ಯಲಹಂಕ: 85 ಕೋಟಿ ರೂ. ಮೌಲ್ಯದ ಆಸ್ತಿಯ ಅಕ್ರಮ ಒತ್ತುವರಿ ತೆರವು!
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳು ಯಲಹಂಕದಲ್ಲಿ 2.75 ಎಕರೆ ಪ್ರದೇಶದಲ್ಲಿದ್ದ 85 ಕೋಟಿ ರೂಪಾಯಿ ಮೌಲ್ಯದ ಆಸ್ತಿಯ ಅಕ್ರಮ ಒತ್ತುವರಿಯನ್ನು ಮಂಗಳವಾರ ತೆರವುಗೊಳಿಸಿದ್ದಾರೆ.

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳು ಯಲಹಂಕದಲ್ಲಿ 2.75 ಎಕರೆ ಪ್ರದೇಶದಲ್ಲಿದ್ದ 85 ಕೋಟಿ ರೂಪಾಯಿ ಮೌಲ್ಯದ ಆಸ್ತಿಯ ಅಕ್ರಮ ಒತ್ತುವರಿಯನ್ನು ಮಂಗಳವಾರ ತೆರವುಗೊಳಿಸಿದ್ದಾರೆ.
ಕಂದಾಯ ಇಲಾಖೆ ಹಾಗೂ ಪೊಲೀಸರ ಸಹಕಾರದೊಂದಿಗೆ ಬಿಬಿಎಂಪಿ ಮಂಗಳವಾರ ಒತ್ತುವರಿ ತೆರವು ಕಾರ್ಯಾಚರಣೆ ನಡೆಸಿತು. ಬಿಬಿಎಂಪಿ ಹೇಳಿಕೆ ಪ್ರಕಾರ, ಅತಿಕ್ರಮಣದಾರರು ಯಲಹಂಕದ ಬ್ಯಾಟರಾಯನಪುರ ವಿಭಾಗದ ಕೊಡಿಗೇಹಳ್ಳಿ ವಾರ್ಡ್ ವ್ಯಾಪ್ತಿಯ ಕೋಟಿಹೊಸಹಳ್ಳಿ ಗ್ರಾಮದ ಸರ್ವೆ ನಂಬರ್ 52ರಲ್ಲಿ ಒತ್ತುವರಿ ಮಾಡಿಕೊಂಡ ಜಾಗದಲ್ಲಿ ತಾತ್ಕಾಲಿಕ ಶೆಡ್‌ಗಳನ್ನು ಹಾಕಿಕೊಂಡು ವಾಣಿಜ್ಯ ಸಂಸ್ಥೆಗಳನ್ನೂ ನಡೆಸುತ್ತಿದ್ದರು ಎಂದು ಹೇಳಿದೆ.
ಭೂಮಿ ಒತ್ತುವರಿ ವಿಚಾರ ತಿಳಿದ ಕೂಡಲೇ ಬಿಬಿಎಂಪಿ ಯಲಹಂಕ ವಲಯ ಅಧಿಕಾರಿಗಳು, ಕಂದಾಯ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸ್ ಸಿಬ್ಬಂದಿ ಜಂಟಿಯಾಗಿ ಮಂಗಳವಾರ ತೆರವು ಕಾರ್ಯಾಚರಣೆ ನಡೆಸಿದರು.
ಒತ್ತುವರಿ ಕಾರ್ಯಾಚರಣೆಯಲ್ಲಿ ನಾಲ್ಕು ಜೆಸಿಬಿಗಳು, 12 ಟ್ರ್ಯಾಕ್ಟರ್‌ಗಳನ್ನು ಮತ್ತು 140 ಪೊಲೀಸ್ ಸಿಬ್ಬಂದಿ ಮತ್ತು 70 ಕಾರ್ಮಿಕರು ಬಳಸಿಕೊಳ್ಳಲಾಗಿತ್ತು. ಅತಿಕ್ರಮಣಗೊಂಡ ಭೂಮಿಯನ್ನು ಸ್ವಾಧೀನಪಡಿಸಿಕೊಂಡ ನಂತರ, ತಕ್ಷಣವೇ ಬೇಲಿ ಹಾಕಲಾಯಿತು. ಈ ಕಾರ್ಯ ಶೀಘ್ರ ಪೂರ್ಣಗೊಳ್ಳಲಿದೆ’ ಎಂದು ಯಲಹಂಕ ವಲಯದ ಬಿಬಿಎಂಪಿ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


