ಹಿಂದೂ ವಿರೋಧಿ ಹೇಳಿಕೆ: ಮಂಗಳೂರು ಶಿಕ್ಷಕಿಯ ವಜಾ, ಸತ್ಯಶೋಧನಾ ತಂಡದಿಂದ ತನಿಖೆಗೆ ಕಾಂಗ್ರೆಸ್ ಆಗ್ರಹ
ಹಿಂದೂ ವಿರೋಧಿ ಹೇಳಿಕೆ ನೀಡಿದ ಆರೋಪದ ಮೇಲೆ ಇಲ್ಲಿನ ಖಾಸಗಿ ಶಾಲೆಯೊಂದರ ಶಿಕ್ಷಕಿಯೊಬ್ಬರು ವಜಾಗೊಂಡಿರುವ ಕುರಿತು ತನಿಖೆ ನಡೆಸಲು ಸತ್ಯಶೋಧನಾ ತಂಡವನ್ನು ರಚಿಸುವಂತೆ ಕರ್ನಾಟಕ ಶಿಕ್ಷಣ ಇಲಾಖೆಗೆ ಕಾಂಗ್ರೆಸ್ ಮುಖಂಡರು ಮಂಗಳವಾರ ಒತ್ತಾಯಿಸಿದ್ದಾರೆ.

ಮಂಗಳೂರು: ತರಗತಿ ಒಳಗಡೆ ಹಿಂದೂ ವಿರೋಧಿ ಹೇಳಿಕೆ ನೀಡಿದ ಆರೋಪದ ಮೇಲೆ ಇಲ್ಲಿನ ಖಾಸಗಿ ಶಾಲೆಯೊಂದರ ಶಿಕ್ಷಕಿಯೊಬ್ಬರು ವಜಾಗೊಂಡಿರುವ ಕುರಿತು ತನಿಖೆ ನಡೆಸಲು ಸತ್ಯಶೋಧನಾ ತಂಡವನ್ನು ರಚಿಸುವಂತೆ ಕರ್ನಾಟಕ ಶಿಕ್ಷಣ ಇಲಾಖೆಗೆ ಕಾಂಗ್ರೆಸ್ ಮುಖಂಡರು ಮಂಗಳವಾರ ಒತ್ತಾಯಿಸಿದ್ದಾರೆ.
ಸೇಂಟ್ ಜೊರೋಸಾ ಆಂಗ್ಲ ಶಾಲೆಗೆ ಭೇಟಿ ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಚಿವ ಬಿ ರಮಾನಾಥ್ ರೈ ಮತ್ತು ವಿನಯ್ ಕುಮಾರ್ ಸೊರಕೆ, ಕೋಮು ಸೌಹಾರ್ದತೆಗೆ ಧಕ್ಕೆ ತರುವ ಘಟನೆಯ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು.
ಪ್ರತಿಭಟನೆಗೆ ಮಕ್ಕಳನ್ನು ಬಳಸಿಕೊಳ್ಳುವ ಬಿಜೆಪಿ ನಾಯಕರ ಪ್ರಚೋದನಕಾರಿ ಹೇಳಿಕೆಗಳ ಬಗ್ಗೆ ತನಿಖೆ ನಡೆಸಿ ಇಂತಹ ಘಟನೆಗಳು ಮರುಕಳಿಸದಂತೆ ನೋಡಿಕೊಳ್ಳಬೇಕು ಎಂದು ರೈ ಹೇಳಿದರು.
ಶಾಲೆಗೆ ಭೇಟಿ ನೀಡಿದ ಕಾಂಗ್ರೆಸ್ ನಿಯೋಗದಲ್ಲಿದ್ದ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ವಕ್ತಾರೆ ಫರ್ಜಾನಾ ಮಾತನಾಡಿ, ಈ ಘಟನೆಯಿಂದಾಗಿ ಶಾಲೆಗೆ ಪೊಲೀಸರು ರಕ್ಷಣೆ ನೀಡಬೇಕಾದ ಸ್ಥಿತಿ ನಿರ್ಮಾಣವಾಗಿದ್ದು, ಜೈ ಶ್ರೀ ರಾಮ್ ಘೋಷಣೆ ಕೂಗಲು ವಿದ್ಯಾರ್ಥಿಗಳನ್ನು ಪ್ರಚೋದಿಸಿದ ಸ್ಥಳೀಯ ಬಿಜೆಪಿ ಶಾಸಕರ ಹೇಳಿಕೆ ಖಂಡನಾರ್ಹ ಎಂದರು.
ಕಾಂಗ್ರೆಸ್ ಮುಖಂಡರಾದ ಜೆ ಆರ್ ಲೋಬೋ, ಮಮತಾ ಗಟ್ಟಿ, ಶಶಿಧರ ಹೆಗಡೆ, ಶಾಹುಲ್ ಹಮೀದ್, ಶಾಲೆಟ್ ಪಿಂಟೋ ನಿಯೋಗದಲ್ಲಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


