ರಾಜ್ಯ

ಹುಣಸೂರು: KSRTC ಎಲೆಕ್ಟ್ರಿಕ್ ಬಸ್ ಜೀಪ್ ನಡುವೆ ಭೀಕರ ಅಪಘಾತ; ನಾಲ್ವರ ಸಾವು

ಕೆಎಸ್‌ಆರ್ ಟಿಸಿ ಎಲೆಕ್ಟ್ರಿಕ್ ಪವರ್ ಪ್ಲಸ್ ಬಸ್ ಹಾಗೂ ಜೀಪ್ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿ ನಾಲ್ವರು ಕೂಲಿ ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಹುಣಸೂರು: KSRTC ಎಲೆಕ್ಟ್ರಿಕ್ ಬಸ್ ಜೀಪ್ ನಡುವೆ ಭೀಕರ ಅಪಘಾತ; ನಾಲ್ವರ ಸಾವು
ಅಪಘಾತದ ದೃಶ್ಯ
Published On :

ಹುಣಸೂರು: ಕೆಎಸ್‌ಆರ್ ಟಿಸಿ ಎಲೆಕ್ಟ್ರಿಕ್ ಪವರ್ ಪ್ಲಸ್ ಬಸ್ ಹಾಗೂ ಜೀಪ್ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿ ನಾಲ್ವರು ಕೂಲಿ ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. 

ಇಲ್ಲಿನ ಬೈಪಾಸ್ ರಸ್ತೆಯಲ್ಲಿ ಇಂದು ಬೆಳಿಗ್ಗೆ ಅಪಘಾತ ಸಂಭವಿಸಿದ್ದು ಬಸ್ ಚಾಲಕನಿಗೂ ಗಂಭೀರ ಗಾಯಗಳಾಗಿದೆ. ಬಸ್ ನಲ್ಲಿದ್ದ ಪ್ರಯಾಣಿಕರೆಲ್ಲರೂ ಅದೃಷ್ಟವಶಾತ್ ಸಣ್ಣ ಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. 

ಅಪಘಾತದಲ್ಲಿ ಜೀಪ್ ನಲ್ಲಿದ್ದ ಐವರಿಗೆ ಗಾಯಗೊಂಡಿದ್ದು ಅವರನ್ನು ಸ್ಥಳೀಯ ಹಾಗೂ ಮೈಸೂರು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರಲ್ಲಿ ನಿಂಗರಾಜು ಹಾಗೂ ಕರಿಯಪ್ಪ ಅವರ ಸ್ಥಿತಿ ಚಿಂತಾಜನಕವಾಗಿದೆ. 

ಅಪಘಾತ ಸ್ಥಳಕ್ಕೆ ಹುಣಸೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿ ತನಿಖೆಯನ್ನು ಕೈಗೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.