ಮಾರ್ಗಸೂಚಿ ದರದಂತೆ ಆಸ್ತಿ ತೆರಿಗೆ ನಿಗದಿ ಮಾಡಲು ಬಿಬಿಎಂಪಿ ಮುಂದು!
ನಿವೇಶನದ ಮಾರ್ಗಸೂಚಿ ದರ ಆಧಾರಿತ ಆಸ್ತಿ ತೆರಿಗೆ ನಿಗದಿ ಮಾಡಲು ಬಿಬಿಎಂಪಿ ನಿರ್ಧರಿಸಿದೆ. ನಿವೇಶನ, ಕಟ್ಟಡ, ವಾಣಿಜ್ಯ ಹಾಗೂ ಇತರೆ ಬಳಕೆಗೆ ಆಸ್ತಿ ತೆರಿಗೆಯ ಪ್ರಮಾಣವನ್ನು ನಿಗದಿ ಮಾಡಿ, ಕರಡು ಅಧಿಸೂಚನೆ ಹೊರಡಿಸಿದೆ. ಸಾರ್ವಜನಿಕರು ಆಕ್ಷೇಪಣೆ ಸಲ್ಲಿಸಲು 15 ದಿನಗಳ ಕಾಲಾವಕಾಶ ನೀಡಲಾಗಿದೆ.

ಬೆಂಗಳೂರು: ನಿವೇಶನದ ಮಾರ್ಗಸೂಚಿ ದರ ಆಧಾರಿತ ಆಸ್ತಿ ತೆರಿಗೆ ನಿಗದಿ ಮಾಡಲು ಬಿಬಿಎಂಪಿ ನಿರ್ಧರಿಸಿದೆ. ನಿವೇಶನ, ಕಟ್ಟಡ, ವಾಣಿಜ್ಯ ಹಾಗೂ ಇತರೆ ಬಳಕೆಗೆ ಆಸ್ತಿ ತೆರಿಗೆಯ ಪ್ರಮಾಣವನ್ನು ನಿಗದಿ ಮಾಡಿ, ಕರಡು ಅಧಿಸೂಚನೆ ಹೊರಡಿಸಿದೆ. ಸಾರ್ವಜನಿಕರು ಆಕ್ಷೇಪಣೆ ಸಲ್ಲಿಸಲು 15 ದಿನಗಳ ಕಾಲಾವಕಾಶ ನೀಡಲಾಗಿದೆ.
ವಸತಿ ನಿವೇಶನ, ಭೂಮಿ ಮತ್ತು ವಸತಿ ಖಾಲಿ ಪ್ರದೇಶಗಳನ್ನು ಎರಡು ವರ್ಗಗಳಾಗಿ ವಿಂಗಡಿಸಲಾಗಿದೆ. ಅಪಾರ್ಟ್ ಮೆಂಟ್,ಫ್ಲ್ಯಾಂಟ್ ಸೇರಿದಂತೆ ಭೂಮಿ,ನಿವೇಶನಗಳನ್ನು ಬಾಡಿಗೆಗೆ ನೀಡಿದ್ದರೆ, ವರ್ಷಕ್ಕೆ ಪ್ರತಿ ಅಡಿಗೆ ಕರ್ನಾಟಕ ಸ್ಟ್ಯಾಂಪ್ ಕಾಯ್ದೆಯಲ್ಲಿ ನಮೂದಾಗಿರುವ ಮಾರ್ಗಸೂಚಿ ದರ ಶೇ. 0.2 ರಷ್ಟು ಆಸ್ತಿ ತೆರಿಗೆ ಪಾವತಿಸಬೇಕು.ಇದೇ ರೀತಿಯ ಸ್ವತ್ತು ಮಾಲೀಕರೇ ಉಪಯೋಗಿಸುತ್ತಿದ್ದರೆ ಮಾರ್ಗಸೂಚಿ ದರದ ಶೇ0.1 ರಷ್ಟು ತೆರಿಗೆ ಅನ್ವಯವಾಗಲಿದೆ. ಆಸ್ತಿ ಸಂಪೂರ್ಣ ಖಾಲಿ ಪ್ರದೇಶವಾಗಿದ್ದರೆ ಶೇ.0.0.25 ರಷ್ಟು ತೆರಿಗೆ ವಿಧಿಸಬೇಕು.
ವಸತಿಯೇತರ ಭೂಮಿ, ನಿವೇಶನ ಮತ್ತು ಖಾಲಿ ನಿವೇಶನಗಳಿಗೆ ಕೂಡಾ ಎರಡು ವರ್ಗವಾಗಿಸಿ, ನಿವೇಶನ ಬಾಡಿಗೆ ನೀಡಿದರೆ, ಪ್ರತಿ ಚದರ ಅಡಿಗೆ ಮಾರ್ಗಸೂಚಿ ದರದಲ್ಲಿ ಶೇ. 0.5 ರಷ್ಟು, ಸ್ವಂತ ಬಳಕೆಯಲ್ಲಿದ್ದರೆ ಶೇ. 0.25 ರಷ್ಟು, ಕಟ್ಟಡಕ್ಕೆ ಶೇ. 0.5 ರಷ್ಟು ತೆರಿಗೆ ನಿಗದಿ ಮಾಡಲಾಗಿದೆ.
ನಾಗರಿಕರು ಆಕ್ಷೇಪಣೆ ಗಳಿದ್ದರೆ 15ದಿನಗಳೊಳಗೆ ಬಿಬಿಎಂಪಿ ಮುಖ್ಯ ಆಯುಕ್ತರಿಗೆ ಸಲ್ಲಿಸಬಹುದು. spcommrev@bbmp. gov. in ಗೆ ಇಮೇಲ್ ಮಾಡಬಹುದು ಎಂದು ಕರಡು ಅಧಿಸೂಚನೆಯಲ್ಲಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.




