ರಾಜ್ಯ

ಕಲಬುರಗಿ: ಮಾರಕಾಸ್ತ್ರಗಳಿಂದ ಕೊಚ್ಚಿ ಬಿಜೆಪಿ ಮುಖಂಡನ ಬರ್ಬರ ಹತ್ಯೆ

ಸರಸಂಬಾ ಗ್ರಾಮದ ಬಿಜೆಪಿ ಮುಖಂಡ ಮಹಾಂತಪ್ಪ ‌ಸಿದ್ದರಾಮಪ್ಪ ಆಲೂರೆ (45) ಅವರನ್ನು ಗುರುವಾರ ದುಷ್ಕರ್ಮಿಗಳು ಕೊಲೆ ಮಾಡಿ ಪರಾರಿಯಾಗಿದ್ದಾರೆ.

ಕಲಬುರಗಿ: ಮಾರಕಾಸ್ತ್ರಗಳಿಂದ ಕೊಚ್ಚಿ ಬಿಜೆಪಿ ಮುಖಂಡನ ಬರ್ಬರ ಹತ್ಯೆ
ಸಾಂದರ್ಭಿಕ ಚಿತ್ರ
Published On :

ಕಲಬುರಗಿ: ಸರಸಂಬಾ ಗ್ರಾಮದ ಬಿಜೆಪಿ ಮುಖಂಡ ಮಹಾಂತಪ್ಪ ‌ಸಿದ್ದರಾಮಪ್ಪ ಆಲೂರೆ (45) ಅವರನ್ನು ಗುರುವಾರ ದುಷ್ಕರ್ಮಿಗಳು ಕೊಲೆ ಮಾಡಿ ಪರಾರಿಯಾಗಿದ್ದಾರೆ.

ಆಳಂದ ತಾಲೂಕಿನ ಸರಸಂಬಾ ಗ್ರಾಮದಲ್ಲಿ ಧನಲಕ್ಷ್ಮಿ ಸಹಕಾರಿ ಸಂಘದ ಅಧ್ಯಕ್ಷರಾಗಿದ್ದ ಮಹಾಂತಪ್ಪ, ಸತತ ಮೂರು ಬಾರಿ ಗ್ರಾಮ ಪಂಚಾಯಿತಿ ಸದಸ್ಯರಾಗಿ ಆಯ್ಕೆಯಾಗಿದ್ದರು.

ಮಹಾಂತಪ್ಪ, ಬೆಳಿಗ್ಗೆ ಹೊಲದಲ್ಲಿ ಕಟ್ಟಿಹಾಕಿದ್ದ ಹಸುವಿನ ಹಾಲು ತೆಗೆದುಕೊಂಡು ಮನೆಯತ್ತ ಬರುತ್ತಿದ್ದರು. ಈ ವೇಳೆ ಗ್ರಾಮದ ಮುಖ್ಯರಸ್ತೆಯ ಜೆಸ್ಕಾಂ ಕಚೇರಿ ಸಮೀಪ ಕಾರಿನಲ್ಲಿ ಬಂದ ದುಷ್ಕರ್ಮಿಗಳು, ಮಹಾಂತಪ್ಪ ಅವರನ್ನು ಅಡ್ಡಗಟ್ಟಿದ್ದಾರೆ.

ನಂತರ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಗಂಭೀರವಾಗಿ ಗಾಯಗೊಳಿಸಿ ಪರಾರಿಯಾಗಿದ್ದಾರೆ. ರಕ್ತದ ಮಡುವಿನಲ್ಲಿ ಬಿದ್ದಿದ್ದ ಮಹಾಂತಪ್ಪ ಅವರನ್ನು ಸೋಲಾಪುರ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಕೊಲೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಮಾದನ ಹಿಪ್ಪರಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.