ರಾಜ್ಯದಲ್ಲಿ ಇಂದು ಕೊರೋನಾದಿಂದ ಒಬ್ಬರು ಸಾವು, 260 ಮಂದಿಗೆ ಪಾಸಿಟಿವ್
ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಬುಧವಾರ ಕೊರೋನಾದಿಂದ ಒಬ್ಬರು ಮೃತಪಟ್ಟಿದ್ದಾರೆ ಮತ್ತು 260 ಮಂದಿಗೆ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ...

ಬೆಂಗಳೂರು: ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಬುಧವಾರ ಕೊರೋನಾದಿಂದ ಒಬ್ಬರು ಮೃತಪಟ್ಟಿದ್ದಾರೆ ಮತ್ತು 260 ಮಂದಿಗೆ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 1175ಕ್ಕೆ ಏರಿಕೆಯಾಗಿದೆ.
ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 260 ಮಂದಿಗೆ ಕೋವಿಡ್-19 ಪಾಸಿಟಿವ್ ದೃಢಪಟ್ಟಿದೆ. ಸೋಂಕಿನಿಂದ ಕೊಪ್ಪಳ ಜಿಲ್ಲೆಯಲ್ಲಿ ಒಬ್ಬರು ಮೃತಪಟ್ಟಿದ್ದು, ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 1,175ಕ್ಕೆ ಏರಿಕೆಯಾಗಿದೆ.
ಇಂದು ಕೋವಿಡ್ ನಿಂದ 228 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಕಳೆದ 24 ಗಂಟೆಗಳಲ್ಲಿ 7,497 ಮಂದಿಗೆ ಕೊರೋನಾ ಟೆಸ್ಟ್ ಮಾಡಲಾಗಿದೆ. ಪಾಸಿಟಿವಿಟಿ ದರ ಶೇ. 3.46 ರಷ್ಟಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ರಾಜಧಾನಿ ಬೆಂಗಳೂರಿನಲ್ಲಿಯೇ 134 ಜನರಲ್ಲಿ ಕೊರೋನಾ ಸೋಂಕು ಕಾಣಿಸಿಕೊಂಡಿದೆ. ಇನ್ನುಳಿದಂತೆ ಬಾಗಲಕೋಟೆ 4, ಬಳ್ಳಾರಿ 2, ಬೆಂಂಗಳೂರು ಗ್ರಾಮಾಂತರ 20, ಚಾಮರಾಜನಗರ 4, ಚಿಕ್ಕಬಳ್ಳಾಪುರ 4, ಚಿತ್ರದುರ್ಗದಲ್ಲಿ ಎರಡು, ದಕ್ಷಿಣ ಕನ್ನಡ 9, ದಾವಣಗೆರೆ 3, ಧಾರವಾಡ 9, ಗದಗ 1, ಹಾಸನ 2, ಕೋಲಾರ 1, ಕೊಪ್ಪಳ 1, ಮಂಡ್ಯ 8, ಮೈಸೂರು 24, ರಾಯಚೂರು 1, ರಾಮನಗರ 7, ಶಿವಮೊಗ್ಗ 11, ತುಮಕೂರು 6, ಉತ್ತರ ಕನ್ನಡ 4 ಹಾಗೂ ವಿಜಯನಗರ ಜಿಲ್ಲೆಯಲ್ಲಿ ಇಂದು 3 ಕೊವಿಡ್ ಕೇಸ್ ಪತ್ತೆಯಾಗಿದೆ. ಜೊತೆಗೆ ಇವರಿಗೆ ಸೂಕ್ತ ಚಿಕಿತ್ಸೆಯನ್ನು ನೀಡಲಾಗುತ್ತಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


