ಬೆಳಗಾವಿ: ದುಷ್ಕರ್ಮಿಗಳಿಂದ ಪಂಚಾಯತ್ ಸದಸ್ಯನ ಮನೆ ಮೇಲೆ ದಾಳಿ, ವಾಹನ-ವಸ್ತುಗಳಿಗೆ ಹಾನಿ; ಪ್ರೇಮ ಪ್ರಕರಣ ಕಾರಣ?
ಜಿಲ್ಲೆಯ ನವಗಿ ಗ್ರಾಮದಲ್ಲಿ ನಿನ್ನೆ ಜನವರಿ 1ರ ಹೊಸವರ್ಷ ರಾತ್ರಿ ಸುಮಾರು 30 ಜನ ಮುಸುಕುಧಾರಿ ಗ್ಯಾಂಗ್ ಅಟ್ಟಹಾಸ ಮೆರೆದಿದ್ದು, ಸುತ್ತಮುತ್ತ ನಿವಾಸಿಗಳು ಭಯಭೀತರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಬೆಳಗಾವಿ: ಜಿಲ್ಲೆಯ ನವಗಿ ಗ್ರಾಮದಲ್ಲಿ ನಿನ್ನೆ ಜನವರಿ 1ರ ಹೊಸವರ್ಷ ರಾತ್ರಿ ಸುಮಾರು 30 ಜನ ಮುಸುಕುಧಾರಿ ಗ್ಯಾಂಗ್ ಅಟ್ಟಹಾಸ ಮೆರೆದಿದ್ದು, ಸುತ್ತಮುತ್ತ ನಿವಾಸಿಗಳು ಭಯಭೀತರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಬೆಳಗಾವಿ ಜಿಲ್ಲೆಯ ನವಗಿ ಗ್ರಾಮದಲ್ಲಿ ಆಯುಧಗಳು, ಕತ್ತಿಗಳು ಮತ್ತು ದೊಣ್ಣೆಗಳನ್ನು ಹಿಡಿದು ದುಷ್ಕರ್ಮಿಗಳು ಮುಖ್ಯವಾಗಿ ನಾಲ್ಕು ಮನೆಗಳ ಮೇಲೆ ದಾಳಿ ನಡೆಸಿದ್ದು ಮಾತ್ರವಲ್ಲದೆ ವಾಹನಗಳು ಮತ್ತು ಇತರ ವಸ್ತುಗಳನ್ನು ಹಾನಿಗೊಳಿಸಿದ್ದಾರೆ.
ದಾಳಿಗೆ ಒಳಗಾದವರಲ್ಲಿ ಮಾಜಿ ಮತ್ತು ಹಾಲಿ ಪಂಚಾಯಿತಿ ಸದಸ್ಯರು ಸೇರಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮಾಹಿತಿ ಪಡೆದ ಕರ್ನಾಟಕ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಇಂದು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದರು.
ಈ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಪ್ರೇಮ ಪ್ರಕರಣದ ವಿವಾದವೇ ಈ ಘಟನೆಗೆ ಕಾರಣವಾಗಿರಬಹುದು ಎಂದು ಶಂಕಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


