ತೆರಿಗೆ ಬಾಕಿ ಹೆಸರಿನಲ್ಲಿ ನಾಗರಿಕರಿಗೆ ಕಿರುಕುಳ ನೀಡದಿರಿ: ಬಿಬಿಎಂಪಿಗೆ ಬಿಜೆಪಿ ಆಗ್ರಹ
ತೆರಿಗೆ ಬಾಕಿ ಹೆಸರಿನಲ್ಲಿ ನಾಗರಿಕರಿಗೆ ಕಿರುಕುಳ ನೀಡದಿರಿ ಎಂದು ಬಿಬಿಎಂಪಿಗೆ ಬಿಜೆಪಿ ಶಾಸಕರು ಆಗ್ರಹಿಸಿದ್ದಾರೆ.

ಬೆಂಗಳೂರು: ತೆರಿಗೆ ಬಾಕಿ ಹೆಸರಿನಲ್ಲಿ ನಾಗರಿಕರಿಗೆ ಕಿರುಕುಳ ನೀಡದಿರಿ ಎಂದು ಬಿಬಿಎಂಪಿಗೆ ಬಿಜೆಪಿ ಶಾಸಕರು ಆಗ್ರಹಿಸಿದ್ದಾರೆ.
ಸೋಮವಾರ ಬಿಜೆಪಿ ಶಾಸಕರಾದ ಭೈರತಿ ಬಸವರಾಜ, ಎಸ್.ಆರ್.ವಿಶ್ವನಾಥ್, ಮುನಿರಾಜು, ಸಿ.ಕೆ.ರಾಮಮೂರ್ತಿ ಸೇರಿದಂತೆ ಇತರ ಮುಖಂಡರ ನೇತೃತ್ವದ ನಿಯೋಗವು ಬಿಬಿಎಂಪಿ ಆಯುಕ್ತರಿಗೆ ಈ ಸಂಬಂಧ ದೂರು ನೀಡಿತು.
ಪರಿಷ್ಕೃತ ತೆರಿಗೆ ಮತ್ತು ಬಾಕಿ ಹೆಸರಿನಲ್ಲಿ ನಾಗರಿಕರಿಗೆ ಕಿರುಕುಳ ನೀಡುವುದನ್ನು ಪಾಲಿಕೆ ನಿಲ್ಲಿಸಬೇಕು. ಸ್ವಯಂ ಆಸ್ತಿ ತೆರಿಗೆ ಘೋಷಣೆಯಲ್ಲಿ ದೋಷಪೂರಿತವಾಗಿರುವ ಕಟ್ಟಡಗಳಿಗೆ ದುಪ್ಪಟ್ಟು ದಂಡ, ಬಡ್ಡಿ ಮತ್ತು ಕಾನೂನು ಬಾಹಿರವಾಗಿ ಕಂದಾಯ ವಸೂಲಿ ಮಾಡಲಾಗುತ್ತಿದೆ ಎಂದು ದೂರಿನಲ್ಲಿ ಆರೋಪಿಸಿದ್ದಾರೆ.
ಸ್ವಯಂ ಘೋಷಿತ ತೆರಿಗೆ ಪದ್ಧತಿಯಲ್ಲಿ ಬಿಬಿಎಂಪಿ ಕಾಯ್ದೆಯನ್ವಯ ಐದು ವರ್ಷದಲ್ಲಿ ಹಿಂದಿನ ಬಾಕಿಯ ಹೆಸರಲ್ಲಿ ದಂಡ ಮತ್ತು ಬಡ್ಡಿ ವಸೂಲಿ ಮಾಡುವ ಅಧಿಕಾರ ಇಲ್ಲ. ಆದರೆ, ಕಾಯ್ದೆ ವಿರುದ್ಧವಾಗಿ ಪಾಲಿಕೆ ಕ್ರಮ ಜರುಗಿಸುತ್ತಿದೆ. ನಗರದಲ್ಲಿ ಕಳೆದ ಒಂಬತ್ತು ತಿಂಗಳಿನಿಂದ ಯಾವುದೇ ಅಭಿವೃದ್ಧಿ ಯೋಜನೆಯನ್ನು ಕೈಗೊಳ್ಳಲು ವಿಫಲವಾಗಿರುವ ಸರ್ಕಾರ ಇದೀಗ ನಗರದ ನಾಗರೀಕರನ್ನು ಸುಲಿಗೆ ಮಾಡಿ ಸಂಪನ್ಮೂಲ ಕ್ರೋಢೀಕರಣ ಮಾಡಲು ಮುಂದಾಗಿದೆ ಎಂದು ಕಿಡಿಕಾರಿದೆ.
ಇದನ್ನೂ ಓದಿ: ಕಣ್ಣು ಕುಕ್ಕುವ ಎಲ್ಇಡಿ ಜಾಹೀರಾತುಗಳಿಂದ ವಾಹನ ಸವಾರರಿಗೆ ಕಿರಿಕಿರಿ: ಸರ್ಕಾರ, ಬಿಬಿಎಂಪಿಗೆ ಹೈಕೋರ್ಟ್ ನೋಟಿಸ್
'ಬಿಬಿಎಂಪಿ ಕೇಂದ್ರ ಕಚೇರಿಗೆ ತೆರಳಿದ ಬಿಜೆಪಿ ಶಾಸಕರ ನಿಯೋಗ, ಬಾಕಿ ಇರುವ ತೆರಿಗೆಗಳ ಮೇಲೆ ದಂಡ ವಿಧಿಸುವ ಆದೇಶವನ್ನು ಕೂಡಲೇ ಹಿಂಪಡೆಯಬೇಕು. ಇಲ್ಲದಿದ್ದರೆ ನಗರದಾದ್ಯಂತ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ ಎಂದು ಜಯನಗರ ಶಾಸಕ ಸಿ.ಕೆ.ರಾಮಮೂರ್ತಿ ಅವರು ಹೇಳಿದ್ದಾರೆ.
ಸ್ವ-ಆಸ್ತಿ ತೆರಿಗೆ ಘೋಷಣೆಯಲ್ಲಿ ದೋಷವಿರುವ ಕಟ್ಟಡಗಳಿಗೆ ಎರಡು ಬಾರಿ ದಂಡ ಮತ್ತು ಬಡ್ಡಿ ವಿಧಿಸಲಾಗುತ್ತಿದೆ. ತೆರಿಗೆ ಪರಿಷ್ಕರಣೆ ನೆಪದಲ್ಲಿ ಸುಮಾರು 76,000 ಮನೆಗಳಿಗೆ ನೋಟಿಸ್ ನೀಡಲಾಗಿದೆ. ನೋಟಿಸ್ ಬಳಿಕ ಹಲವು ಕಟ್ಟಡಗಳಿಗೆ ಬೀಗ ಹಾಕಿದ್ದಾರೆ. ನೀಡಲು ಪ್ರಾರಂಭಿಸುತ್ತಿದ್ದಾರೆಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


