2023ರಲ್ಲಿ ಬೆಂಗಳೂರಿನಲ್ಲಿ 880 ಮಾರಣಾಂತಿಕ ಅಪಘಾತ, 184 ಕೋಟಿ ರೂ ಟ್ರಾಫಿಕ್ ದಂಡ ಸಂಗ್ರಹ
2023ರಲ್ಲಿ ಬೆಂಗಳೂರಿನಲ್ಲಿ 880 ಮಾರಣಾಂತಿಕ ಅಪಘಾತಗಳು ಸಂಭವಿಸಿದ್ದು, 909 ಮಂದಿ ಸಾವಿಗೀಡಾಗಿದ್ದಾರೆ.

ಬೆಂಗಳೂರು: 2023ರಲ್ಲಿ ಬೆಂಗಳೂರಿನಲ್ಲಿ 880 ಮಾರಣಾಂತಿಕ ಅಪಘಾತಗಳು ಸಂಭವಿಸಿದ್ದು, 909 ಮಂದಿ ಸಾವಿಗೀಡಾಗಿದ್ದಾರೆ.
ಹೌದು.. ಕಳೆದ ವರ್ಷದ ಸಂಚಾರ ಪೊಲೀಸ್ ವಿಭಾಗಕ್ಕೆ ಸಂಬಂಧಿಸಿದ ವಿವರಗಳನ್ನು ಸೋಮವಾರ ಬಿಡುಗಡೆ ಮಾಡಲಾಗಿದ್ದು, ಸಿಲಿಕಾನ್ ಸಿಟಿ ಬೆಂಗಳೂರು ನಗರದಲ್ಲಿ 880 ಮಾರಣಾಂತಿಕ ಅಪಘಾತಗಳು ಸಂಭವಿಸಿದ್ದು, 909 ಜನರು ಪ್ರಾಣ ಕಳೆದುಕೊಂಡಿದ್ದಾರೆ. ಕಳೆದ ವರ್ಷ ನಗರದಲ್ಲಿ 4,095 ಮಾರಣಾಂತಿಕವಲ್ಲದ ಅಪಘಾತಗಳು ವರದಿಯಾಗಿದ್ದು, ಇದರಲ್ಲಿ 4,201 ಜನರು ಗಾಯಗೊಂಡಿದ್ದಾರೆ.
ಮುಖಾಮುಖಿ ಢಿಕ್ಕಿ ಅಪಘಾತಗಳಲ್ಲಿ 2,49,624 ಪ್ರಕರಣಗಳು ದಾಖಲಾಗಿದ್ದರೆ, ಮುಖಾಮುಖಿಯಲ್ಲದ ಅಪಘಾತಗಳಲ್ಲಿ 87,25,321 ಪ್ರಕರಣಗಳು ದಾಖಲಾಗಿವೆ. ಹೆಚ್ಚುವರಿ ಪೊಲೀಸ್ ಕಮಿಷನರ್ (ಸಂಚಾರ) ಕಚೇರಿಯ ಪತ್ರಿಕಾ ಪ್ರಕಟಣೆಯ ಪ್ರಕಾರ ವೈದ್ಯಕೀಯ ತುರ್ತು ಪರಿಸ್ಥಿತಿಗಳಿಗಾಗಿ ರಚಿಸಲಾದ ಗ್ರೀನ್ ಕಾರಿಡಾರ್‌ಗಳ ಸಂಖ್ಯೆ 22 ಆಗಿದ್ದು, ನಗರದ ಸಂಚಾರ ಪೊಲೀಸರು 2023ರಲ್ಲಿ ವಿವಿಧ ಸಂಚಾರ ನಿಯಮ ಉಲ್ಲಂಘನೆಗಾಗಿ 184.83 ಕೋಟಿ ರೂ.ಗಳ ದಂಡವನ್ನು ಸಂಗ್ರಹಿಸಿದ್ದಾರೆ.
ಕಳೆದ ವರ್ಷ ಟ್ರಾಫಿಕ್ ಪೊಲೀಸರು ಸುಮಾರು 7,055 ಕುಡಿದು ವಾಹನ ಚಾಲನೆ ಪ್ರಕರಣಗಳನ್ನು ದಾಖಲಿಸಿದ್ದಾರೆ. ಅಪಘಾತಗಳು, ಕುಡಿದು ವಾಹನ ಚಲಾಯಿಸುವ ಪರಿಣಾಮವಾಗಿ ಸುಮಾರು 16 ಮಂದಿ ಸಾವಿಗೀಡಾಗಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


