ಟೆನಿಸ್ ಆಟಗಾರ ರೋಹನ್ ಬೋಪಣ್ಣಗೆ ಸಿಎಂ ಸಿದ್ದರಾಮಯ್ಯ ಸನ್ಮಾನ: 50 ಲಕ್ಷ ರೂ. ಬಹುಮಾನ ಘೋಷಣೆ
ಇತ್ತೀಚೆಗೆ ಆಸ್ಟ್ರೇಲಿಯಾ ಮುಕ್ತ ಟೆನಿಸ್ ಟೂರ್ನಿಯ ಪುರುಷರ ಡಬಲ್ಸ್ ವಿಭಾಗದಲ್ಲಿ ಪ್ರಶಸ್ತಿ ಗೆದ್ದು ಐತಿಹಾಸಿಕ ಸಾಧನೆ ಮಾಡಿದ ರೋಹನ್ ಬೋಪಣ್ಣ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಹ್ವಾನಿಸಿ ಸನ್ಮಾನಿಸಿ 50 ಲಕ್ಷ ರೂಪಾಯಿ ಬಹುಮಾನ ಘೋಷಿಸಿದ್ದಾರೆ.

ಬೆಂಗಳೂರು: ಇತ್ತೀಚೆಗೆ ಆಸ್ಟ್ರೇಲಿಯಾ ಮುಕ್ತ ಟೆನಿಸ್ ಟೂರ್ನಿಯ ಪುರುಷರ ಡಬಲ್ಸ್ ವಿಭಾಗದಲ್ಲಿ ಪ್ರಶಸ್ತಿ ಗೆದ್ದು ಐತಿಹಾಸಿಕ ಸಾಧನೆ ಮಾಡಿದ ರೋಹನ್ ಬೋಪಣ್ಣ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಹ್ವಾನಿಸಿ ಸನ್ಮಾನಿಸಿ 50 ಲಕ್ಷ ರೂಪಾಯಿ ಬಹುಮಾನ ಘೋಷಿಸಿದ್ದಾರೆ.
ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಹಾಗೂ ರೋಹನ್ ಬೋಪಣ್ಣ ಅವರ ಕುಟುಂಬದವರು ಹಾಜರಿದ್ದರು.
ಕಳೆದ ಜನವರಿ 27ರಂದು ಮೆಲ್ಬೋರ್ನ್ ನಲ್ಲಿ ನಡೆದ ಆಸ್ಟ್ರೇಲಿಯಾ ಓಪನ್ ಟೆನಿಸ್ ಟೂರ್ನಿಯ ಪುರುಷರ ಡಬಲ್ಸ್ ಫೈನಲ್(Australian Open Men’s Doubles Final) ಪಂದ್ಯದಲ್ಲಿ ರೋಹನ್ ಬೋಪಣ್ಣ ಮತ್ತು ಅವರ ಜತೆಗಾರ ಆಸ್ಟ್ರೇಲಿಯಾದ ಮ್ಯಾಥ್ಯೂ ಎಬ್ಡೆನ್ (Matthew Ebden) ಸೇರಿಕೊಂಡು ಇಟಲಿಯ ಸಿಮೋನ್ ಬೊಲೆಲ್ಲಿ-ಆ್ಯಂಡ್ರಿಯಾ ವಸಸ್ಸೊರಿ ವಿರುದ್ಧ 7-6(7-0), 7-5 ನೇರ ಸೆಟ್ಗಳಿಂದ ಗೆಲುವು ಸಾಧಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


