SSLC, 2nd PUC Exams: ಎಸ್ ಎಸ್ ಎಲ್ ಸಿ, ದ್ವಿತೀಯ ಪಿಯುಸಿ ಪರೀಕ್ಷೆ ದಿನಾಂಕ ಪ್ರಕಟ
2024-25ನೇ ಸಾಲಿನ ದ್ವಿತೀಯ ಪಿಯುಸಿ (2nd PUC Exam) ಹಾಗೂ ಎಸ್ಎಸ್ಎಲ್ಸಿ(SSLC exam) ಪರೀಕ್ಷೆಗಳ ಅಂತಿಮ ವೇಳಾಪಟ್ಟಿ ಪ್ರಕಟವಾಗಿದೆ.

ಬೆಂಗಳೂರು: 2024-25ನೇ ಸಾಲಿನ ದ್ವಿತೀಯ ಪಿಯುಸಿ (2nd PUC Exam) ಹಾಗೂ ಎಸ್ಎಸ್ಎಲ್ಸಿ(SSLC exam) ಪರೀಕ್ಷೆಗಳ ಅಂತಿಮ ವೇಳಾಪಟ್ಟಿ ಪ್ರಕಟವಾಗಿದೆ.
ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಇಂದು ವಿಕಾಸಸೌಧದಲ್ಲಿ ಜಂಟಿ ಸುದ್ದಿಗೋಷ್ಠಿ ನಡೆಸಿ ಪರೀಕ್ಷಾ ದಿನಾಂಕ ಹಾಗೂ ಪರೀಕ್ಷೆಗಳಿಗೆ ಸಂಬಂಧಪಟ್ಟ ಇತರ ಮಾಹಿತಿಗಳನ್ನು ನೀಡಿದರು.
ದ್ವಿತೀಯ ಪಿಯುಸಿ ಪರೀಕ್ಷೆ ) ಮಾರ್ಚ್ 01 ರಿಂದ 22ರ ವರೆಗೆ ಹಾಗೂ ಎಸ್ ಎಸ್ ಎಲ್ ಸಿ ಪರೀಕ್ಷೆಗಳು ಮಾರ್ಚ್ 25 ರಿಂದ ಏಪ್ರಿಲ್ 06ರವರೆಗೆ ನಡೆಯಲಿವೆ ಎಂದು ತಿಳಿಸಿದರು. ಈ ವರ್ಷ ರಾಜ್ಯದಲ್ಲಿ 8,96,271 ಮಕ್ಕಳು ಎಸ್ಎಸ್ಎಲ್ಸಿ ಪರೀಕ್ಷೆ ಪರೀಕ್ಷೆ ಬರೆಯತ್ತಿದ್ದಾರೆ. 2,741 ಪರೀಕ್ಷಾ ಕೇಂದ್ರಗಳಿವೆ. ಇನ್ನು 6,98, 624 ಮಕ್ಕಳು ದ್ವೀತಿಯ ಪಿಯುಸಿ ಪರೀಕ್ಷೆ ಬರೆಯುತ್ತಿದ್ದಾರೆ.
ಕಳೆದ ವರ್ಷದಿಂದ ದ್ವಿತೀಯ ಪಿಯುಸಿ ಪರೀಕ್ಷೆ 80-20 ಮಾದರಿಯಲ್ಲಿ ಇರುತ್ತದೆ. ವಿದ್ಯಾರ್ಥಿಗಳು ಲಖಿತ ರೂಪದಲ್ಲಿ 80 ಅಂಕಗಳಿಗೆ ಪರೀಕ್ಷೆ ಬರೆಯುತ್ತಾರೆ. ಇನ್ನು ಉಳಿದ 20 ಅಂಕಗಳು ಆಂತರಿಕ ಮೌಲ್ಯಮಾಪನದ ಮೂಲಕ ನೀಡಲಾಗುತ್ತದೆ. ದ್ವಿತೀಯ ಪಿಯುಸಿ ಪರೀಕ್ಷೆ-2 ಅನ್ನು ಹಾಗೂ ಎಸ್ ಎಸ್ಎಲ್ಸಿ ಪರೀಕ್ಷೆ-2 ನ್ನು ಎಪ್ರಿಲ್ ಕೊನೆಯ ವಾರದಲ್ಲಿ ನಡೆಸುತ್ತೇವೆ ಎಂದರು.
ಪಿಯುಸಿ ಹಾಗೂ ಎಸ್ಎಸ್ಎಲ್ ಸಿ ಪರೀಕ್ಷೆಗೆ ಹಿಜಾಬ್ ಅವಕಾಶ ವಿಚಾರವಾಗಿ ಮಾತನಾಡಿದ ಅವರು, ನ್ಯಾಯಾಲಯದ ನಿರ್ದೇಶನದಂತೆ ಸಮವಸ್ತ್ರ ನಿಯಮ ಪಾಲನೆ ಮಾಡಲಾಗುತ್ತದೆ. ಅಡ್ವಕೇಟ್ ಜನರಲ್ ಅವರ ಸಲಹೆ ಪಡೆದು ಹಿಜಾಬ್ ವಿಚಾರ ನಿರ್ಧರಿಸಲಾಗುತ್ತದೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



