ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ನಿಲಯ್ ವಿಪಿನ್‌ಚಂದ್ರ ಅಂಜಾರಿಯಾ ಪ್ರಮಾಣ ವಚನ
ಕರ್ನಾಟಕ ಹೈಕೋರ್ಟ್‌ನ ನೂತನ ಮುಖ್ಯ ನ್ಯಾಯಮೂರ್ತಿಯಾಗಿ ನಿಲಯ್ ವಿಪಿನಚಂದ್ರ ಅಂಜಾರಿಯಾ ಅವರು ಭಾನುವಾರ ಪ್ರಮಾಣ ವಚನ ಸ್ವೀಕರಿಸಿದರು. ರಾಜಭವನದ 'ಗಾಜಿನ ಮನೆ'ಯಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರಿಗೆ ಪ್ರಮಾಣ ವಚನ ಬೋಧಿಸಿದರು.

ಬೆಂಗಳೂರು: ಕರ್ನಾಟಕ ಹೈಕೋರ್ಟ್‌ನ ನೂತನ ಮುಖ್ಯ ನ್ಯಾಯಮೂರ್ತಿಯಾಗಿ ನಿಲಯ್ ವಿಪಿನಚಂದ್ರ ಅಂಜಾರಿಯಾ ಅವರು ಭಾನುವಾರ ಪ್ರಮಾಣ ವಚನ ಸ್ವೀಕರಿಸಿದರು.
ರಾಜಭವನದ 'ಗಾಜಿನ ಮನೆ'ಯಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರಿಗೆ ಪ್ರಮಾಣ ವಚನ ಬೋಧಿಸಿದರು.
ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್‌ಕೆ ಪಾಟೀಲ್ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.
ಅಂಜಾರಿಯಾ ಅವರು ಈ ಹಿಂದೆ ಗುಜರಾತ್ ಹೈಕೋರ್ಟ್‌ನ ನ್ಯಾಯಾಧೀಶರಾಗಿದ್ದರು ಮತ್ತು ಅವರ ಹೆಸರನ್ನು ಸುಪ್ರೀಂ ಕೋರ್ಟ್ ಕೊಲಿಜಿಯಂ ಈ ತಿಂಗಳ ಆರಂಭದಲ್ಲಿ ಶಿಫಾರಸು ಮಾಡಿತ್ತು.
ನ್ಯಾಯಮೂರ್ತಿ ಪಿಎಸ್ ದಿನೇಶ್ ಕುಮಾರ್ (62) ಅವರು ಫೆಬ್ರುವರಿ 24 ರಂದು ನಿವೃತ್ತಿಯಾಗಿದ್ದು, ಅಂಜಾರಿಯಾ ಅವರು ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ಅಧಿಕಾರ ವಹಿಸಿಕೊಂಡರು.
ಅಂಜಾರಿಯಾ ಅವರು ನವೆಂಬರ್ 2011 ರಲ್ಲಿ ಗುಜರಾತ್ ಹೈಕೋರ್ಟ್‌ನ ನ್ಯಾಯಾಧೀಶರಾಗಿ ನೇಮಕಗೊಂಡರು ಮತ್ತು ಅಂದಿನಿಂದ ಅಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.
ನ್ಯಾಯಾಧೀಶರಾಗಿ ಪದೋನ್ನತಿಯಾಗುವ ಮೊದಲು ಅವರು ಗುಜರಾತ್ ಹೈಕೋರ್ಟ್‌ನಲ್ಲಿ ಸಿವಿಲ್, ಸಾಂವಿಧಾನಿಕ, ಕಂಪನಿ ಕಾನೂನು, ಕಾರ್ಮಿಕ ಮತ್ತು ಸೇವಾ ವಿಷಯಗಳಲ್ಲಿ ಅಭ್ಯಾಸ ಮಾಡಿದ್ದರು ಎಂದು ಕೊಲಿಜಿಯಂ ಅವರ ಹೆಸರನ್ನು ಶಿಫಾರಸು ಮಾಡುವಾಗ ಗಮನಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



