ಹೊಸ ವರ್ಷದ ಸಂಭ್ರಮಾಚರಣೆ ವೇಳೆ ಕಿಡಿಗೇಡಿಗಳಿಂದ ಕನ್ನಡ ಧ್ವಜಕ್ಕೆ ಬೆಂಕಿ; ಬೆಳಗಾವಿ ಜಿಲ್ಲೆಯಲ್ಲಿ ಉದ್ವಿಗ್ನತೆ
ಬೆಳಗಾವಿ ಜಿಲ್ಲೆಯಲ್ಲಿ ಹೊಸ ವರ್ಷದ ಸಂಭ್ರಮಾಚರಣೆ ವೇಳೆ ಕಿಡಿಗೇಡಿಗಳ ಗುಂಪೊಂದು ಕನ್ನಡ ಧ್ವಜವನ್ನು ಸುಟ್ಟು ಹಾಕಿರುವ ಘಟನೆ ನಡೆದಿದೆ. ಬೆಳಗಾವಿ ನಗರದ ಸುಳಗಾ ಗ್ರಾಮದ ರಾಯಣ್ಣ ವೃತ್ತದಲ್ಲಿ ಮಧ್ಯರಾತ್ರಿ ಈ ಘಟನೆ ನಡೆದಿದೆ.

ಬೆಳಗಾವಿ: ಬೆಳಗಾವಿ ಜಿಲ್ಲೆಯಲ್ಲಿ ಹೊಸ ವರ್ಷದ ಸಂಭ್ರಮಾಚರಣೆ ವೇಳೆ ಕಿಡಿಗೇಡಿಗಳ ಗುಂಪೊಂದು ಕನ್ನಡ ಧ್ವಜವನ್ನು ಸುಟ್ಟು ಹಾಕಿರುವ ಘಟನೆ ನಡೆದಿದೆ.
ಬೆಳಗಾವಿ ನಗರದ ಸುಳಗಾ ಗ್ರಾಮದ ರಾಯಣ್ಣ ವೃತ್ತದಲ್ಲಿ ಮಧ್ಯರಾತ್ರಿ ಈ ಘಟನೆ ನಡೆದಿದೆ.
ಕನ್ನಡಪರ ಹೋರಾಟಗಾರರು ಈ ಘಟನೆಯನ್ನು ಖಂಡಿಸಿದ್ದು, ತಪ್ಪಿತಸ್ಥರನ್ನು ಬಂಧಿಸುವಂತೆ ಪೊಲೀಸರನ್ನು ಒತ್ತಾಯಿಸಿದ್ದಾರೆ.
ರಾಯಣ್ಣ ವೃತ್ತದಲ್ಲಿ ಅಳವಡಿಸಿದ್ದ ಕನ್ನಡ ಧ್ವಜಕ್ಕೆ ರಾತ್ರಿ ವೇಳೆ ಕಿಡಿಗೇಡಿಗಳ ಗುಂಪೊಂದು ಬೆಂಕಿ ಹಚ್ಚಿ ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ: ಬೆಳಗಾವಿ: ಕನ್ನಡ ಧ್ವಜ ಅಳವಡಿಸಿದ್ದಕ್ಕೆ ಯುವಕರಿಗೆ ಥಳಿತ; ಸಂಕೇಶ್ವರ ಪಟ್ಟಣದಲ್ಲಿ ಉದ್ವಿಗ್ನತೆ, ಐವರ ವಿರುದ್ಧ ಎಫ್ಐಆರ್
ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ವಿವರಗಳು ಇನ್ನಷ್ಟೇ ಹೊರಬರಬೇಕಿದೆ. ಪೊಲೀಸರು ಸೂಕ್ಷ್ಮ ಸ್ಥಳಗಳಲ್ಲಿ ಭದ್ರತೆ ಹೆಚ್ಚಿಸಿದ್ದು, ಆರೋಪಿಗಳ ಪತ್ತೆಗೆ ಶೋಧ ನಡೆಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


