ಲೋಕಸಭೆ ಚುನಾವಣೆ: ಗೆಲ್ಲುವ ಅಭ್ಯರ್ಥಿಗಳ ಬಗ್ಗೆ ಮತ್ತೊಂದು ಸಮೀಕ್ಷೆ ಮಾಡುತ್ತೇವೆ; ಡಿಕೆ.ಶಿವಕುಮಾರ್

ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಗೆಲ್ಲುವ ಅಭ್ಯರ್ಥಿಗಳ ಕುರಿತು ಮತ್ತೊಂದು ಸುತ್ತಿನ ಸಮೀಕ್ಷೆ ನಡೆಸಿ, ದೆಹಲಿಯಲ್ಲಿ ಸಭೆ ಮಾಡಲಿದ್ದೇವೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಬುಧವಾರ ಹೇಳಿದರು.
ಕೆಪಿಸಿಸಿ ಕಚೇರಿಯಲ್ಲಿ ಚುನಾವಣೆ ಸಮಿತಿ ಸಭೆ ನಂತರ ಬುಧವಾರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಇಂದಿನ ಸಭೆಯಲ್ಲಿ ಪಕ್ಷದ ವೀಕ್ಷಕರು, ಜಿಲ್ಲಾ ಮಂತ್ರಿಗಳು, ಕೆಲವು ಕಾರ್ಯಕರ್ತರು ಸಲ್ಲಿಸಿದ್ದ ವರದಿ ಹಾಗೂ ನಮ್ಮ ಸಮೀಕ್ಷೆ ವರದಿಗಳನ್ನು ಪರಾಮರ್ಶೆ ಮಾಡಿದ್ದೇವೆ. ಮತ್ತೊಂದು ಸುತ್ತಿನ ಸಮೀಕ್ಷೆ ಮೂಲಕ ಅಭಿಪ್ರಾಯ ಸಂಗ್ರಹಕ್ಕೆ ಸೂಚಿಸಿದ್ದೇವೆ. ಪಕ್ಷದ ಅಭ್ಯರ್ಥಿಗಳ ಪಟ್ಟಿ ಇನ್ನೂ ಅಂತಿಮವಾಗಿಲ್ಲ, ಮುಂದಿನ ಸುತ್ತಿನ ಸಭೆಯನ್ನು ದೆಹಲಿಯಲ್ಲಿ ನಡೆಸಲಾಗುವುದು. ಬಜೆಟ್ ಅಧಿವೇಶನದ ಹಿನ್ನೆಲೆಯಲ್ಲಿ ಈ ಬಾರಿ ಬೆಂಗಳೂರಿನಲ್ಲೇ ಸಭೆ ಮಾಡಲಾಗಿದೆ ಎಂದು ಹೇಳಿದರು.

DK Shivakumar: ಡಿಕೆಶಿ ವಿರುದ್ಧದ ಸಿಬಿಐ ಕೇಸ್ ಗೆ ನೀಡಿದ್ದ ಅನುಮತಿ ವಾಪಸ್ ಪಡೆಯಲು ಸಚಿವ ಸಂಪುಟ ಒಪ್ಪಿಗೆ!
ಈ ತಿಂಗಳೊಳಗಾಗಿ ಅಭ್ಯರ್ಥಿಗಳ ಪಟ್ಟಿ ಅಂತಿಮವಾಗುತ್ತದೆಯೇ ಎಂಬ ಪ್ರಶ್ನೆಗೆ ಉತ್ತರಿಸಿ ಆದಷ್ಟು ಬೇಗ ಅಂತಿಮಗೊಳಿಸಬೇಕು. ಶೇ. 50 ರಷ್ಟು ಅಭ್ಯರ್ಥಿಗಳಿಗಾದರೂ ಕೆಲಸ ಆರಂಭಿಸಲು ನಾವು ಸೂಚನೆ ನೀಡಬೇಕಿದೆ ಎಂದು ತಿಳಿಸಿದರು.
ಎಷ್ಟು ಕ್ಷೇತ್ರಗಳಲ್ಲಿ ಓರ್ವ ಆಕಾಂಕ್ಷಿಗಳಿದ್ದಾರೆ ಎಂಬ ಪ್ರಶ್ನೆಗೆ ಉತ್ತರಿಸಿ, “ನಾವು ಇನ್ನು ಆ ವಿಚಾರವಾಗಿ ಚರ್ಚೆ ಮಾಡಿಲ್ಲ. ನಾವು ಕೇವಲ ನಮಗೆ ಬಂದಿರುವ ವರದಿಗಳು, ಅಭಿಪ್ರಾಯದ ಬಗ್ಗೆ ಚರ್ಚೆ ಮಾಡಿದ್ದೇವೆ” ಎಂದರು.
ಎಐಸಿಸಿಗೆ ಕಳಿಸಲಾಗಿರುವ ಪಟ್ಟಿ ಬಗ್ಗೆ ಗೊಂದಲವಿದೆ ಎಂಬ ಸುದ್ದಿಗಳ ಕುರಿತು ಮಾತನಾಡಿ, “ಇದೆಲ್ಲವೂ ಸುಳ್ಳು, ನಾವು ಎಐಸಿಸಿಗೆ ಯಾವುದೇ ಪಟ್ಟಿ ನೀಡಿಲ್ಲ. ಮುಖ್ಯಮಂತ್ರಿಗಳಿಗೆ ವಿವಿಧ ವರದಿಗಳು, ಅಭಿಪ್ರಾಯಗಳ ಕುರಿತ ಅಧಿಕೃತ ಪಟ್ಟಿಯನ್ನು ಇವತ್ತಷ್ಟೇ ನೀಡಿದ್ದೇನೆ. ನಾವು ನಮ್ಮ ಪಟ್ಟಿಯನ್ನು ಗೌಪ್ಯವಾಗಿಡಬೇಕು, ಆ ಕೆಲಸ ಮಾಡುತ್ತೇವೆ” ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


