ಪ್ರಯಾಣಿಕರಿಗೆ BMRCL ಗುಡ್ ನ್ಯೂಸ್: ಮೆಜೆಸ್ಟಿಕ್–ಗರುಡಾಚಾರ್‌ಪಾಳ್ಯ ನಡುವೆ 3 ನಿಮಿಷಕ್ಕೊಮ್ಮೆ ಮೆಟ್ರೋ ರೈಲು ಸಂಚಾರ
ಮೆಜೆಸ್ಟಿಕ್‌ನಿಂದ ಗರುಡಾಚಾರ್‌ಪಾಳ್ಯ ನಡುವಿನ ಜನ ದಟ್ಟನೆಯನ್ನು ನಿಯಂತ್ರಿಸುವ ಸಲುವಾಗಿ ನಮ್ಮ ಮೆಟ್ರೋ ಈ ಭಾಗದಲ್ಲಿ 3 ನಿಮಿಷಕ್ಕೊಮ್ಮೆ ಮೆಟ್ರೋ ಸೇವೆ ಒದಗಿಸಲು ಬಿಎಂಆರ್ ಸಿಎಲ್ ಮುಂದಾಗಿದೆ.

ಬೆಂಗಳೂರು: ಮೆಜೆಸ್ಟಿಕ್‌ನಿಂದ ಗರುಡಾಚಾರ್‌ಪಾಳ್ಯ ನಡುವಿನ ಜನ ದಟ್ಟನೆಯನ್ನು ನಿಯಂತ್ರಿಸುವ ಸಲುವಾಗಿ ನಮ್ಮ ಮೆಟ್ರೋ ಈ ಭಾಗದಲ್ಲಿ 3 ನಿಮಿಷಕ್ಕೊಮ್ಮೆ ಮೆಟ್ರೋ ಸೇವೆ ಒದಗಿಸಲು ಬಿಎಂಆರ್ ಸಿಎಲ್ ಮುಂದಾಗಿದೆ.
ಹೆಚ್ಚು ಜನ ದಟ್ಟನೆ ಇರುವ ಪೀಕ್ ಆವರ್ಗಳಲ್ಲಿ ಪ್ರತಿ ಮೂರು ನಿಮಿಷಕ್ಕೆ ಮೆಟ್ರೋ ಸೇವೆ ಒದಗಿಸಲಾಗುತ್ತಿದೆ. ಸೋಮವಾರದಿಂದ ಬೆಳಿಗ್ಗೆ 8.45 ರಿಂದ 10.20ರವರೆಗೆ ಮೆಜೆಸ್ಟಿಕ್ ಮತ್ತು ಗರುಡಾಚಾರ್ ಪಾಳ್ಯ ಮೆಟ್ರೋ ನಿಲ್ದಾಣಗಳ ನಡುವೆ ಹೆಚ್ಚುವರಿ ಮೆಟ್ರೋ ಸೇವೆಯನ್ನು ಆರಂಭಿಸಲಿದೆ. ಈ ಮಾರ್ಗದಲ್ಲಿ 8.45 ರಿಂದ 10.20 ರವರೆಗೆ ಇನ್ಮುಂದೆ ಮೂರು ನಿಮಿಷಕ್ಕೊಮ್ಮೆ ಮೆಟ್ರೋ ರೈಲುಗಳು ಓಡಾಟ ನಡೆಸಲಿವೆ.
ಪೀಕ್ ಆವರ್ಗಳಲ್ಲಿ ಪ್ರಯಾಣಿಕರಿಗೆ ಆಗುತ್ತಿದ್ದ ತೊಂದರೆ ತಪ್ಪಿಸಲು ಹೆಚ್ಚುವರಿ ರೈಲು ಸೇವೆ ಒದಗಿಸಲು ನಮ್ಮ ಮೆಟ್ರೋ ಮುಂದಾಗಿದೆ. ಬೈಯಪ್ಪನಹಳ್ಳಿಯಿಂದ ಕೆಆರ್ ಪುರಗೆ ಮೆಟ್ರೋ ಸಂಪರ್ಕವಾದ ಮೇಲೆ ಮೆಟ್ರೋದಲ್ಲಿ ಪ್ರಯಾಣಿಸುವವರ ಸಂಖ್ಯೆ ಕೂಡ ಹೆಚ್ಚಳವಾಗಿದೆ. ಹೆಚ್ಚುವರಿ ರೈಲನ್ನು ಓಡಿಸಿ ಎಂದು ಬೆಂಗಳೂರು ಮೆಟ್ರೊ ರೈಲು ನಿಗಮ ನಿಯಮಿತಗೆ ಸಾರ್ವಜನಿಕರು ಹಲವು ಬಾರಿ ಮನವಿ ಮಾಡಿದ್ದರು.
ಇನ್ನು ಶನಿವಾರ, ಭಾನುವಾರ ಮತ್ತು ರಜಾದಿನಗಳನ್ನು ಹೊರತುಪಡಿಸಿ ಇನ್ನುಳಿದ ದಿನಗಳಲ್ಲಿ ಈ ಸೇವೆ ಇರಲಿದೆ. ಇದರಿಂದ ಟ್ರಿನಿಟಿ, ಇಂದಿರಾನಗರ, ಬೆನ್ನಿಗಾನಹಳ್ಳಿ ಮತ್ತು ಕೆಆರ್ಪುರ ಕಡೆ ಪ್ರಯಾಣಿಕರಿಗೆ ಅನುಕೂಲವಾಗಲಿದೆ. ಇದೇ ವೇಳೆ ಇಂಟರ್‌ಸಿಟಿ ಬಸ್‌ಗಳ ಪ್ರಯಾಣಿಕರ ಅನುಕೂಲಕ್ಕಾಗಿ ಬೆಳಿಗ್ಗೆ 5 ಗಂಟೆಯಿಂದ ರೈಲು ಸೇವೆ ಮೆಜೆಸ್ಟಿಕ್ ಮೆಟ್ರೋ ನಿಲ್ದಾಣದಿಂದ ಎಲ್ಲಾ ದಿಕ್ಕುಗಳಿಗೆ ಮೊದಲ ರೈಲಿನ ಸೇವೆ 5 ಗಂಟೆಗೆ ಆರಂಭವಾಗಲಿದ್ದು, ಭಾನುವಾರ ಹೊರತುಪಡಿಸಿ ವಾರದ ಎಲ್ಲಾ ದಿನಗಳಲ್ಲಿ ಬೆಳಿಗ್ಗೆ, 5.00 ಗಂಟೆಗೆ ಮೆಟ್ರೋ ಸೇವೆ ಆರಂಭವಾಗಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



