ಹಾಲಿನ ಪ್ರೊತ್ಸಾಹಧನ ವಿಚಾರದಲ್ಲಿ ಕಾಂಗ್ರೆಸ್ ಸರ್ಕಾರ ರಾಜ್ಯಪಾಲರಿಂದ ಸುಳ್ಳು ಹೇಳಿಸಿದೆ: ಬಸವರಾಜ ಬೊಮ್ಮಾಯಿ
ಹಾಲು ಉತ್ಪಾದಕರಿಗೆ ಹಾಲಿನ ಪ್ರೋತ್ಸಾಹಧನವನ್ನು ಅವರ ಬ್ಯಾಂಕ್ ಖಾತೆಗೆ ವರ್ಗಾಯಿಸಲಾಗಿದೆ ಎಂದು ಹೇಳುವ ಮೂಲಕ ಕರ್ನಾಟಕ ಸರ್ಕಾರವು ರಾಜ್ಯಪಾಲರಿಂದ ಸುಳ್ಳು ಹೇಳಿಸಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಬೆಂಗಳೂರು: 8.65 ಲಕ್ಷ ಹಾಲು ಉತ್ಪಾದಕರಿಗೆ 757 ಕೋಟಿ ರೂ. ಹಾಲಿನ ಪ್ರೋತ್ಸಾಹಧನವನ್ನು ಅವರ ಬ್ಯಾಂಕ್ ಖಾತೆಗೆ ವರ್ಗಾಯಿಸಲಾಗಿದೆ ಎಂದು ಹೇಳುವ ಮೂಲಕ ಕರ್ನಾಟಕ ಸರ್ಕಾರವು ಈ ವಿಚಾರದಲ್ಲಿ ರಾಜ್ಯಪಾಲರಿಂದ ಸುಳ್ಳು ಹೇಳಿಸಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಗಳವಾರ ಹೇಳಿದ್ದಾರೆ.
ಕಳೆದ ಆರು ತಿಂಗಳಿನಿಂದಲೂ ಯಾವುದೇ ಪ್ರೋತ್ಸಾಹಧನವನ್ನು ನೀಡಿಲ್ಲ. ಸರ್ಕಾರ ರಾಜ್ಯಪಾಲರಿಂದ ಸುಳ್ಳುಗಳನ್ನು ಹೇಳಿಸಿದೆ ಎಂದು ದೂರಿದರು.
'ಹಿಂದಿನ ಬಿಜೆಪಿ ಆಡಳಿತದಲ್ಲಿ ಹೊಸ ಬಸ್‌ಗಳನ್ನು ಖರೀದಿಸಿಲ್ಲ ಎಂದು ರಾಜ್ಯಪಾಲರು ಮತ್ತೆ ಸುಳ್ಳು ಹೇಳುವಂತೆ ಮಾಡಿದ್ದಾರೆ. ನಾಲ್ಕು ನಿಗಮಗಳಿಗೆ ಹೊಸ ಬಸ್‌ಗಳನ್ನು ಖರೀದಿಸಲಾಗಿದೆ ಎಂಬುದು ಸತ್ಯ. 2022-23ರಲ್ಲಿ ನಾಲ್ಕು ನಿಗಮಗಳಿಗೆ 3,526 ಹೊಸ ಬಸ್‌ಗಳನ್ನು ಸೇರಿಸಲು ಕ್ರಮ ಕೈಗೊಳ್ಳಲಾಗಿದೆ. ನಾವು ಬಿಎಂಟಿಸಿಗೆ 1,311 ಬಸ್‌ಗಳು, ಕೆಎಸ್‌ಆರ್‌ಟಿಸಿಗೆ 50 ಪವರ್ ಪ್ಲಸ್ ಬಸ್‌ಗಳು ಮತ್ತು 20 ವೋಲ್ವೋ ಬಸ್‌ಗಳನ್ನು ಖರೀದಿಸಿದ್ದೇವೆ. ಅವೆಲ್ಲವೂ ಈಗ ಕಾರ್ಯನಿರ್ವಹಿಸುತ್ತಿವೆ' ಎಂದು ಹೇಳಿದರು.
ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಗೆ 3,000 ಕೋಟಿ ರೂ.ಗಳನ್ನು ಮೀಸಲಿಡುವುದಾಗಿ ಬಜೆಟ್‌ನಲ್ಲಿ ಸರ್ಕಾರ ಘೋಷಿಸಿದ್ದು, 5,468 ಕಾಮಗಾರಿಗಳಿಗೆ ಕ್ರಿಯಾ ಯೋಜನೆ ರೂಪಿಸಲಾಗಿದೆ. ಕಳೆದ ವರ್ಷ ನವೆಂಬರ್‌ನಲ್ಲಿ 1,287 ಕಾಮಗಾರಿಗಳನ್ನು ಪೂರ್ಣಗೊಳಿಸಲಾಗಿದೆ ಎಂದು ತಿಳಿಸಿದರು.
ಈಗಿನ ಕಾಂಗ್ರೆಸ್ ಸರ್ಕಾರವು ಹಿಂದಿನ ಬಿಜೆಪಿ ಸರ್ಕಾರದ ಎಲ್ಲಾ ಸಾಧನೆಗಳನ್ನು ತನ್ನದೇ ಸಾಧನೆ ಎಂದು ಹೇಳಿಕೊಂಡಿದೆ ಎಂದು ಅವರು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



