ಕನ್ನಡ ನಾಮಫಲಕ ಅಳವಡಿಕೆ ಗಡುವು ಎರಡು ವಾರ ವಿಸ್ತರಿಸಿದ ರಾಜ್ಯ ಸರ್ಕಾರ
ನಾಮಫಲಕದಲ್ಲಿ ಶೇ. 60ರಷ್ಟು ಕನ್ನಡ ಇರಬೇಕು ಎಂದು ಕಡ್ಡಾಯಗೊಳಿಸಲಾಗಿದ್ದು, ನಿಯಮಬದ್ಧ ಫಲಕ ಅಳವಡಿಸಲು ನಿಗದಿಪಡಿಸಲಾಗಿದ್ದ ಗಡುವನ್ನು ಎರಡು ವಾರಗಳವರೆಗೆ ವಿಸ್ತರಿಸಲಾಗಿದೆ.

ಬೆಂಗಳೂರು: ಬೆಂಗಳೂರಿನಲ್ಲಿ ಹೋಟೆಲ್, ಅಂಗಡಿ ಸೇರಿದಂತೆ ಎಲ್ಲಾ ವ್ಯಾಪಾರಿ ಕೇಂದ್ರಗಳ ನಾಮಫಲಕದಲ್ಲಿ ಶೇ. 60ರಷ್ಟು ಕನ್ನಡ ಇರಬೇಕು ಎಂದು ಕಡ್ಡಾಯಗೊಳಿಸಲಾಗಿದ್ದು, ನಿಯಮಬದ್ಧ ಫಲಕ ಅಳವಡಿಸಲು ನಿಗದಿಪಡಿಸಲಾಗಿದ್ದ ಗಡುವನ್ನು ರಾಜ್ಯ ಸರ್ಕಾರ ಗುರುವಾರ ಎರಡು ವಾರಗಳವರೆಗೆ ವಿಸ್ತರಿಸಿದೆ.
ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು, ಬೆಂಗಳೂರಿನ ಎಲ್ಲಾ ಅಂಗಡಿ ಮುಂಗಟ್ಟುಗಳು, ವಾಣಿಜ್ಯ ಮಳಿಗೆಗಳು ಮೊದಲಾದಕಡೆ ಶೇ.60ರಷ್ಟು ಕನ್ನಡ ನಾಮಫಲಕಗಳನ್ನು ಅಳವಡಿಸಲು ಹೆಚ್ಚಿನ ಸಮಯ ಬೇಕೆಂಬುದನ್ನು ಪರಿಗಣಿಸಿ, ಈಗಾಗಲೇ ನೀಡಲಾಗಿದ್ದ ಗಡುವನ್ನು 2 ವಾರಗಳ ಕಾಲ ವಿಸ್ತರಿಸಲಾಗಿದೆ ಎಂದು ತಿಳಿಸಿದ್ದಾರೆ.
ಕನ್ನಡ ನಾಡಿನಲ್ಲಿ ಕನ್ನಡವೇ ಸಾರ್ವಭೌಮ, ಹಾಗಾಗಿ ನಮ್ಮ ಹೃದಯದ ಭಾಷೆಯನ್ನು ಎತ್ತಿಹಿಡಿಯುವುದು ಅತಿ ಮುಖ್ಯ. 2 ವಾರಗಳ ನಂತರ ಎಲ್ಲರೂ ಕಾನೂನು ಪಾಲನೆ ಮಾಡುತ್ತಾರೆ ಎಂದು ನಿರೀಕ್ಷಿಸಿದ್ದೇನೆ ಎಂದು ಡಿಸಿಎಂ ಟ್ವೀಟ್ ಮಾಡಿದ್ದಾರೆ.
ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಭಾಷೆ ಅಳವಡಿಕೆಗೆ ನೀಡಲಾಗಿದ್ದ ಗಡುವು ಇಂದು ಅಂತ್ಯವಾಗಿದ್ದು, ಅದನ್ನು ಈಗ ವಾರಗಳ ಕಾಲ ವಿಸ್ತರಿಸಲಾಗಿದೆ. ಎರಡು ವಾರಗಳ ನಂತರ ಆದೇಶ ಪಾಲನೆ ಮಾಡದ ಮಳಿಗೆಗಳ ವ್ಯಾಪಾರ ಪರವಾನಗಿ ರದ್ದುಪಡಿಸಿ, ದಂಡ ವಿಧಿಸಲು ಬಿಬಿಎಂಪಿ ಮುಂದಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



