ರೈತರ ನೊಂದಣಿಯಲ್ಲಿ ಅಕ್ರಮ: ಒಂದು ವಾರ ಕೊಬ್ಬರಿ ಖರೀದಿ ಸ್ಥಗಿತ!

ಬೆಂಗಳೂರು: ಕೊಬ್ಬರಿ ಖರೀದಿಗೆ ರೈತರ ನೊಂದಣಿಯಲ್ಲಿ ಅವ್ಯವಹಾರಗಳಾಗಿರುವುದರಿಂದ ತಾತ್ಕಾಲಿಕ ವಾಗಿ ಒಂದು ವಾರ ಕಾಲ ಖರೀದಿ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ ಅವರು ಬುಧವಾರ ಹೇಳಿದರು.
ವಿಧಾನಸಭೆಯಲ್ಲಿ ಜೆಡಿಎಸ್‍ನ ಎಚ್.ಡಿ.ರೇವಣ್ಣ ಸೇರಿದಂತೆ ಪಕ್ಷಾತೀತ ವಾಗಿ ಬಹುತೇಕ ಶಾಸಕರು ಪ್ರಸ್ತಾಪಿಸಿದ ಸಾರ್ವಜನಿಕ ಮಹತ್ವದ ವಿಚಾರ ಕುರಿತು ಸಚಿವರು ಉತ್ತರ ನೀಡಿದರು.
ಇಲಾಖೆಯಿಂದ ಖರೀದಿಸಲಾಗಿದ್ದ ಕಂಪ್ಯೂಟರ್ ಬದಲಿಗೆ ಅಧಿಕಾರಿಗಳು ಮತ್ತು ಹೊರ ಗುತ್ತಿಗೆ ಸಿಬ್ಬಂದಿಗಳು ತಾವೇ ಬೇರೆ ಕಂಪ್ಯೂಟರ್ ಖರೀದಿಸಿ ಅದನ್ನು ರೈತರ ಮನೆ ಬಾಗಿಲಿಗೆ ತೆಗೆದುಕೊಂಡು ಹೋಗಿ ನೋಂದಣಿ ಮಾಡಿಸಿದ್ದಾರೆ. ಹಾಸನ ಜಿಲ್ಲೆಯಲ್ಲಿ ಇದು ವ್ಯಾಪಕವಾಗಿ ಕಂಡುಬರುತ್ತಿದೆ. ಬೇರೆ ಜಿಲ್ಲೆಯಿಂದ 3500 ರೈತರನ್ನು ಹಾಸನದಲ್ಲಿ ನೋಂದಾವಣಿ ಮಾಡಲಾಗಿದೆ. ಹೀಗಾಗಿ ಖರೀದಿ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಿ 9 ಮಂದಿ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶಿಸಲಾಗಿದೆ. ಕ್ರಿಮಿನಲ್ ಮೊಕದ್ದಮೆ ಕೂಡ ದಾಖಲಿಸಲಾಗುತ್ತಿದೆ. ನೋಂದಣಿ ಪ್ರಕ್ರಿಯೆ ಪರಿಷ್ಕರಣೆಗೊಳಪಡಿಸಲಾಗುತ್ತಿದ್ದು, ಅಲ್ಲಿಯವರೆಗೆ ತಾತ್ಕಾಲಿಕ ವಾಗಿ ಖರೀದಿ ಪ್ರಕ್ರಿಯೆಯನ್ನು ಸ್ಥಗಿತ ಗೊಳಿಸಲಾಗುತ್ತಿದೆ ಎಂದು ಹೇಳಿದರು.
ಈ ಮೊದಲು ಕೇಂದ್ರ ಸರ್ಕಾರ 7 ತಿಂಗಳ ಅವಧಿವರೆಗೂ ಕೊಬ್ಬರಿ ಖರೀದಿಗೆ ಅವಕಾಶ ನೀಡಿತ್ತು. ಪ್ರಸ್ತುತ 3 ತಿಂಗಳಿನಂತೆ ಎರಡು ಅವಧಿಗೆ ಖರೀದಿಗೆ ಅವಕಾಶ ನೀಡಲಾಗಿದೆ. ಕಳೆದ ಬಾರಿ ಖರೀದಿಯಲ್ಲಿ ನಫೆಡ್ 200 ಕೋಟಿ ರೂ. ನಷ್ಟ ಅನುಭವಿಸಿದ್ದರಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದರು.

ವಿಧಾನಸಭೆ ಕಲಾಪ: ಅಕ್ರಮ ಮದ್ಯ ಮಾರಾಟದಲ್ಲಿ ಅಬಕಾರಿ ಅಧಿಕಾರಿಗಳೂ ಕೈಜೋಡಿಸಿದ್ದಾರೆ- ಕ್ರಮಕ್ಕೆ ಶಾಸಕರ ಆಗ್ರಹ
ಉಂಡೆ ಕೊಬ್ಬರಿಯನ್ನು ಶೇ.25ರಷ್ಟು ಖರೀದಿಸಲು ಅವಕಾಶವಿದೆ. ಆ ಪ್ರಮಾಣವನ್ನು ಶೇ.50ಕ್ಕೆ ಹೆಚ್ಚಿಸಬೇಕು ಎಂದು ಮನವಿ ಸಲ್ಲಿಸಲಾಗಿದೆ. ಹಾಗೆಯೇ ಹೋಳಾಗಿರುವ ವಿಲ್ಲಿಂಗ್ ಕೊಬ್ಬರಿಯನ್ನು ಖರೀದಿಸಲು ಅನುಮತಿ ನೀಡುವಂತೆಯೂ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ವಿವರಿಸಿದರು.
ಶಾಸಕರಾದ ಬಿಜೆಪಿಯ ಬಿ.ಸುರೇಶ್‌ಗೌಡ ಮತ್ತು ಕಾಂಗ್ರೆಸ್‌ನ ಕೆ.ಎಂ.ಶಿವಲಿಂಗೇಗೌಡ ಮಾತನಾಡಿ, ಕೊಬ್ಬರಿಯ ಗುಣಮಟ್ಟ ಹದಗೆಡುತ್ತಿದ್ದು, ಇದೀಗ ಖರೀದಿ ಕೂಡ ಸ್ಥಗಿತಗೊಳ್ಳುವುದರಿಂದ ನೋಂದಣಿ ಮಾಡಿಕೊಂಡಿರುವ ನಿಜವಾದ ರೈತರ ಮೇಲೆ ಪರಿಣಾಮ ಬೀರಲಿದೆ ಎಂದು ಹೇಳಿದರು.
ತಿಪಟೂರು ಶಾಸಕ ಕೆ.ಷಡಕ್ಷರಿ ಮಾತನಾಡಿ, ನೋಂದಣಿ ಮತ್ತು ಖರೀದಿ ಏಕಕಾಲಕ್ಕೆ ಆರಂಭವಾಗಬೇಕು ಎಂದು ಆಗ್ರಹಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



