ದರ್ಶನ್ ವಿರುದ್ಧ ಸಿಡಿದೆದ್ದ ಶ್ರೀಶಕ್ತಿ ಮಹಿಳಾ ಸಂಘದಿಂದ ದೂರು: ನೀಡಿದ್ದ ದೂರು ವಾಪಸ್ ಪಡೆದು ಕ್ಷಮೆ ಕೇಳಿದ ಕನ್ನಡ ಶಫಿ!
ನಿರ್ಮಾಪಕ ಉಮಾಪತಿ ಬಗ್ಗೆ ದರ್ಶನ್ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎಂದು ಆರೋಪಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ದೂರು ನೀಡಿದ್ದ ಕನ್ನಡ ಪರ ಸಂಘಟನೆಯ ಕನ್ನಡ ಶಫಿ ಎನ್ನುವವರು ಇದೀಗ ವಾಣಿಜ್ಯ ಮಂಡಳಿಗೆ ನೀಡಿದ್ದ ದೂರನ್ನು ಹಿಂಪಡೆಯುವುದಾಗಿ ಹೇಳಿದ್ದಾರೆ.

ಬೆಂಗಳೂರು: ನಿರ್ಮಾಪಕ ಉಮಾಪತಿ ಬಗ್ಗೆ ದರ್ಶನ್ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎಂದು ಆರೋಪಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ದೂರು ನೀಡಿದ್ದ ಕನ್ನಡ ಪರ ಸಂಘಟನೆಯ ಕನ್ನಡ ಶಫಿ ಎನ್ನುವವರು ಇದೀಗ ವಾಣಿಜ್ಯ ಮಂಡಳಿಗೆ ನೀಡಿದ್ದ ದೂರನ್ನು ಹಿಂಪಡೆಯುವುದಾಗಿ ಹೇಳಿದ್ದಾರೆ.
ಕರ್ನಾಟಕ ಪ್ರಜಾಪರ ವೇದಿಕೆಯ ಸಂಸ್ಥಾಪಕ ರಾಜ್ಯಾಧ್ಯಕ್ಷ ಆಗಿರುವ ಕನ್ನಡ ಶಫಿ ಆದ ನಾನು ನಿಮಗೆ ಹೇಳುವುದೆನೆಂದರೇ ವೇದಿಕೆ ಮೇಲೆ ನಟ ದರ್ಶನ್ ನಿರ್ಮಾಪಕ ಉಮಾಪತಿ ಬಗ್ಗೆ ಬಳಸಿದ್ದ ಭಾಷೆ ಮುಜುಗರ ತಂದಿತ್ತು. ಹೀಗಾಗಿ ನಾವು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ದೂರು ನೀಡಿದ್ದೇವು. ಚಿತ್ರರಂಗದಲ್ಲಿ ಬೆಳೆದು ನಿಂತಿರುವ ಹಿರಿಯ ನಟನಿಗೆ ಇದರಿಂದ ನೋವಾಗಿದ್ದರೆ ನಮ್ಮ ಸಂಘಟನೆಗಳ ಪರವಾಗಿ ಕನ್ನಡದ ಮನಸ್ಸುಗಳಿಗೆ ಕ್ಷಮೆ ಯಾಚಿಸುತ್ತೇನೆ. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ದಾಖಲಿಸಿದ್ದ ದೂರನ್ನು ಹಿಂಪಡೆಯುವುದಾಗಿ ಹೇಳಿದ್ದಾರೆ.
ಮತ್ತೊಂದೆಡೆ, ನಿರ್ಮಾಪಕ ಉಮಾಪತಿ ಕುರಿತು ಅಸಂಬದ್ಧ ಪದ ಬಳಕೆ ಮಾಡಿದ್ದಲ್ಲದೆ ಮಹಿಳೆಯರ ಬಗ್ಗೆಯೂ ಹಗುರವಾಗು ಮಾತನಾಡಿದ್ದಾರೆ ಎಂದು ಶ್ರೀ ಶಕ್ತಿ ಮಹಿಳಾ ಸ್ವ ಸಹಾಯ ಸಂಘದ 35ಕ್ಕೂ ಮಹಿಳೆಯರು ದರ್ಶನ್ ವಿರುದ್ಧ ಪುಟ್ಟೇನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



