ಬೆಳಗಾವಿ: ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ, ಮೂವರು ಸ್ಥಳದಲ್ಲೇ ಸಾವು
ಬೆಳಗಾವಿ ಜಿಲ್ಲೆಯ ಯರಗಟ್ಟಿ ತಾಲೂಕಿನ ಕುರಬಗಟ್ಟಿ ಬಳಿ ಶುಕ್ರವಾರ ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ.

ಬೆಳಗಾವಿ: ಬೆಳಗಾವಿ ಜಿಲ್ಲೆಯ ಯರಗಟ್ಟಿ ತಾಲೂಕಿನ ಕುರಬಗಟ್ಟಿ ಬಳಿ ಶುಕ್ರವಾರ ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಭೀಕರ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಮೃತರನ್ನು ಮೂಡಲಗಿ ತಾಲೂಕಿನ ಪಟಗುಂದಿ ಗ್ರಾಮದ ಮುತ್ತು ನಾಯಕ್(8), ಗೋಪಾಲ್ ನಾಯಕ್(45) ಹಾಗೂ ಧಾರವಾಡ ಮೂಲದ ಅನ್ನಪೂರ್ಣಾ ಶಿರೋಳ(53) ಎಂದು ಗುರುತಿಸಲಾಗಿದೆ. ಗಾಯಗೊಂಡ ಇಬ್ಬರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಸಂಬಂಧ ಮುರಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಿನ್ನೆ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ನಂದಗಡ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಮರಕ್ಕೆ ಡಿಕ್ಕಿ ಹೊಡೆದಿದ್ದು, ಭೀಕರ ಅಪಘಾತದಲ್ಲಿ ಸ್ಥಳದಲ್ಲೇ ಆರು ಮಂದಿ ದಾರುಣವಾಗಿ ಸಾವನ್ನಪ್ಪಿದ್ದರು. ಇದರ ಬೆನ್ನಲ್ಲೇ ಇಂದು ಜಿಲ್ಲೆಯಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



