ಶೇ.60ರಷ್ಟು ಕಡ್ಡಾಯ ಕನ್ನಡ ನಾಮಫಲಕ: ಗಡುವು ವಿಸ್ತರಿಸಿದ ಸರ್ಕಾರ
ನಗರದ ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಭಾಷೆ ಅಳವಡಿಕೆಗೆ ನೀಡಲಾಗಿದ್ದ ಗಡುವನ್ನು ಮತ್ತೆ 2 ವಾರಗಳ ಕಾಲ ವಿಸ್ತರಣೆ ಮಾಡಿರುವುದಾಗಿ ರಾಜ್ಯ ಸರ್ಕಾರ ಗುರುವಾರ ಹೇಳಿದೆ.

ಬೆಂಗಳೂರು: ನಗರದ ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಭಾಷೆ ಅಳವಡಿಕೆಗೆ ನೀಡಲಾಗಿದ್ದ ಗಡುವನ್ನು ಮತ್ತೆ 2 ವಾರಗಳ ಕಾಲ ವಿಸ್ತರಣೆ ಮಾಡಿರುವುದಾಗಿ ರಾಜ್ಯ ಸರ್ಕಾರ ಗುರುವಾರ ಹೇಳಿದೆ.
ಈ ಸಂಬಂಧ ಮಾಹಿತಿ ನೀಡಿರುವ ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು, ಬೆಂಗಳೂರಿನ ಎಲ್ಲಾ ಅಂಗಡಿ ಮುಂಗಟ್ಟುಗಳು, ವಾಣಿಜ್ಯ ಮಳಿಗೆಗಳು ಮೊದಲಾದಕಡೆ ಶೇ.60ರಷ್ಟು ಕನ್ನಡ ನಾಮಫಲಕಗಳನ್ನು ಅಳವಡಿಸಲು ಹೆಚ್ಚಿನ ಸಮಯ ಬೇಕೆಂಬುದನ್ನು ಪರಿಗಣಿಸಿ, ಈಗಾಗಲೇ ನೀಡಲಾಗಿದ್ದ ಗಡುವನ್ನು 2 ವಾರಗಳ ಕಾಲ ವಿಸ್ತರಿಸಲಾಗಿದೆ ಎಂದು ಹೇಳಿದ್ದಾರೆ.

ಶೇ.60ರಷ್ಟು ಕಡ್ಡಾಯ ಕನ್ನಡ ನಾಮಫಲಕ: ಇಂದು ಕೊನೆ ದಿನ, ನಾಳೆಯಿಂದಲೇ ಬೀಗ ಜಡಿಯಲು, ದಂಡ ವಿಧಿಸಲು ಪಾಲಿಕೆ ನಿರ್ಧಾರ!
ಕನ್ನಡ ನಾಡಿನಲ್ಲಿ ಕನ್ನಡವೇ ಸಾರ್ವಭೌಮ, ಹಾಗಾಗಿ ನಮ್ಮ ಹೃದಯದ ಭಾಷೆಯನ್ನು ಎತ್ತಿಹಿಡಿಯುವುದು ಅತಿ ಮುಖ್ಯ. 2 ವಾರಗಳ ನಂತರ ಎಲ್ಲರೂ ಕಾನೂನು ಪಾಲನೆ ಮಾಡುತ್ತಾರೆ ಎಂದು ನಿರೀಕ್ಷಿಸಿದ್ದೇನೆಂದು ತಿಳಿಸಿದ್ದಾರೆ.
ನಿನ್ನೆಯಷ್ಟೇ ಹೇಳಿಕೆ ನೀಡಿದ ಬಿಬಿಎಂಪಿ, ಸರ್ಕಾರ ಅಥವಾ ಸ್ಥಳೀಯ ಪ್ರಾಧಿಕಾರಗಳಿಂದ ಅನುಮತಿ ಮತ್ತು ಮಂಜೂರಾತಿಯೊಂದಿಗೆ ಕಾರ್ಯ ನಿರ್ವಹಿಸುತ್ತಿರುವ ವಾಣಿಜ್ಯ ಕೈಗಾರಿಕೆ ಮತ್ತು ವ್ಯವಹಾರ ಉದ್ಯಮಗಳು, ಟ್ರಸ್ಟ್ಗಳು, ಸಮಾಲೋಚನಾ ಕೇಂದ್ರಗಳು, ಆಸ್ಪತ್ರೆಗಳು, ಪ್ರಯೋಗಾಲಯಗಳು, ಮನೋರಂಜನಾ ಕೇಂದ್ರಗಳು ಮತ್ತು ಹೋಟೆಲ್‌ಗಳು ಸೇರಿದಂತೆ ಶೆ.60ಷ್ಟು ನಾಮಫಲಕಗಳನ್ನು ಬದಲಾವಣೆ ಮಾಡದಿದ್ದರೆ ಉದ್ದಿಮೆಗಳ ಪರವಾನಗಿಯನ್ನು ಅಮಾನತುಗೊಳಿಸಲು ಹಾಗೂ ಬೀಗ ಮುದ್ರೆ ಹಾಕಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಹೇಳಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


