ಹೈಕೋರ್ಟ್ ನಿಂದ 10 ಸಾವಿರ ರೂ. ದಂಡ: ಸುಪ್ರೀಂಕೋರ್ಟ್ ಮೆಟ್ಟಿಲೇರಿದ ಸಿಎಂ ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ(CM Siddaramaiah) ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ. ಪ್ರತಿಭಟನೆ ವೇಳೆ ಸಾರ್ವಜನಿಕ ಆಸ್ತಿಪಾಸ್ತಿ ಹಾನಿಯಾಗಿದೆ ಎಂಬ ಕಾರಣಕ್ಕಾಗಿ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ತಮ್ಮ ವಿರುದ್ಧ 10 ಸಾವಿರ ರೂಪಾಯಿ ದಂಡ ವಿಧಿಸಿದ್ದನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದಾರೆ.

ಬೆಂಗಳೂರು: ಸಿಎಂ ಸಿದ್ದರಾಮಯ್ಯ(CM Siddaramaiah) ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ. ಪ್ರತಿಭಟನೆ ವೇಳೆ ಸಾರ್ವಜನಿಕ ಆಸ್ತಿಪಾಸ್ತಿ ಹಾನಿಯಾಗಿದೆ ಎಂಬ ಕಾರಣಕ್ಕಾಗಿ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ತಮ್ಮ ವಿರುದ್ಧ 10 ಸಾವಿರ ರೂಪಾಯಿ ದಂಡ ವಿಧಿಸಿದ್ದನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದಾರೆ.
ಏನಿದು ಪ್ರಕರಣ?: ಬಿಜೆಪಿ ಸರ್ಕಾರದ ಅವಧಿಯಲ್ಲಿ ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣದಲ್ಲಿ ಆರೋಪ ಎದುರಿಸಿದ್ದ ಅಂದಿನ ಸಚಿವ ಕೆ.ಎಸ್. ಈಶ್ವರಪ್ಪ ಅವರ ವಿರುದ್ಧ 2022ರ ಏಪ್ರಿಲ್ 14ರಂದು ಕಾಂಗ್ರೆಸ್ ಪ್ರತಿಭಟನೆ ನಡೆಸಿತ್ತು. ಅದರ ನೇತೃತ್ವವನ್ನು ಆಗ ವಿರೋಧ ಪಕ್ಷದ ನಾಯಕರಾಗಿದ್ದ ಸಿದ್ದರಾಮಯ್ಯ ವಹಿಸಿದ್ದರು.
ಮೃತ ಸಂತೋಷ್ ಬರೆದಿಟ್ಟಿದ್ದ ಡೆತ್‌ನೋಟ್‌ನಲ್ಲಿ ಅಂದಿನ ಸಚಿವ ಕೆ.ಎಸ್. ಈಶ್ವರಪ್ಪ ಅವರ ಹೆಸರನ್ನು ಉಲ್ಲೇಖ ಮಾಡಲಾಗಿತ್ತು. ಹೀಗಾಗಿ ನೈತಿಕ ಹೊಣೆ ಹೊತ್ತು ಕೆ.ಎಸ್. ಈಶ್ವರಪ್ಪ ಅವರ ರಾಜೀನಾಮೆಗೆ ಆಗ್ರಹಿಸಿ ಬೆಂಗಳೂರಿನ ರೇಸ್ ವ್ಯೂ ಹೋಟೆಲ್ ಬಳಿ ಪ್ರತಿಭಟನೆಯನ್ನು ಕಾಂಗ್ರೆಸ್ ನಾಯಕರು ಮಾಡಿದ್ದರು. ಈ ವೇಳೆ ಸಾರ್ವಜನಿಕ ಮುಕ್ತ ಸಂಚಾರಕ್ಕೆ ಅಡ್ಡಿ ಪಡಿಸಿದ, ಕಾನೂನು ಸುವ್ಯವಸ್ಥೆಗೆ ಧಕ್ಕೆ ಉಂಟು ಮಾಡಿದ ಆರೋಪದ ಮೇಲೆ ನಗರದ ಹೈ ಗ್ರೌಂಡ್ಸ್ ಠಾಣಾ ಪೊಲೀಸರು ದೂರು ದಾಖಲಿಸಿಕೊಂಡಿದ್ದರು.
ತಮಗೆ ದಂಡ ವಿಧಿಸಿರುವುದು, ಕೋರ್ಟ್‌ಗೆ ಹಾಜರಾಗುವಂತೆ ಸೂಚನೆ ನೀಡಿದ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ. ಪ್ರತಿಭಟನೆ ಕಾನೂನು ಬದ್ಧವಾಗಿದೆ ಎಂಬ ವಾದದೊಂದಿಗೆ ಅವರು ಸುಪ್ರೀಂಕೋರ್ಟ್‌ನಿಂದ ನ್ಯಾಯದಾನದ ನಿರೀಕ್ಷೆಯಲ್ಲಿ ಅರ್ಜಿ ಸಲ್ಲಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


