ಬೆಂಗಳೂರು: ಮಾಜಿ ಪ್ರಿಯಕರನ ಕಿರುಕುಳಕ್ಕೆ ಬೇಸತ್ತು 19 ವರ್ಷದ ಯುವತಿ ಆತ್ಮಹತ್ಯೆ
ಮಾಜಿ ಪ್ರಿಯಕರನ ಕಿರುಕುಳಕ್ಕೆ ಬೇಸತ್ತು 19 ವರ್ಷದ ಯುವತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಗಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಬೆಂಗಳೂರು: ಮಾಜಿ ಪ್ರಿಯಕರನ ಕಿರುಕುಳಕ್ಕೆ ಬೇಸತ್ತು 19 ವರ್ಷದ ಯುವತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಗಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಬನ್ನೇರುಘಟ್ಟ ರಸ್ತೆಯ ಗೊಟ್ಟಿಗೆರೆ ನಿವಾಸಿ ಚಂದ್ರಕಲಾ ಅವರು ಬುಧವಾರ ಜಿಗಣಿಯ ರಾಮಸಂದ್ರದಲ್ಲಿರುವ ಚಿಕ್ಕಮ್ಮನ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಅರುಣ್ ಜೊತೆಗೆ ಯುವತಿ ಪ್ರೀತಿಯಲ್ಲಿ ಬಿದ್ದಿದ್ದಳು, ಈ ಸಂಬಂಧದ ಬಗ್ಗೆ ತಿಳಿದಿದ್ದ ಚಂದ್ರಕಲಾ ಪೋಷಕರು, ಆತ ಕೆಟ್ಟ ಸಹವಾಸದಲ್ಲಿದ್ದು, ದುಶ್ಚಟಗಳಿಗೆ ವ್ಯಸನಿ ಎಂಬ ಕಾರಣದಿಂದ ಆತನ ಜೊತೆಗಿನ ಸಂಬಂಧ ಕೊನೆಗೊಳಿಸುವಂತೆ ಮಗಳಿಗೆ ಬುದ್ದಿ ಹೇಳಿದ್ದಾರೆ.
ಆನಂತರ ಚಂದ್ರಕಲಾ ತಮ್ಮ ದೂರದ ಸಂಬಂಧಿ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ವಿಷಯ ತಿಳಿದ ಅರುಣ್ ಆಕೆಗೆ ಕಿರುಕುಳ ನೀಡಲು ಪ್ರಾರಂಭಿಸಿದ್ದನು ಮತ್ತು ಆಕೆಯ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದ ವರನಿಗೆ ಬೆದರಿಕೆ ಹಾಕಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಿರುಕುಳ ತಾಳಲಾರದೆ ಚಂದ್ರಕಲಾ ಮಂಗಳವಾರ ಚಿಕ್ಕಮ್ಮನ ಮನೆಗೆ ಹೋಗಿದ್ದಳು. ಅರುಣ್ ತನ್ನನ್ನು ನಿಯಮಿತವಾಗಿ ಹಿಂಬಾಲಿಸುತ್ತಿದ್ದನು ಮತ್ತು ತನ್ನ ನಿಶ್ಚಿತಾರ್ಥವನ್ನು ರದ್ದುಗೊಳಿಸಿ ತನ್ನನ್ನು ಮದುವೆಯಾಗುವಂತೆ ಒತ್ತಾಯಿಸುತ್ತಿದ್ದನು ಎಂದು ಆರೋಪಿಸಲಾಗಿದೆ.
ನಿಶ್ಚಿತಾರ್ಥವಾಗಿದ್ದ ವರನಿಗೆ ತಮ್ಮ ಸಂಬಂಧದ ಬಗ್ಗೆ ತಿಳಿಸಿ ತಾನು ಸಾಯುವುದಾಗಿ ಅರುಣ್ ಚಂದ್ರಕಲಾಗೆ ಬೆದರಿಕೆ ಹಾಕಿದ್ದ ಎಂದು ಆಕೆಯ ತಂದೆ ಆರೋಪಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ ಜಿಗಣಿ ಪೊಲೀಸರು ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆಕೆಯ ಸಾವಿಗೆ ಅರುಣ್ ಕಾರಣ ಎಂದು ಆಕೆಯ ಪೋಷಕರು ಆರೋಪಿಸಿದ್ದಾರೆ. ಪ್ರಕರಣ ಸಂಬಂಧ ತನಿಖೆ ಮುಂದುವರಿದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



