಗೆದಿದ್ದಕ್ಕೆ ಕೋಪಗೊಂಡ ವಾಹನ ಸವಾರ ಟ್ರಾಫಿಕ್ ಕಾನ್‌ಸ್ಟೆಬಲ್ ಕೈ ಬೆರಳು ಕಚ್ಚಿ ಗಾಯಗೊಳಿಸಿರುವ ಘಟನೆ ನಗರದಲ್ಲಿ ನಡೆದಿದೆ. ವಿಲ್ಸನ್ ಗಾರ್ಡನ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ವಾಹನ ಸವಾರನನ್ನು ಬಂಧಿಸಿದ್ದಾರೆ.
ಬಿಟಿಎಂ ಲೇಔಟ್ 1ನೇ ಹಂತದ ನಿವಾಸಿ ಸೈಯದ್ ಶಫಿ ಎಂಬಾತ ಹೆಲ್ಮೆಟ್ ಧರಿಸದೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ, ಈ ವೇಳೆ ಕಾನ್‌ಸ್ಟೆಬಲ್ ಸಿದ್ದರಾಮೇಶ್ವರ ಕೌಜಲಗಿ ಆತನ ಫೋಟೊ ತೆಗೆಯುತ್ತಿದ್ದರು. ಇದನ್ನು ಕಂಡು ಆಕ್ರೋಶಗೊಂಡ ಆರೋಪಿ ಅವರ ಕೈ ಬೆರಳಪ ಕಚ್ಚಿದ್ದಾನೆ. ಜೊತೆಗೆ ಕಾನ್‌ಸ್ಟೆಬಲ್‌ನ ಮೊಬೈಲ್ ಕಸಿದುಕೊಂಡು ಪರಾರಿಯಾಗಲು ಯತ್ನಿಸಿದ್ದಾನೆ. ಈ ವೇಳೆ ಹೆಡ್ ಕಾನ್‌ಸ್ಟೆಬಲ್ ತಮ್ಮ ಸಹೋದ್ಯೋಗಿಯೊಂದಿಗೆ ಆರೋಪಿಯನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.
ದ್ವಿಚಕ್ರ ವಾಹನವನ್ನು ರಸ್ತೆಯ ಮಧ್ಯದಲ್ಲಿ ನಿಲ್ಲಿಸಿ ಸಂಚಾರಕ್ಕೆ ಅಡ್ಡಿಪಡಿಸಿದ ಆರೋಪಿ ಶಫಿ ಪೊಲೀಸ್ ಠಾಣೆಗೆ ಬೆಂಕಿ ಹಚ್ಚುವ ಬೆದರಿಕೆ ಹಾಕಿದ್ದಾನೆ . ನಂಬರ್ ಪ್ಲೇಟ್ ಬಿಚ್ಚಿಕೊಡುತ್ತೇನೆ, ಎಷ್ಟು ಕೇಸ್ ಹಾಕೊಳ್ತೀಯಾ ಹಾಕ್ಕೋ ಎಂದು ಏಕವಚನದಲ್ಲೇ ನಿಂದಿಸಿ ಕಾನ್‌ಸ್ಟೆಬಲ್ ಕೈಯಲ್ಲಿದ್ದ ಮೊಬೈಲ್ ಕಸಿದು ಪರಾರಿಯಾಗಲು ಯತ್ನಿಸಿದ್ದಾನೆ.
ಈ ವೇಳೆವಾಹನ ಸವಾರನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕರ್ತವ್ಯನಿರತ ಪೊಲೀಸರ ಮೇಲೆ ಹಲ್ಲೆ, ಬೆದರಿಕೆ ಹಾಕಿರುವ ಸಂಬಂಧ ಸಂಚಾರ ಪೊಲೀಸರು ನೀಡಿದ ದೂರಿನ ಮೇರೆಗೆ ವಿಲ್ಸನ್ ಗಾರ್ಡನ್ ಠಾಣೆಯ ಕಾನೂನು ಸುವ್ಯವಸ್ಥೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


