ರಾಜ್ಯ

ಯಾವುದೇ ಕಾರಣವಿಲ್ಲದೆ ಏಕೆ ಬಂಧಿಸುತ್ತಾರೆ?: ಪ್ರತಾಪ್ ಸಿಂಹ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ

ಯಾರು ಕಾನೂನನ್ನು ಉಲ್ಲಂಘನೆ ಮಾಡುತ್ತಾರೆಯೇ ಅವರನ್ನು ಬಂಧನಕ್ಕೊಳಪಡಿಸಲಾಗುತ್ತದೆ, ಯಾವುದೇ ಕಾರಣವಿಲ್ಲದೆ ಏಕೆ ಬಂಧನಕ್ಕೊಳಪಡಿಸುತ್ತಾರೆಂದು ಸಂಸದ ಪ್ರತಾಪ್ ಸಿಂಹ ಆರೋಪಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿಕ್ರಿಯಿಸಿದ್ದಾರೆ.

ಯಾವುದೇ ಕಾರಣವಿಲ್ಲದೆ ಏಕೆ ಬಂಧಿಸುತ್ತಾರೆ?: ಪ್ರತಾಪ್ ಸಿಂಹ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ
ಸಂಗ್ರಹ ಚಿತ್ರ
Published On :

ಬೆಂಗಳೂರು: ಯಾರು ಕಾನೂನನ್ನು ಉಲ್ಲಂಘನೆ ಮಾಡುತ್ತಾರೆಯೇ ಅವರನ್ನು ಬಂಧನಕ್ಕೊಳಪಡಿಸಲಾಗುತ್ತದೆ,  ಯಾವುದೇ ಕಾರಣವಿಲ್ಲದೆ ಏಕೆ ಬಂಧನಕ್ಕೊಳಪಡಿಸುತ್ತಾರೆಂದು ಸಂಸದ ಪ್ರತಾಪ್ ಸಿಂಹ ಆರೋಪಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿಕ್ರಿಯಿಸಿದ್ದಾರೆ.

ಸಂಸದ ಪ್ರತಾಪ್​ ಸಿಂಹ ಸೋದರ ವಿಕ್ರಂ ಸಿಂಹ ಬಂಧನ ಕೇಸ್​ ವಿಚಾರವಾಗಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ತಪ್ಪು ಮಾಡದವರ ಮೇಲೆ ಏಕೆ ಕ್ರಮ ಆಗುತ್ತದೆ? ನಮ್ಮ ಸರ್ಕಾರ ಕಾನೂನು ಪ್ರಕಾರ ಕ್ರಮ ಕೈಗೊಳ್ಳುತ್ತದೆ. ನಿರಪರಾಧಿಗಳಿಗೆ ಯಾರಿಗೂ ತೊಂದರೆ ಆಗಲು ಬಿಡುವುದಿಲ್ಲ ಎಂದು ಹೇಳಿದರು.

ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ಮಾತನಾಡಿ, ಅರಣ್ಯ ಇಲಾಖೆ ಅನುಮತಿ ಇಲ್ಲದಿದ್ದರೆ ಕ್ರಮ ಆಗುತ್ತದೆ. ಈ ವಿಚಾರದಲ್ಲಿ ನಾವ್ಯಾರೂ ಮಧ್ಯಪ್ರವೇಶ ಮಾಡುವುದಿಲ್ಲ. ಅಧಿಕಾರಿಗಳು ಅವರ ಕೆಲಸ ಮಾಡಿದ್ದಾರೆ. ಎಲ್ಲರಿಗೂ ಭಯ ಇರಬೇಕೆಂದು ಕ್ರಮಕೈಗೊಂಡಿದ್ದಾರೆ ಎಂದು ತಿಳಿಸಿದ್ದಾರೆ.

ಮರ ಕತ್ತರಿಸಿ ಸಾಗಿಸಿದ ಪ್ರಕರಣದಲ್ಲಿ ಸಂಸದ ಪ್ರತಾಪ್ ಸಿಂಹ ಅವರ ಸಹೋದರ ವಿಕ್ರಂ ಸಿಂಹ ಅವರನ್ನು ಅರಣ್ಯ ಅಧಿಕಾರಿಗಳು ಬಂಧನಕ್ಕೊಳಪಡಿಸಿದ್ದರು. ಸದ್ಯ ಜಾಮೀನು ಮಂಜೂರಾದ ಕಾರಣ ವಿಕ್ರಂ ಸಿಂಹ ಹೊರಬಂದಿದ್ದಾರೆ. ಇದಕ್ಕೂ ಮುನ್ನ ಈ ಪ್ರಕರಣದ ಕುರಿತು ಮಾತನಾಡಿದ್ದ ಪ್ರತಾಪ್‌ ಸಿಂಹ ನೇರವಾಗಿ ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ ಮಾಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.