ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾಗಿ ರೇವಣ್ಣ ನೇಮಕ; 44 ನಿಗಮ ಮಂಡಳಿ ಅಧ್ಯಕ್ಷರ ಪಟ್ಟಿಗೂ ಸಿಎಂ ಅಸ್ತು
ಐದು ಗ್ಯಾರಂಟಿಗಳನ್ನು ಘೋಷಿಸುವ ಮೂಲಕ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರ, ಗ್ಯಾರಂಟಿ ಯೋಜನೆಗಳಿಗೆ ಹೆಚ್ಚು ಒತ್ತು ನೀಡುತ್ತಿದೆ. ಇದೀಗ ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ಸಮಿತಿ ರಚನೆ.

ಬೆಂಗಳೂರು: ಐದು ಗ್ಯಾರಂಟಿಗಳನ್ನು ಘೋಷಿಸುವ ಮೂಲಕ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರ, ಗ್ಯಾರಂಟಿ ಯೋಜನೆಗಳಿಗೆ ಹೆಚ್ಚು ಒತ್ತು ನೀಡುತ್ತಿದೆ. ಇದೀಗ ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ಸಮಿತಿ ರಚಿಸಿದ್ದು, ಸಮಿತಿಗೆ ಮಾಜಿ ಸಚಿವ ಎಚ್.ಎಂ.ರೇವಣ್ಣ ಅವರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.
ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಗೆ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರ ನೇಮಕಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಅನುಮೋದನೆ ನೀಡಿದ್ದು, ಸಚಿವ ಸಂಪುಟ ದರ್ಜೆ ಸ್ಥಾನಮಾನದೊಂದಿಗೆ ರೇವಣ್ಣ ಅವರನ್ನು ಸಮಿತಿ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.
ಇನ್ನು ಉಪಾಧ್ಯಕ್ಷರಾಗಿ ಮೆಹರೋಜ್ ಖಾನ್, ಡಾ.ಪುಷ್ಪಾ ಅಮರನಾಥ್, ಎಸ್.ಆರ್.ಪಾಟೀಲ್, ಸೂರಜ್ ಹೆಗ್ಡೆ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಇದೇ ವೇಳೆ, 44 ನಿಗಮ ಮಂಡಳಿಗಳ ಅಧ್ಯಕ್ಷರ ಪಟ್ಟಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅನುಮೋದಿಸಿದ್ದಾರೆ. ಈ ಪಟ್ಟಿ ಆಯಾ ಇಲಾಖೆಗಳಿಗೆ ರವಾನೆಯಾಗಿದ್ದು, ನಾಳೆ(ಫೆ.29) ಆಯಾ ಇಲಾಖೆಗಳಿಂದ ಪ್ರತಿಯೊಬ್ಬರಿಗೂ ವೈಯುಕ್ತಿಕವಾಗಿ ನೇಮಕ ಆದೇಶ ರವಾನೆಯಾಗಲಿದೆ ಎಂದು ಸಿಎಂ ಕಚೇರಿ ಮಾಹಿತಿ ನೀಡಿದೆ.
ಕೆಲವು ದಿನಗಳ ಹಿಂದೆ ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾಂಗ್ರೆಸ್ ಜಿಲ್ಲಾಧ್ಯಕ್ಷರು, ರಾಜ್ಯ ಪದಾಧಿಕಾರಿಗಳು ಮತ್ತು ಜಿಲ್ಲಾ ಉಸ್ತುವಾರಿ ಸಚಿವರುಗಳ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ರಚನೆ ಬಗ್ಗೆ ಘೋಷಣೆ ಮಾಡಿದ್ದರು.
ವಾರ್ಷಿಕ 16 ಕೋಟಿ ರೂ. ವೆಚ್ಚ
ಈ ಅನುಷ್ಠಾನ ಸಮಿತಿ ನಿರ್ವಹಣೆಗೆ ವಾರ್ಷಿಕವಾಗಿ 16 ಕೋಟಿ ರೂ. ವೆಚ್ಚ ಮಾಡಲಾಗುತ್ತಿದೆ. ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನದ ಹಿನ್ನೆಲೆಯಲ್ಲಿ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಮಾಹಿತಿ ನೀಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



