ರಾಜ್ಯ

ಬಜೆಟ್ ಆಶಾದಾಯಕವಾಗಿರಲಿದ್ದು ಗ್ಯಾರಂಟಿ ಯೋಜನೆಗಳಿಗೆ ಶಕ್ತಿ ತುಂಬಲಿದೆ: ಡಿ.ಕೆ ಶಿವಕುಮಾರ್

ಬಜೆಟ್ ಆಶಾದಾಯಕವಾಗಿರಲಿದ್ದು ಗ್ಯಾರಂಟಿ ಯೋಜನೆಗಳಿಗೆ ಶಕ್ತಿ ತುಂಬಲಿದೆ: ಡಿ.ಕೆ ಶಿವಕುಮಾರ್
ಡಿ.ಕೆ ಶಿವಕುಮಾರ್
Published On :

ಹುಬ್ಬಳ್ಳಿ: ಸಿಎಂ ಸಿದ್ದರಾಮಯ್ಯ ಮಂಡಿಸಲಿರುವ ರಾಜ್ಯ ಬಜೆಟ್ ಆಶಾದಾಯಕವಾಗಿರಲಿದ್ದು ಗ್ಯಾರಂಟಿ ಯೋಜನೆಗಳಿಗೆ ಶಕ್ತಿ ತುಂಬಲಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಹೇಳಿದರು.

ಹುಬ್ಬಳ್ಳಿಯಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನರ ಬದುಕಿಗೆ ಶಕ್ತಿ ತುಂಬುವ ಕಾರ್ಯಕ್ರಮ ರೂಪಿಸಿದ್ದೇವೆ. ಗ್ಯಾರಂಟಿ ಹೊರತುಪಡಿಸಿ ನೀರಾವರಿ ಯೋಜನೆ, ಬೇರೆ ಬೇರೆ ಚಿಂತನೆ ಮಾಡಿದ್ದೇವೆ. ಅನೇಕ ಕಾರ್ಯಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದೇವೆ.

ಕಳೆದ 8 ತಿಂಗಳುಗಳಿಂದ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದೇವೆ. ಅವನ್ನು ಪೂರ್ಣ ಪ್ರಮಾಣದಲ್ಲಿ ಅನುಷ್ಠಾನ ಮಾಡಲು ಕ್ರಮ ಕೈಗೊಂಡಿದ್ದೇವೆ. ಬಜೆಟ್ ಬಗ್ಗೆ ಎಲ್ಲ ವಿಷಯಗಳನ್ನು ಮುಂಚಿತವಾಗಿ ಬಹಿರಂಗ ಪಡಿಸಲು ಆಗುವುದಿಲ್ಲ, ಈ ಬಜೆಟ್ ರಾಜ್ಯಕ್ಕೆ ಹೊಸ ದಿಕ್ಸೂಚಿಯಾಗಲಿದೆ ಎಂದಿದ್ದಾರೆ.

ಮಹದಾಯಿ ಯೋಜನೆ ಅನುಷ್ಠಾನಕ್ಕೆ ನಾವು ಒತ್ತಾಯ ಮಾಡುತ್ತಿದ್ದೇವೆ. ಆದರೆ, ಕೇಂದ್ರ ಸರ್ಕಾರ ಸಹಕಾರ ಕೊಡುತ್ತಿಲ್ಲ. ನಾವು ಕಾಮಗಾರಿಗಾಗಿ ಟೆಂಡರ್ ಕರೆದಿದ್ದೇವೆ. ಕೇಂದ್ರ ಸರ್ಕಾರ ಅನುಮೋದನೆ ಕೊಡುತ್ತಿಲ್ಲ. ಹಿಂದೆ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ನಾಯಕರು ಕೇಂದ್ರದ ಪತ್ರ ಹಿಡಿದು ಸಂಭ್ರಮಾಚರಣೆ ಮಾಡಿದ್ದರು. ಅಂಥ ಬಿಜೆಪಿ ನಾಯಕರಿಂದ, ಸಂಸದರಿಂದ ನೀವು ಉತ್ತರ ಕೇಳಿ ಎಂದರು.

ಗ್ಯಾರಂಟಿ ಲೂಟಿ ಎಂದು ಹೇಳಿರುವ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿಗೆ ರಾಜ್ಯದ ಜನ ಸರಿಯಾಗಿ ಉತ್ತರ ಕೊಡುತ್ತಾರೆ. ಬಜೆಟ್ ಬಳಿಕ ನಿಗಮ-ಮಂಡಳಿಗಳಿಗೆ ಕಾರ್ಯಕರ್ತರನ್ನು ನೇಮಿಸುವ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು. ಚುನಾವಣೆ ಬಾಂಡ್ ಕುರಿತು ಸುಪ್ರೀಂ ಕೋರ್ಟ್ ನೀಡಿರುವ ತೀರ್ಪಿನ ಬಗ್ಗೆ ಪಕ್ಷದ ವಕ್ತಾರರು ಹೇಳಿಕೆ ನೀಡುವರು ಎಂದು ಉತ್ತರಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.