ಪಡಿತರ ವಿತರಕರಿಗೆ ಕಮಿಷನ್ ಮೊತ್ತ ಹೆಚ್ಚಳ: ಸಿಎಂ ಸಿದ್ದರಾಮಯ್ಯ
ಪಡಿತರ ವಿತರಕರಿಗೆ ಪ್ರತಿ ಕೆಜಿ ಅಕ್ಕಿಗೆ ಕಮಿಷನ್ ಮೊತ್ತವನ್ನು ಒಂದೂವರೆ ರೂಪಾಯಿಗೆ ಹೆಚ್ಚಳ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಬೆಂಗಳೂರು: ಪಡಿತರ ವಿತರಕರಿಗೆ ಪ್ರತಿ ಕೆಜಿ ಅಕ್ಕಿಗೆ ಕಮಿಷನ್ ಮೊತ್ತವನ್ನು ಒಂದೂವರೆ ರೂಪಾಯಿಗೆ ಹೆಚ್ಚಳ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ನಗರದ ಅರಮನೆ ಮೈದಾನದಲ್ಲಿ ಆಯೋಜಿಸಿದ್ದ ''ಅನ್ನಭಾಗ್ಯದ ದಶಮಾನೋತ್ಸವ" ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಮುಖ್ಯಮಂತ್ರಿ, 2013ರ ಬಸವ ಜಯಂತಿಯ ದಿನವೇ ಜಾರಿಗೆ ಬಂದಿರುವ ಅನ್ನಭಾಗ್ಯ ಯೋಜನೆ ಬಸವಣ್ಣನವರ ದಾಸೋಹದಿಂದ ಪ್ರೇರಿತವಾಗಿದೆಹಸಿವಿನ ಜೊತೆಗೆ ದೇಶವನ್ನು ಅನಕ್ಷರತೆ, ಅನಾರೋಗ್ಯ ಮತ್ತು ನಿರುದ್ಯೋಗ ಮುಕ್ತ ಮಾಡುವುದೇ ನಮ್ಮ ಕಾಂಗ್ರೆಸ್ ಪಕ್ಷದ ಗುರಿ ಎಂದರು.
ನಮ್ಮ ಹಿಂದಿನ ಸರ್ಕಾರದ ಕಾಲದಲ್ಲಿ ಜಾರಿಗೆ ತಂದಿದ್ದ ಅನ್ನಭಾಗ್ಯ, ಕ್ಷೀರಭಾಗ್ಯ ಕ್ಷೀರಧಾರೆ, ಕೃಷಿಭಾಗ್ಯ, ಪಶುಭಾಗ್ಯ ವಿದ್ಯಾಸಿರಿ, ಇಂದಿರಾ ಕ್ಯಾಂಟೀನ್ ಕಾರ್ಯಕ್ರಮಗಳೆಲ್ಲವೂ ಈ ಗುರಿಯೆಡೆಗೆ ಕರ್ನಾಟಕವನ್ನು ಕೊಂಡೊಯ್ಯುವ ಪ್ರಯತ್ನದಲ್ಲಿ ಯಶಸ್ವಿ ಆಗಿವೆ. ಈಗಿನ ಸರ್ಕಾರದ ಗ್ಯಾರಂಟಿ ಯೋಜನೆಗಳ ಗುರಿ ಕೂಡಾ ರಾಜ್ಯವನ್ನು ಹಸಿವು, ಅನಾರೋಗ್ಯ, ಅನಕ್ಷರತೆ, ನಿರುದ್ಯೋಗ ಮುಕ್ತ ಮಾಡುವುದೇ ಆಗಿದೆ ಎಂದು ತಿಳಿಸಿದರು.
ಬಸವಣ್ಣನ ಕಾಯಕ-ದಾಸೋಹದ ಪರಿಕಲ್ಪನೆ ಅನ್ನಭಾಗ್ಯಕ್ಕೆ ಪ್ರೇರಣೆ. ನಮ್ಮ ಯೋಜನೆಗಳಲ್ಲಿ ರಾಜಕೀಯ ಲಾಭದ ಉದ್ದೇಶ ಇಲ್ಲ, ನಮ್ಮ ಯೋಜನೆಗಳ ಉದ್ದೇಶ ಸಂಪತ್ತು, ಅಧಿಕಾರ ಮತ್ತು ಅವಕಾಶಗಳ ಸಮಾನ ಹಂಚಿಕೆ. ರಾಜ್ಯದ ಯಾವುದೇ ಮನೆಯಲ್ಲಿ ಹಸಿವು, ಅನಾರೋಗ್ಯ, ಅನಕ್ಷರತೆ ಮತ್ತು ನಿರುದ್ಯೋಗದಿಂದ ಬಳಲುವರು ಇರದಂತೆ ನೋಡಿಕೊಳ್ಳುವುದೇ ನಮ್ಮ ಆಶಯ ಮತ್ತು ಬದ್ಧತೆ ಎಂದು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


