ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ವಿಜಯಾನಂದ ಕಾಶಪ್ಪನವರ್ ನೇಮಕ
ಶಾಸಕ ವಿಜಯಾನಂದ ಕಾಶಪ್ಪನವರ್ ಅವರನ್ನು ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ನೇಮಕ ಮಾಡಲಾಗಿದೆ.

ಬೆಂಗಳೂರು: ಇತ್ತೀಚಿಗಷ್ಟೇ ಕರ್ನಾಟಕ ಕ್ರೀಡಾ ಪ್ರಾಧಿಕಾರದ ಅಧ್ಯಕ್ಷರಾಗಿ ನೇಮಕಗೊಂಡಿದ್ದ ಶಾಸಕ ವಿಜಯಾನಂದ ಕಾಶಪ್ಪನವರ್ ಅವರನ್ನು ಈಗ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ನೇಮಕ ಮಾಡಿದ್ದು, ಈ ಹಿಂದಿನ ನೇಮಕ ಆದೇಶವನ್ನು ಹಿಂದಕ್ಕೆ ಪಡೆಯಲಾಗಿದೆ.
ವಿಜಯಾನಂದ ಕಾಶಪ್ಪನವರ್ ಅವರನ್ನು ಕರ್ನಾಟಕ ಕ್ರೀಡಾ ಪ್ರಾಧಿಕಾರದ ಅಧ್ಯಕ್ಷರಾಗಿ ನೇಮಕ ಮಾಡಿರುವುದನ್ನು ರದ್ದುಗೊಳಿಸಿ, ಮಾನ್ಯ ಶಾಸಕರನ್ನು ಮುಂದಿನ ಎರಡು ವರ್ಷಗಳ ಅವಧಿಗೆ ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ನೇಮಕ ಮಾಡಿ, ಸಚಿವ ಸಂಪುಟ ದರ್ಜೆಯ ಸ್ಥಾನಮಾನ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸೂಚಿಸಿದ್ದಾರೆ.
ಕಳೆದ ಜನವರಿ 27ರಂದು ರಾಜ್ಯ ಸರ್ಕಾರ, 35 ಶಾಸಕರನ್ನು ನಿಗಮ ಮಂಡಳಿ ಅಧ್ಯಕ್ಷರನ್ನಾಗಿ ನೇಮಿಸಿ ಆದೇಶ ಹೊರಡಿಸಿತ್ತು. ಅದರಲ್ಲಿ ಹುನಗುಂದ ಶಾಸಕ ವಿಜಯಾನಂದ ಕಾಶಪ್ಪನವರ್ ಅವರನ್ನು ಕರ್ನಾಟಕ ಕ್ರೀಡಾ ಪ್ರಾಧಿಕಾರದ ಅಧ್ಯಕ್ಷರಾಗಿ ನೇಮಕ ಮಾಡಿತ್ತು. ಆದರೆ ಕ್ರೀಡಾ ಪ್ರಾಧಿಕಾರದ ಬೈಲಾದಲ್ಲಿ ಇದಕ್ಕೆ ಅವಕಾಶವಿಲ್ಲ. ಕರ್ನಾಟಕ ಕ್ರೀಡಾ ಪ್ರಾಧಿಕಾರದ ಬೈಲಾದ ನಿಯಮದ ಪ್ರಕಾರ ಸಚಿವರೇ ಕ್ರೀಡಾ ಪ್ರಾಧಿಕಾರದ ಅಧ್ಯಕ್ಷರಾಗುತ್ತಾರೆ. ಅಂದರೆ ಈಗ ಕ್ರೀಡಾ ಸಚಿವರಾಗಿರುವ ನಾಗೇಂದ್ರ ಅವರೇ ಅಧ್ಯಕ್ಷರು. ಬೇಕಿದ್ದರೆ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಬಹುದು.
ಈ ಎಡವಟ್ಟನ್ನು ಅರ್ಥ ಮಾಡಿಕೊಂಡ ರಾಜ್ಯ ಸರ್ಕಾರ, ವಿಜಯಾನಂದ ಕಾಶಪ್ಪನವರ್ ಅವರನ್ನು ಈಗ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ನೇಮಕ ಮಾಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



