ಮಡಿಕೇರಿ: ಎರಡು ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ
ಕೊಡಗು ಜಿಲ್ಲೆಯಲ್ಲಿ ಎರಡು ವರ್ಷದ ಬಾಲಕಿ ಮೇಲೆ 37 ವರ್ಷದ ವ್ಯಕ್ತಿಯೊಬ್ಬರು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ದಕ್ಷಿಣ ಕೊಡಗಿನ ಸಿದ್ದಾಪುರದಲ್ಲಿ ಬುಧವಾರ ಈ ಘಟನೆ ವರದಿಯಾಗಿದೆ. ಆರೋಪಿಯನ್ನು ಬಂಧಿಸಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಎರಡು ವರ್ಷದ ಬಾಲಕಿ ಮೇಲೆ 37 ವರ್ಷದ ವ್ಯಕ್ತಿಯೊಬ್ಬರು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ದಕ್ಷಿಣ ಕೊಡಗಿನ ಸಿದ್ದಾಪುರದಲ್ಲಿ ಬುಧವಾರ ಈ ಘಟನೆ ವರದಿಯಾಗಿದೆ. ಆರೋಪಿಯನ್ನು ಬಂಧಿಸಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಮಣಿ (37) ಬಂಧಿತ ಆರೋಪಿಯಾಗಿದ್ದಾನೆ. ಈತ ಸಿದ್ದಾಪುರ ಸಮೀಪದ ಪ್ರತಿಷ್ಠಿತ ಎಸ್ಟೇಟ್‌ನಲ್ಲಿ ಚಾಲಕನಾಗಿ ಕೆಲಸ ಮಾಡುತ್ತಿದ್ದಾನೆ.
ಬುಧವಾರ ಯಾರು ಇಲ್ಲದ ಸಮಯದಲ್ಲಿ ಅಪ್ರಾಪ್ತ ವಯಸ್ಸಿನ ಸಂತ್ರಸ್ತೆಯ ಮನೆಗೆ ಭೇಟಿ ನೀಡಿದ ಮಣಿ, ಮದ್ಯದ ಅಮಲಿನಲ್ಲಿ ಅತ್ಯಾಚಾರವೆಸಗಿದ್ದಾನೆ. ಮಗುವಿನ ಜನನಾಂಗದ ಪ್ರದೇಶದಲ್ಲಿ ತೀವ್ರ ರಕ್ತಸ್ರಾವವಾಗಿದ್ದು, ಕಚ್ಚಿದ ಗುರುತುಗಳು ಕಂಡುಬಂದಾಗ ಘಟನೆ ಬೆಳಕಿಗೆ ಬಂದಿದೆ. ಅಪರಾಧ ಕೃತ್ಯದ ಬಳಿಕ ಆರೋಪಿ ಸ್ಥಳದಿಂದ ಪರಾರಿಯಾಗಿದ್ದ. ಆದರೆ, ಘಟನೆಯಿಂದ ಎಚ್ಚೆತ್ತ ಇತರೆ ಎಸ್ಟೇಟ್ ಕಾರ್ಮಿಕರು ಮಣಿಯನ್ನು ಹಿಡಿದು ಸಿದ್ದಾಪುರ ಪೊಲೀಸರಿಗೆ ಒಪ್ಪಿಸಿದ್ದಾರೆ.
ಪ್ರಕರಣವನ್ನು ಮಡಿಕೇರಿಯ ಕೊಡಗು ಮಹಿಳಾ ಪೊಲೀಸ್ ಠಾಣೆಗೆ ವರ್ಗಾಯಿಸಲಾಗಿದ್ದು, ತನಿಖೆ ಮುಂದುವರಿದಿದೆ. ಸಂತ್ರಸ್ತೆಯ ಪೋಷಕರು ಬೇರೆ ರಾಜ್ಯದವರಾಗಿದ್ದು, ಜಿಲ್ಲೆಯಲ್ಲಿ ಎಸ್ಟೇಟ್ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಮೂಲಗಳು ಖಚಿತಪಡಿಸಿವೆ. ಶಿಶುವಿಗೆ ಮಡಿಕೇರಿಯ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಮಗು ಅಪಾಯದಿಂದ ಪಾರಾಗಿದೆ ಎಂದು ಪೊಲೀಸ್ ಮೂಲಗಳು ಖಚಿತಪಡಿಸಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


