ಬೆಳಗಾವಿ ಜಿಲ್ಲೆಯಲ್ಲಿ ಮತ್ತೊಂದು ಭೀಕರ ಅಪಘಾತ; ಸ್ಥಳದಲ್ಲೇ ಐವರು ಸಾವು
ಬೆಳಗಾವಿ ಜಿಲ್ಲೆಯಲ್ಲಿ ಶುಕ್ರವಾರ ಎರಡು ಕಡೆ ಭೀಕರ ಅಪಘಾತ ಸಂಭವಿಸಿದ್ದು, ಇಂದು ಸಂಜೆ ಕಾರು ಹಾಗೂ ಬೈಕ್ ಡಿಕ್ಕಿಯಾಗಿ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಬೆಳಗಾವಿ: ಬೆಳಗಾವಿ ಜಿಲ್ಲೆಯಲ್ಲಿ ಶುಕ್ರವಾರ ಎರಡು ಕಡೆ ಭೀಕರ ಅಪಘಾತ ಸಂಭವಿಸಿದ್ದು, ಇಂದು ಸಂಜೆ ಕಾರು ಹಾಗೂ ಬೈಕ್ ಡಿಕ್ಕಿಯಾಗಿ ಐವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ರಾಯಬಾಗ ತಾಲೂಕಿನ ಮುಗಳಖೋಡ ಕಾಲುವೆ ಬಳಿ ನಡೆದಿದೆ.
ಇಂದು ಸಂಜೆ ಜತ್ತ-ಜಾಂಬೋಟಿ ರಸ್ತೆಯಲ್ಲಿ ಈ ಭೀಕರ ಅಪಘಾತ ಸಂಭವಿಸಿದ್ದು, ಚಾಲಕನ ನಿಯಂತ್ರಣ ತಪ್ಪಿ ಕಾರು, ಬೈಕ್‌ಗೆ ಡಿಕ್ಕಿ ಹೊಡೆದ ಬಳಿಕ ಮರಕ್ಕೆ ಡಿಕ್ಕಿ ಹೊಡೆದಿದೆ.
ಮೃತರನ್ನು ಗುರ್ಲಾಪುರದ ನಿವಾಸಿಗಳಾದ ಮಲ್ಲಿಕಾರ್ಜುನ್ ಮರಾಠೆ(16), ಲಕ್ಷ್ಮೀ ಮರಾಠೆ(19), ಆಕಾಶ ಮರಾಠೆ(14), ನಿಪನಾಳ ಗ್ರಾಮದ ಶ್ರೀಕಾಂತ ಪಡತರಿ(22), ಮುಗಳಖೋಡ ಗ್ರಾಮದ ನಾಗಪ್ಪ ಯಡವನ್ನವರ್(48) ಎಂದು ಗುರುತಿಸಲಾಗಿದೆ.
ಗುರ್ಲಾಪುರ ಕಡೆಯಿಂದ ಮುಗಳಖೋಡದತ್ತ ಹೊರಟಿದ್ದ ಕಾರು ಮೊದಲು ಬೈಕ್‌ಗೆ ಗುದ್ದಿ ರಸ್ತೆ ಬದಿಯ ಮರಕ್ಕೆ ಡಿಕ್ಕಿಯಾಗಿದೆ. ದುರಂತದಲ್ಲಿ ಬೈಕ್ ಸವಾರರು ಸೇರಿ ಐವರು ಮೃತಪಟ್ಟಿದ್ದಾರೆ. ಈ ಪೈಕಿ ಮೂವರು ಒಂದೇ ಕುಟುಂಬದವರಾಗಿದ್ದಾರೆ.
ಈ ಸಂಬಂಧ ಹಾರೂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



