ರಾಜ್ಯ

ಕಾನೂನು ಕೈಗೆತ್ತಿಕೊಳ್ಳುವವರಿಗೆ ತಕ್ಕ ಶಾಸ್ತಿ ಮಾಡುತ್ತೇವೆ: ತಂಗಡಗಿ

ಕನ್ನಡ ಸಂಸ್ಕೃತಿ ರಕ್ಷಣೆಯ ಹೆಸರಿನಲ್ಲಿ ಕಾನೂನನ್ನು ಕೈಗೆತ್ತಿಕೊಳ್ಳುವುದನ್ನು ಸರ್ಕಾರ ಸಹಿಸುವುದಿಲ್ಲ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ಅವರು ಮಂಗಳವಾರ ಹೇಳಿದರು.

ಕಾನೂನು ಕೈಗೆತ್ತಿಕೊಳ್ಳುವವರಿಗೆ ತಕ್ಕ ಶಾಸ್ತಿ ಮಾಡುತ್ತೇವೆ: ತಂಗಡಗಿ
ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ
Published On :

ಮೈಸೂರು: ಕನ್ನಡ ಸಂಸ್ಕೃತಿ ರಕ್ಷಣೆಯ ಹೆಸರಿನಲ್ಲಿ ಕಾನೂನನ್ನು ಕೈಗೆತ್ತಿಕೊಳ್ಳುವುದನ್ನು ಸರ್ಕಾರ ಸಹಿಸುವುದಿಲ್ಲ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ಅವರು ಮಂಗಳವಾರ ಹೇಳಿದರು.

ಕೆಲ ದಿನಗಳ ಹಿಂದಷ್ಟೇ ಬೆಂಗಳೂರಿನಲ್ಲಿ ಕನ್ನಡ ಪರ ಕಾರ್ಯಕರ್ತರು ಹೋರಾಟ ನಡೆಸಿ, ಹಲವಾರು ಅಂಗಡಿಗಳನ್ನು ಧ್ವಂಸ ಮಾಡಿದ್ದರು, ಘಟನೆ ಸಂಬಂಧ ಹಲವಾರು ಕನ್ನಡ ಪರ ಹೋರಾಟಗಾರರನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.

ಈ ಸಂಬಂಧ ಪ್ರತಿಕ್ರಿಯೆ ನೀಡಿರುವ ಸಚಿವರು, ಕನ್ನಡ, ನಾಡು, ನುಡಿ ಪರವಾದ ಯಾವುದೇ ಹೋರಾಟಗಳಿಗೆ ರಾಜ್ಯ ಸರ್ಕಾರ ಬೆಂಬಲವಾಗಿ ನಿಲ್ಲಲಿದೆ. ಆದರೆ, ಕನ್ನಡ ಸಂಸ್ಕೃತಿ ರಕ್ಷಣೆಯ ಹೆಸರಿನಲ್ಲಿ ಕಾನೂನನ್ನು ಕೈಗೆತ್ತಿಕೊಳ್ಳುವುದನ್ನು ಸರ್ಕಾರ ಸಹಿಸುವುದಿಲ್ಲ ಎಂದು ಹೇಳಿದರು.

ಇದೇ ವೇಳೆ ಮುಸ್ಲಿಂ ಮಹಿಳೆಯರ ವಿರುದ್ಧ ವಾಗ್ದಾಳಿ ನಡೆಸಿದ ಆರ್‌ಎಸ್‌ಎಸ್ ಹಿರಿಯ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಅವರನ್ನು ಬಂಧಿಸದಿರುವ ಬಗ್ಗೆ ಪ್ರತಿಕ್ರಿಯಿಸಿ, ಅವರ ವಿರುದ್ಧವೂ ಕ್ರಮ ತೆಗೆದುಕೊಳ್ಳಲಾಗುವುದು. ಕಾನೂನು ಕೈಗೆತ್ತಿಕೊಳ್ಳುವ ಯಾರನ್ನೂ ಸರ್ಕಾರ ಬಿಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.