ಕರ್ನಾಟಕ ಬಜೆಟ್ 2024: 'ಅನ್ನ ಸುವಿಧಾ' ಯೋಜನೆ, ಏನಿದು?

ಬೆಂಗಳೂರು: ಸಿಎಂ ಸಿದ್ದರಾಮಯ್ಯ 2024ನೇ ಸಾಲಿನ ಬಜೆಟ್ ಮಂಡನೆ ವೇಳೆ ಅನ್ನ ಸುವಿಧಾ(Anna Suvidha)ಯೋಜನೆ ಪ್ರಕಟಿಸಿದ್ದಾರೆ.
ಮನೆಯಿಂದ ಹೊರ ಹೋಗಿ ದಿನಬಳಕೆಯ ಸಾಮಗ್ರಿ ಖರೀದಿಸಲು ಕಷ್ಟವಾಗುವ ವಯೋವೃದ್ಧರನ್ನು ಗಮನದಲ್ಲಿಟ್ಟುಕೊಂಡು ಘೋಷಿಸಿರುವ ಯೋಜನೆಯಿದು. 80 ವರ್ಷ ಮೇಲ್ಪಟ್ಟ ವಯಸ್ಸಿನವರೇ ಇರುವ ಮನೆಗಳಿಗೆ ಆಹಾರ ಧಾನ್ಯ ವಿತರಣೆ ಮಾಡುವ ಅನ್ನ ಸುವಿಧಾ ಯೋಜನೆಯನ್ನು ಅವರು ಬಜೆಟ್ನಲ್ಲಿ ಘೋಷಣೆ ಮಾಡಿದ್ದಾರೆ. ಹಸಿವು ಮುಕ್ತ ಕರ್ನಾಟಕವೇ ನಮ್ಮ ಆಶಯ. ಸಾಮಾಜಿಕ ಭದ್ರತೆಯ ಕಳಕಳಿಯೊಂದಿಗೆ ಈ ಯೋಜನೆ ಘೋಷಣೆ ಮಾಡಲಾಗಿದೆ ಎಂದು ಸಿದ್ದರಾಮಯ್ಯ ಹೇಳಿದರು.
ಅನ್ನ ಸುವಿಧಾ ಯೋಜನೆಯು ಹೋಮ್ ಡೆಲಿವರಿ ಆ್ಯಪ್ ಮೂಲಕ ಜಾರಿಗೆ ತರಲಾಗುವುದು. ಈ ಯೋಜನೆ ಮೂಲಕ 80 ವರ್ಷ ವಯಸ್ಸು ದಾಟಿದ ವೃದ್ಧರ ಅಥವಾ ವೃದ್ಧೆಯರು ಮಾತ್ರ ಇರುವ ಮನೆಗಳಿಗೆ ಆಹಾರ ಧಾನ್ಯ ವಿತರಣೆ ಮಾಡಲಾಗುತ್ತದೆ. ಅನ್ನಭಾಗ್ಯ ಯೋಜನೆಯಡಿ 2024ರ ಜನವರಿ ಅಂತ್ಯದ ವರೆಗೆ 4.02 ಕೋಟಿ ಫಲಾನುಭವಿಗಳಿಗೆ 4,595 ಕೋಟಿ ರೂ. ವರ್ಗಾವಣೆ ಮಾಡಲಾಗಿದೆ ಎಂದೂ ಸಿಎಂ ಬಜೆಟ್ನಲ್ಲಿ ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


